News Karnataka Kannada
Friday, April 26 2024
ಹಾಸನ

ಚುನಾವಣೆಯಲ್ಲಿ ಪ್ರೀತಂಗೌಡ ಜಯ ಸಾಧಿಸಲಿದ್ದಾರೆ: ಶ್ರೀಕಾಂತ್ ವಿಶ್ವಾಸ

Srikanth confident of Preetham Gowda's victory in elections
Photo Credit : News Kannada

ಹಾಸನ: ನಗರದಲ್ಲಿ ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಕಾಮಗಾರಿಗಳನ್ನು ಪೂರ್ಣಗೊಳಿ ಸುವ ಮೂಲಕ ನಗರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿರು ಶಾಸಕ ಪ್ರೀತಂ ಗೌಡ ಅವರು ಈ ಚುನಾವಣೆಯಲ್ಲಿ ಹೆಚ್ಚು ಮತಗಳಿಂದ ಜಯ ಸಾಧಿಸಲಿದ್ದಾರೆ ಎಂದು ಬಿಜೆಪಿ ಮುಖಂಡ ಶ್ರೀಕಾಂತ್ ವಿಶ್ವಾಸ ವ್ಯಕ್ತಪಡಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಪ್ರೀತಂ ಗೌಡ ಅವರು ಶಾಸಕರಾಗಿ ಅಧಿ ಕಾರವಹಿಸಿಕೊಂಡ ನಂತರ ಎರಡು ವರ್ಷ ಕೊರೋನ ಹಾವಳಿ ಸಂದರ್ಭದಲ್ಲಿ ಬಡವರು ಮಧ್ಯಮ ವರ್ಗದ ಜನರಿಗೆ ಫುಡ್ ಕಿಟ್ ವಿತರಣೆ ಸೇರಿದಂತೆ ಆರ್ಥಿಕ ಸಹಾಯ ಒಣಗಿಸುವ ಮೂಲಕ ನೋವಿಗೆ ಸ್ಪಂದಿಸಿದ್ದಾರೆ.

ನಂತರ ಹಾಸನ ನಗರದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡಿದ್ದು ಸ್ತ್ರೀಶಕ್ತಿ ಸಂಘಗಳಿಗೆ ಸಾಲ ಸೌಲಭ್ಯ, ರಸ್ತೆ , ಒಳಚರಂಡಿ, ಉದ್ಯಾನವನ ನಿರ್ಮಾಣ, ವಿಮಾನ ನಿಲ್ದಾಣ ಕಾಮಗಾರಿಗೆ ಚಾಲನೆ, ರಿಂಗ್ ರಸ್ತೆ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯವನ್ನು ಒದಗಿಸಿದ್ದಾರೆ ಎಂದರು .

ರಾಜ್ಯದ ೨೨೪ ವಿಧಾನಸಭಾ ಸದಸ್ಯರಲ್ಲಿಯೇ ಮಾದರಿ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದು ಹಾಸನ ನಗರ ಸೇರಿದಂತೆ ಗ್ರಾಮೀಣ ಪ್ರದೇಶದಲ್ಲಿ ಸರ್ವಾಂ ಗೀಣ ಅಭಿವೃದ್ಧಿ ಮಾಡಿದ್ದಾರೆ. ಆದ್ದರಿಂದ ವಿಧಾನಸಭೆ ಚುನಾವಣೆ ಯಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದರು .

ಕಳೆದ ಇಪ್ಪತ್ತು ವರ್ಷಗಳಿಂದ ಕನಿಷ್ಠ ಸೌಲಭ್ಯಗಳಿಂದ ವಂಚಿತ ರಾಗಿದ್ದ ಜನರಿಗೆ ಅಕ್ರಮ ಸಕ್ರಮ ಯೋಜನೆ ಅಡಿ ೬,೦೦೦ ಮಂದಿಗೆ ಹಕ್ಕುಪತ್ರ ವಿತರಣೆ ಮಾಡಿದ್ದಾರೆ. ನಗರಸಭೆ ವ್ಯಾಪ್ತಿಗೆ ೨೫ ಗ್ರಾಮಗಳನ್ನು ಸೇರಿಸಲು ಸಚಿವ ಸಂಪುಟದಿಂದ ಅನುಮೋದನೆ ಪಡೆದು ಉತ್ತಮವಾದ ಕೆಲಸವನ್ನು ಮಾಡಿದ್ದು ವಸತಿ ಯೋಜನೆ ಅಡಿ ೧ ಸಾವಿರ ಮನೆಗಳ ನಿರ್ಮಾಣ ಮಾಡಿಕೊಟ್ಟಿದ್ದಾರೆ.

ಶಿಕ್ಷಣ ಕ್ಷೇತ್ರದ ಬೆಳವಣಿಗೆಗೂ ಒತ್ತು ನೀಡಿದ್ದು ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳ ಪಡೆದ ನೂರಾರು ವಿದ್ಯಾರ್ಥಿಗಳನ್ನು ಸನ್ಮಾ ನಿಸಿ ಮುಂದಿನ ವಿದ್ಯಾಭ್ಯಾಸಕ್ಕೆ ಪ್ರೋ ತ್ಸಾಹ ನೀಡಿದ್ದಾರೆ. ರಾಜ್ಯದಲ್ಲಿಯೆ ಮಾದರಿಯಾಗಿ ನಗರದಲ್ಲಿ ಫುಡ್ ಕೋರ್ಟ್ ನಿರ್ಮಾಣ ಮಾಡುವ ಮೂಲಕ ಬೀದಿ ಬದಿ ವ್ಯಾಪಾರಿ ಗಳು ಗೌರವಯು ತವಾಗಿ ವ್ಯಾಪಾರ ನಡೆಸಲು ಕಾರಣರಾಗಿದ್ದಾರೆ ಎಂದರು.

ಶಾಸಕರ ಅಭಿವೃದ್ಧಿಗೆ ಮೆಚ್ಚಿ ಬಿಜೆಪಿ ಪಕ್ಷವನ್ನು ಸೇರ್ಪ ಡೆಗೊಂಡಿದ್ದು ಮುಂದೆಯೂ ಸಹ ಪಕ್ಷದಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡಲಿದ್ದೇನೆ, ಬೇರೆ ಪಕ್ಷಕ್ಕೆ ಸೇರುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸತ್ಯಮಂಗಲದ ರಾಜೇಶ್, ಗಿರೀಶ್, ಅಣ್ಣಪ್ಪ ಶೆಟ್ಟರ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು