News Karnataka Kannada
Thursday, March 28 2024
Cricket
ಮಡಿಕೇರಿ

ಮಡಿಕೇರಿ: ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದ ಸುಪ್ರಿಂಕೋರ್ಟ್ ನ್ಯಾಯಮೂರ್ತಿ

Photo Credit :

ಮಡಿಕೇರಿ : ಸರ್ಕಾರದ ಅಭಿವೃದ್ಧಿ ಕಾರ್ಯಗಳು ಮತ್ತು ವಿವಿಧ ಸೌಲಭ್ಯಗಳ ಕುರಿತಂತೆ ಸಾರ್ವಜನಿಕರಿಗೆ ಅರಿವು ಮೂಡಿಸುವ ಉದ್ದೇಶದಿಂದ ನಗರದ ಗೌಡ ಸಮಾಜದ ಪ್ರವೇಶ ದ್ವಾರದ ಬಳಿ ಏರ್ಪಡಿಸಲಾಗಿರುವ ವಸ್ತು ಪ್ರದರ್ಶನ ಗಮನಸೆಳೆಯುತ್ತಿದೆ.

ಕಾನೂನು ಸೇವಾ ಪ್ರಾಧಿಕಾರ, ವಕೀಲರ ಸಂಘ, ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಹೀಗೆ ವಿವಿಧ ಇಲಾಖೆಗಳ ಸಹಕಾರದಲ್ಲಿ ವಸ್ತು ಪ್ರದರ್ಶನವನ್ನು ಏರ್ಪಡಿಸಲಾಗಿದ್ದು, ಕೃಷಿ ಇಲಾಖೆ ಮಳಿಗೆ ಸೇರಿದಂತೆ  ವಿವಿಧ ಇಲಾಖೆಗಳು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕರಪತ್ರ, ಬಿತ್ತಿ ಪತ್ರ ಒಳಗೊಂಡ ಮಾಹಿತಿಯನ್ನು ಸಾರ್ವಜನಿಕರಿಗೆ ನೀಡಲಾಗುತ್ತಿದೆ.

ವಸ್ತು ಪ್ರದರ್ಶನಕ್ಕೆ ಭೇಟಿ ನೀಡಿದ ಸುಪ್ರಿಂಕೋರ್ಟ್ ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರು ವಸ್ತು ಪ್ರದರ್ಶನ ಮಳಿಗೆ ವೀಕ್ಷಿಸಿ, ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಅವರು ಸರ್ಕಾರದ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಎಲ್ಲೆಡೆ ಇಂತಹ ವಸ್ತು ಪ್ರದರ್ಶನ ಏರ್ಪಡಿಸುವಂತಾಗಬೇಕು. ಸರ್ಕಾರದ ಹಲವು ಅಭಿವೃಧಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಿ, ಸರ್ಕಾರದ ಯೋಜನೆಗಳು ಸಫಲವಾಗಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ, ಕೃಷಿ, ತೋಟಗಾರಿಕೆ, ಪಶುಪಾಲನೆ, ಮೀನುಗಾರಿಕೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಸಮಾಜ ಕಲ್ಯಾಣ, ಸಮಗ್ರ ಗಿರಿಜನ ಅಭಿವೃದ್ಧಿ, ಹಿಂದುಳಿದ ವರ್ಗಗಳ ಕಲ್ಯಾಣ, ಆಯುಷ್, ಯುವ ಸಬಲೀಕರಣ ಮತ್ತು ಕ್ರೀಡೆ, ಜವಳಿ ಮತ್ತು ಕೈಮಗ್ಗ, ಕೈಗಾರಿಕೆ, ಸಹಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮಕ್ಕಳ ರಕ್ಷಣಾ ಘಟಕ, ವಿಕಲಚೇತನರ ಇಲಾಖೆ, ನಗರಸಭೆ, ಆಯುಷ್, ಸಾರ್ವಜನಿಕ ಶಿಕ್ಷಣ, ವಿವಿಧ ಅಭಿವೃದ್ಧಿ ನಿಗಮಗಳು ಹೀಗೆ ಹಲವು ಇಲಾಖೆಗಳು ವಸ್ತು ಪ್ರದರ್ಶನದಲ್ಲಿ ಮಳಿಗೆ ತೆರೆಯುವ ಮೂಲಕ ಗಮನಸೆಳೆದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು