News Kannada
Sunday, March 03 2024
ಮೈಸೂರು

ದಸರಾ ಉದ್ಘಾಟನೆಗೆ ಅವಕಾಶ ದೊರೆತಿರುವುದು ನನ್ನ ಸೌಭಾಗ್ಯ: ಹಂಸಲೇಖ

I am fortunate to have got the opportunity to inaugurate Dasara: Hamsalekha
Photo Credit : Facebook

ಮೈಸೂರು: ಈ ಬಾರಿಯ ದಸರಾ ಉತ್ಸವವನ್ನು ಹಂಸಲೇಖ ಉದ್ಘಾಟಿಸಲಿದ್ದಾರೆ. ಈ ಕುರಿತು ಹಂಸಲೇಖ ಮಾತನಾಡಿದ್ದಾರೆ. ದಸರಾ ಉತ್ಸವ ಉದ್ಘಾಟನೆಗೂ ಮುನ್ನ ಮುನ್ನಾ ಶ್ರೀ ದೇಶಿಕೇಂದ್ರ ಸ್ವಾಮೀಜಿಯವರ ಆಶೀರ್ವಾದ ಪಡೆಯುತ್ತಿರುವುದು ನನ್ನ ಸೌಭಾಗ್ಯ ಎಂದು ಅವರು ಹೇಳಿದ್ದಾರೆ.

ಶ್ರೀ ಸುತ್ತೂರು ಕ್ಷೇತ್ರಕ್ಕೆ ಶನಿವಾರ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು, ಮೈಸೂರು ದಸರಾ ಮಹೋತ್ಸವವು ಕನ್ನಡಿಗರ ನಾಡು, ನುಡಿ ಸಂಸ್ಕೃತಿಯ ಸಂಕೇತವಾಗಿದೆ. ಸಮಸ್ತ ಕನ್ನಡಿಗರ ಪ್ರತಿನಿಧಿಯಾಗಿ ನಾನು ಈ ಮಹೋತ್ಸವವನ್ನು ಉದ್ಘಾಟಿಸುತ್ತಿದ್ದೇನೆ. ಒಬ್ಬ ಕಲಾವಿದನಾಗಿ ಉದ್ಘಾಟಿಸುತ್ತಿರುವುದು ನನಗೆ ಧನ್ಯತಾಭಾವ ಮೂಡಿಸುತ್ತಿದೆ ಎಂದರು.

ರಂಗಭೂಮಿಯಿಂದ ಬಂದ ನಾನು ನಿಮ್ಮೆಲ್ಲರ ಆಶೀರ್ವಾದದಿಂದ ಇಂದು ಸಿನಿಮಾ ಸಂಗೀತ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದೇನೆ. ಸಂಗೀತವು ವಿಜ್ಞಾನದ ಗೆಳೆಯನೂ ಹೌದು, ಶ್ರದ್ಧೆ, ಭಕ್ತಿ ಮತ್ತು ಆಸಕ್ತಿಯಿದ್ದರೆ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಪ್ರತಿಭೆ ಇರುವವರಿಗೆ ಅನುಕೂಲವನ್ನು ಮಾಡಿಕೊಟ್ಟು ಅವರ ಸಾಧನೆಗೆ ಸಹಕರಿಸಬೇಕು ಎಂದು ಅವರು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು