ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾನುವಾರ ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಮತ್ತೆ ಏರಿಕೆಯಾಗಿದೆ. ಕಳೆದ 24ಗಂಟೆಗಳಲ್ಲಿ ಮಡಿಕೇರಿ ತಾಲೂಕಿನಲ್ಲಿ 10, ಸೋಮವಾರಪೇಟೆ 15ಹಾಗೂ ವೀರಾಜಪೇಟೆ ತಾಲೂಕಿನಲ್ಲಿ 17 ಹೊಸ ಪ್ರಕರಣಗಳು ಪತ್ತೆಯಾಗಿವೆ.
ಇದರೊಂದಿಗೆ ಜಿಲ್ಲೆಯಲ್ಲಿನ ಕೊರೋನಾ ಸೋಂಕಿತರ ಒಟ್ಟು ಸಂಖ್ಯೆ 47,511ರಷ್ಟಾಗಿದ್ದು, ಕಳೆದ 24ಗಂಟೆಗಳಲ್ಲಿ 28ಮಂದಿ ಗುಣಮುಖರಾಗುವುದರೊಂದಿಗೆ ಇದುವರೆಗೆ ಒಟ್ಟು 46,355 ಮಂದಿ ಸೋಂಕು ಮುಕ್ತರಾಗಿದ್ದಾರೆ.ಅಲ್ಲದೆ 448 ಮಂದಿ ಸಾವಿಗೀಡಾಗಿದ್ದಾರೆ.
ಜಿಲ್ಲೆಯಲ್ಲಿ ಪ್ರಸಕ್ತ 708ಸಕ್ರಿಯ ಪ್ರಕರಣಗಳು ಹಾಗೂ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 85ರಷ್ಟಿದ್ದು, ಪಾಸಿಟಿವಿಟಿ ದರ ಶೇ. 2.56ರಷ್ಟಿದೆ ಎಂದು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ತಿಳಿಸಿದ್ದಾರೆ.