News Kannada
Friday, September 30 2022

ಮಡಿಕೇರಿ

ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ: ಸಿಎಂ ಜತೆ ಚರ್ಚಿಸಿದ ಕಟೀಲ್ - 1 min read

Photo Credit :

 ಕೊಡಗು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಖುದ್ದು ಭೇಟಿಯಾದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತು ಚರ್ಚಿಸಿದರು.

ಯುನೈಟೆಡ್ ಕೊಡವ ಆರ್ಗನೈಝೇಷನ್ ಸಂಘಟನೆಯ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕಿದಿಯೂರು ಉದಯಕುಮಾರ್ ಶೆಟ್ಟಿ ಹಾಗೂ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯ ತೇಲಪಂಡ ಶಿವಕುಮಾರ್ ನಾಣಯ್ಯ ಮತ್ತಿತರರ ನಿಯೋಗದ ಬೇಡಿಕೆ ಹಿನ್ನೆಲೆಯಲ್ಲಿ ಕಟೀಲ್ ಅವರು ಸಿಎಂ ಅವರನ್ನು ಭೇಟಿ ಮಾಡಿದರು.

ಲಿಖಿತ ಮನವಿ ಸಲ್ಲಿಸಿ ನಿಗಮ ಸ್ಥಾಪಿಸುವ ಕುರಿತು ಪಸಕ್ತ ಸಾಲಿನ ಮುಂಗಡ ಪತ್ರದಲ್ಲಿ ಪರಿಗಣಿಸುವಂತೆ ಕೋರಿಕೊಂಡರು. ಇದೇ ಸಂದರ್ಭ ಸಂಸದ ಪ್ರತಾಪಸಿಂಹ ಅವರು ಕೂಡಾ ನಿಗಮ ಸ್ಥಾಪನೆಗಾಗಿ ಪ್ರತ್ಯೇಕ ಮನವಿ ಸಲ್ಲಿಸಿದರು.

ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬೊಮ್ಮಾಯಿ ಅವರು ಈಗಾಗಲೇ ಈ ಕುರಿತಂತೆ ಕೊಡವರು ಬೇಡಿಕೆ ಸಲ್ಲಿಸಿದ್ದಾರೆ. ಕೊಡಗಿನ ಶಾಸಕರೂ ಚರ್ಚಿಸಿದ್ದಾರೆ. ಕೊಡವ ಜನಾಂಗದ ಹಿತದೃಷ್ಟಿಯಿಂದ ನೂತನ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯ ಕುರಿತಂತೆ ಪ್ರಸಕ್ತ ಬಜೆಟ್’ನಲ್ಲಿ ಪರಿಗಣಿಸುವುದಾಗಿ ಭರವಸೆ ನೀಡಿದರು.

ಇದಕ್ಕೂ ಮೊದಲು ನಿಯೋಗವು ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ನಳಿನ್ ಕುಮಾರ್ ಕಟೀಲ್ ಅವರನ್ನು ಸಂಸದ ಪ್ರತಾಪಸಿಂಹ ಅವರೊಂದಿಗೆ ಭೇಟಿ ಮಾಡಿ ಸುದೀರ್ಘ ಚರ್ಚೆ ನಡೆಸಿತು. ಈ ಸಂದರ್ಭ ಸಂಸದರು ಕೊಡವ ಅಭಿವೃದ್ಧಿ ನಿಗಮದ ಅನಿವಾರ್ಯತೆ ಕುರಿತಂತೆ ರಾಜ್ಯಾಧ್ಯಕ್ಷರಿಗೆ ಮನವರಿಕೆ ಮಾಡಿದರು.

ಮಂಜು ಚಿಣ್ಣಪ್ಪ ಅವರು ನಿಗಮದ ಬೇಡಿಕೆ ಕುರಿತಂತೆ ಮಾಹಿತಿ ನೀಡಿದರು. ತೇಲಪಂಡ ಶಿವಕುಮಾರ್ ನಾಣಯ್ಯ ಮಾತನಾಡಿ ನಿಗಮ ಸ್ಥಾಪನೆಯಿಂದ ಕೊಡವರ ಅಭಿವೃದ್ಧಿಯಾಗಲಿದೆ ಎಂದರು.

ನಳಿನ್ ಕುಮಾರ್ ಕಟೀಲ್ ಮಾತನಾಡಿ ಗೊಣಿಕೊಪ್ಪಲಿನ ಮಂದ್ ನಮ್ಮೆಯಲ್ಲಿ ಪಾಲ್ಗೊಂಡಿದ್ದನ್ನು ಸ್ಮರಿಸಿದರು. ತಮಗೆ ಕೊಡವರ ಬಗ್ಗೆ ಅತೀವ ಗೌರವ ಇದೆ, ಕೊಡವರ ಒಳಿತಿಗಾಗಿ ಎಲ್ಲಾ ಸಂದರ್ಭದಲ್ಲಿಯೂ ಜೊತೆಗಿರುವುದಾಗಿ ತಿಳಿಸಿದರು.
ನಿಯೋಗದಲ್ಲಿ ಕಳ್ಳಿಚಂಡ ರಾಬಿನ್ ಸುಬ್ಬಯ್ಯ, ಕಾಟಿಮಾಡ ಗಿರಿ ಅಯ್ಯಪ್ಪ, ನೆಲ್ಲಮಕ್ಕಡ ಮಾದಯ್ಯ ಮತ್ತಿತರರು ಇದ್ದರು.

See also  ತಲಕಾವೇರಿ - ಭಾಗಮಂಡಲ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯಿಂದ ಕೊಡವರನ್ನು ದೂರ ಇಡಲು ಷಡ್ಯಂತ್ರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12792
NewsKannada

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು