News Kannada
Friday, March 01 2024
ಮಡಿಕೇರಿ

ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜಕೀಯ ಸರಿಯಲ್ಲ: ಸಚಿವ ಎಸ್.ಅಂಗಾರ

Photo Credit :

ಮಡಿಕೇರಿ: ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ವಿಷಯದಲ್ಲಿ ರಾಜಕೀಯ ಮಾಡುವುದು ಸರಿಯಲ್ಲವೆಂದು ಬಂದರು ಮತ್ತು ಮೀನುಗಾರಿಕಾ ಸಚಿವ ಎಸ್.ಅಂಗಾರ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಎಲ್ಲಾ ಹದಗೆಟ್ಟು ಹೋಗಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಕಾಂಗ್ರೆಸ್ ಅವರ ಸರ್ಕಾರದ ಸಂದರ್ಭ ರಾಜ್ಯದಲ್ಲಿ ಏನು ನಡೆದಿತ್ತು ಎನ್ನುವುದು ಎಲ್ಲರಿಗೆ ಗೊತ್ತಿದೆ. ಅದನ್ನು ಸ್ವಲ್ಪ ಅವರು ಯೋಚನೆ ಮಾಡಲಿ. ಈಗ ನಮ್ಮ ಸರ್ಕಾರವಿದೆ ಕಾನೂನು ಸುವ್ಯವಸ್ಥೆಗೆ ಏನು ಮಾಡಬೇಕೋ ಅದನ್ನು ನಾವು ಮಾಡುತ್ತೇವೆ ಎಂದರು. ಕಾಂಗ್ರೆಸ್‌ನವರು ನನ್ನ ಮೇಲೆ ಅತ್ಯಾಚಾರ ಮಾಡುತ್ತಿದ್ದಾರೆ ಎನ್ನುವ ಗೃಹಸಚಿವ ಆರಗ ಜ್ಞಾನೇಂದ್ರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನಾನು ವಿಚಾರಿಸುತ್ತೇನೆ ಎಂದು ಸಚಿವರು ಪ್ರತಿಕ್ರಿಯಿಸಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು