News Kannada
Wednesday, December 07 2022

ಮಡಿಕೇರಿ

ಗೋಣಿಮರೂರು: 10ಲಕ್ಷ ರೂ. ವೆಚ್ಚದ ಕಾಂಕ್ರಿಟ್ ರಸ್ತೆ ಉದ್ಘಾಟನೆ

Photo Credit :

ಸೋಮವಾರಪೇಟೆ: ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ನಿರ್ಮಿಸಿದ ಕಾಂಕ್ರಿಟ್ ರಸ್ತೆಯನ್ನು ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಕಳೆದ ಹಲವಾರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಗೋಣಿಮರೂರು ಗ್ರಾಮದ ಬಸವೇಶ್ವರ ದೇವಾಲಯದ ರಸ್ತೆಯನ್ನು 10 ಲಕ್ಷ ರೂ.ವೆಚ್ಚದಲ್ಲಿ ಕಾಂಕ್ರಿಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಿ ಸಾರ್ವಜನಿಕರ ಉಪಯೋಗಕ್ಕಾಗಿ ಒದಗಿಸಲಾಯಿತು.

ಈ ಸಂದರ್ಭ ಜಿಲ್ಲಾ ಬಿ.ಜೆ.ಪಿ. ಮಾಜಿ ಅಧ್ಯಕ್ಷ ಬಿ.ಬಿ.ಭಾರತೀಶ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಎಂ.ವಿಜಯ, ಪಟ್ಟಣ ಪಂಚಾಯಿತಿ ಅಧ್ಯಕ್ಷ ಚಂದ್ರು, ಗ್ರಾಮ ಪಂಚಾಯಿತಿ ಸದಸ್ಯ ವಿರೂಪಾಕ್ಷ, ತಾಲೂಕು ಬಿ.ಜೆ.ಪಿ.ಅಧ್ಯಕ್ಷ ಮನುಕುಮಾರ್ ರೈ, ದೇವಾಲಯ ಸಮಿತಿ ಅಧ್ಯಕ್ಷ ಜಿ.ಈ.ಪುಟ್ಟಪ್ಪ, ಉಪಾಧ್ಯಕ್ಷ ಎ. ಬಿ.ಧರ್ಮಪ್ಪ, ಕಾರ್ಯದರ್ಶಿ ಜಿ.ಎಂ.ಮೋಹನ್ ಮುಂತಾದವರು ಹಾಜರಿದ್ದರು.

ಲಕ್ಷ ಕಂಠಗಳ ಗೀತ ಗಾಯನ: ಕರ್ನಾಟಕ ಸರ್ಕಾರದ ಕನ್ನಡಕ್ಕಾಗಿ ನಾವು ಅಭಿಯಾನದ ‘ಮಾತಾಡ್ ಮಾತಾಡ್ ಕನ್ನಡ’ ಘೋಷಣೆಯೊಂದಿಗೆ ಲಕ್ಷ ಕಂಠಗಳ ಗೀತಗಾಯನ ಕಾರ್ಯಕ್ರಮದ ಅಂಗವಾಗಿ ಅ.28ರಂದು ಸಮೂಹ ಗೀತಗಾಯನ ನಡೆಯಲಿದೆ ಎಂದು ಕೊಡಗು ಜಿಲ್ಲಾ ಕನ್ನಡ ಜಾಗೃತಿ ಸಮಿತಿ ಸದಸ್ಯ ಎಸ್.ಮಹೇಶ್ ತಿಳಿಸಿದ್ದಾರೆ.

ಕನ್ನಡ ಸಂಸ್ಕೃತಿ ಇಲಾಖೆ, ಕನ್ನಡ ಅಭಿವೃದ್ಧಿ ಪ್ರಾಧಿಕಾರ, ಕನ್ನಡ ಜಾಗೃತಿ ಸಮಿತಿ, ತಾಲೂಕು ಆಡಳಿತ, ರಾಷ್ರ್ಟಿಯ ಹಬ್ಬಗಳ ಆಚರಣಾ ಸಮಿತಿ, ಶಾಲಾ ಕಾಲೇಜುಗಳು ಹಾಗೂ ಎಲ್ಲಾ ಕನ್ನಡಪರ ಸಂಘಟನೆಗಳ ಸಂಯುಕ್ತಾಶ್ರಯದಲ್ಲಿ ಅಂದು ಬೆಳಗ್ಗೆ 10.30ಕ್ಕೆ ಸೋಮವಾರಪೇಟೆಯ ಜೆ.ಸಿ.ವೇದಿಕೆಯಲ್ಲಿ ಸಮೂಹ ಗಾಯನ ಕಾರ್ಯಕ್ರಮ ಆಯೋಜಿಸಲಾಗಿದ್ದು, ಈ ಕಾರ್ಯಕ್ರಮದಲ್ಲಿ ಎಲ್ಲಾ ಕನ್ನಡಾಭಿಮಾನಿಗಳು ಪಾಲ್ಗೊಳ್ಳಬೇಕೆಂದು ಅವರು ಮನವಿ ಮಾಡಿದ್ದಾರೆ.

ಸುಗಮ‌ ಸಂಗೀತ ಕಾರ್ಯಕ್ರಮ: ಕನ್ನಡ ರಾಜ್ಯೋತ್ಸವ ಹಾಗೂ ಕನ್ನಡಕ್ಕಾಗಿ ನಾನು ಅಭಿಯಾನದ ಅಂಗವಾಗಿ ಬುಧವಾರ (ಅ.27 ) ಬೆಳಗ್ಗೆ 11ಗಂಟೆಗೆ ಪಟ್ಟಣದ ಸರಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಶಾಂತಳ್ಳಿ ಗಣೇಶ್ ಮತ್ತು ತಂಡದವರಿಂದ ಸುಗಮ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಹೇಶ್ ಅವರು ತಿಳಿಸಿದ್ದಾರೆ.

See also  ದೌರ್ಜನ್ಯ ಕಾಯ್ದೆಯಡಿ ಸುಳ್ಳು ಪ್ರಕರಣ‌ ದಾಖಲು : ರೈತರ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು