News Karnataka Kannada
Saturday, April 20 2024
Cricket
ಮಡಿಕೇರಿ

ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನ, ಇಬ್ಬರ ಬಂಧನ

Aame Turtiles
Photo Credit :

ಮಡಿಕೇರಿ:  ಅಳಿವಿನ ಅಂಚಿನಲ್ಲಿರುವ ಅಪರೂಪದ ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

ಜಿಯಾವುಲ್ಲಾ ಖಾನ್ ಮತ್ತು ಸನಾವುಲ್ಲಾ ಖಾನ್ ಎಂಬವರೇ ಬಂಧಿತ ಆರೋಪಿಗಳಉ. ಇವರಿಂದ ಒಂದು ಜೀವಂತ ನಕ್ಷತ್ರ ಆಮೆಯನ್ನು ವಶಕ್ಕೆ ಪಡೆಯಲಾಗಿದೆ.

ಮಡಿಕೇರಿ-ವೀರಾಜಪೇಟೆ ರಾಜ್ಯ ಹೆದ್ದಾರಿಯ ಶಕ್ತಿನಗರದ ಮೇಕೇರಿ ಬಸ್ಸು ತಂಗುದಾಣದ ಬಳಿ ಇಬ್ಬರು ವ್ಯಕ್ತಿಗಳು ನಕ್ಷತ್ರ ಆಮೆಯನ್ನು ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಠಾಣೆಗೆ ಖಚಿತ ಮಾಹಿತಿ ಲಭಿಸಿತ್ತು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪೊಲೀಸ್ ಅಧೀಕ್ಷ ಚಂದ್ರಕಾಂತ್ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು. ಸವಿ, ಹೆಡ್‌ ಕಾನ್ಸ್‌ಟೇಬಲ್‌ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್‌, ಮೋಹನ ಮತ್ತು ಕಾನ್ಸ್‌ಟೇಬಲ್‌ಗಳಾದ ಸ್ವಾಮಿ ಮತ್ತು ಮಂಜುನಾಥ ಅವರುಗಳು ಕಾರ್ಯಾಚರಣೆ ನಡೆಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು