ಸೋಮವಾರಪೇಟೆ: ವಿದ್ಯುತ್ ಸ್ಪರ್ಶಿಸಿ ಯುವಕನೊಬ್ಬ ಸಾವಿಗೀಡಾದ ಘಟನೆ ಪಟ್ಟಣದಲ್ಲಿ ಶನಿವಾರ ರಾತ್ರಿ ನಡೆದಿದೆ.
ಪಟ್ಟಣ ರೇಂಜರ್ಸ್ ಬ್ಲಾಕ್ ನಿವಾಸಿ ಲಕ್ಷ್ಮಣ ಎಂಬವರ ಪುತ್ರ ಮಂಜು(28) ಮೃತ ಯವಕ.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿರುವ ಹೈಮಾಸ್ಟ್ ವಿದ್ಯುತ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ ಈ ದುರ್ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.