News Kannada
Saturday, March 25 2023

ಮಡಿಕೇರಿ

ಕೊಡಗು: ಕೊರೋನಾ ಸೋಂಕಿನ ಏರಿಳಿತದ ನಡುವೆಯೇ ಇದೀಗ ಇಲಿ ಜ್ವರ

Photo Credit :

ಕೊಡಗು: ಜಿಲ್ಲೆಯಲ್ಲಿ ಕೊರೋನಾ ಸೋಂಕಿನ ಏರಿಳಿತದ ನಡುವೆಯೇ ಇದೀಗ ಇಲಿ ಜ್ವರ, ಡೆಂಗ್ಯೂ ಹಾಗೂ ಚಿಕೂನ್ ಗುನ್ಯಾ ಪ್ರಕರಣಗಳೂ ವರದಿಯಾಗುತ್ತಿದ್ದು, ಸಾರ್ವಜನಿಕರಲ್ಲಿ ಆತಂಕ ಸೃಷ್ಟಿಸಿದೆ.

ಜಿಲ್ಲೆಯಲ್ಲಿ ಇದುವರೆಗೆ 14 ಇಲಿಜ್ವರ ಪ್ರಕರಣಗಳಲ್ಲದೆ, 22 ಡೆಂಗ್ಯೂ ಹಾಗೂ 2 ಚಿಕೂನ್‍ ಗುನ್ಯ ಪ್ರಕರಣಗಳೂ ಪತ್ತೆಯಾಗಿರುವುದಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೆಂಕಟೇಶ್ ಅವರು ತಿಳಿಸಿದ್ದಾರೆ.
ಜಿಲ್ಲೆಯ ಮೂರು ತಾಲೂಕುಗಳಲ್ಲೂ ಇಲಿಜ್ವರ, ಡೆಂಗ್ಯೂ ಚಿಕೂನ್‍ಗುನ್ಯ ಪ್ರಕರಣಗಳು ಕಂಡು ಬರುತ್ತಿವೆ. ಮಡಿಕೇರಿ ತಾಲೂಕಿನಲ್ಲಿ 4 ಸೋಮವಾರಪೇಟೆ ಹಾಗೂ ವೀರಾಜಪೇಟೆ ತಾಲೂಕುಗಳಲ್ಲಿ ತಲಾ 5 ಪ್ರಕರಣಗಳು ಪತ್ತೆಯಾಗಿರುವುದಾಗಿ ಅವರು ಹೇಳಿದ್ದಾರೆ.

ರೋಗ ನಿಯಂತ್ರಣಕ್ಕೆ ಈಗಾಗಲೇ ಆರೋಗ್ಯ ಇಲಾಖೆ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿದ್ದು, ಮನೆಯ ಸುತ್ತಮುತ್ತಲಿನ ಆವರಣವನ್ನು ಸ್ವಚ್ಛವಾಗಿಟ್ಟುಕೊಳ್ಳುವಂತೆ ಸೂಚಿಸಿದೆ.

ಪ್ರಾಣಿಗಳಿಂದ ಮಾನವನಿಗೆ ಹರಡುವ ರೋಗಗಳಲ್ಲಿ ಇದೂ ಒಂದಾಗಿದ್ದು, ಈ ರೋಗ ಕೇವಲ ಮನುಷ್ಯರಲ್ಲಷ್ಟೇ ಅಲ್ಲದೆ ದನ, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಬೆಕ್ಕು ಸೇರಿದಂತೆ ವನ್ಯಮೃಗಗಳು ಹೀಗೆ ಬಹುತೇಕ ಪ್ರಾಣಿಗಳನ್ನೂ ಬಾಧಿಸುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ವೆಂಕಟೇಶ್ ಮಾಹಿತಿ ನೀಡಿದ್ದಾರೆ.

See also  ಕೊಡಗು: ಕೊರೋನಾ ಸೋಂಕು, ಸೋಮವಾರ ಪಾಸಿಟಿವಿಟಿ ದರ ಶೇ.2.60ರಷ್ಟ ಏರಿಕೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು