ಮಡಿಕೇರಿ : ಜಿಲ್ಲೆಯಲ್ಲಿ ಶನಿವಾರ 45 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 545 ಸಕ್ರಿಯ ಪ್ರಕರಣಗಳಾಗಿದೆ. ಒಟ್ಟು 407ಮರಣ ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇ.1.22 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ. ಮಡಿಕೇರಿ ತಾಲೂಕಿನಲ್ಲಿ 20, ಸೋಮವಾರಪೇಟೆ ತಾಲೂಕಿನಲ್ಲಿ 9 ಮತ್ತು ವಿರಾಜಪೇಟೆ ತಾಲೂಕಿನಲ್ಲಿ 16 ಹೊಸ ಕೋವಿಡ್-19 ಪ್ರಕರಣಗಳು ಕಂಡು ಬಂದಿದೆ. ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 33,128 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 32,176 ಮಂದಿ ಗುಣಮುಖರಾಗಿದ್ದಾರೆ.
ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣಗಳು 545
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.