News Kannada
Friday, July 01 2022

ಮಡಿಕೇರಿ

ಭಾಗಮಂಡಲ ಅವ್ಯವಸ್ಥೆಯ ಆಗರವಾಗಿದೆ: ವೀಣಾ ಅಚ್ಚಯ್ಯ ಅಸಮಾಧಾನ - 1 min read

Photo Credit : By Author

ಮಡಿಕೇರಿ, ಜೂ.21: ಕೊಡಗಿನ ಕುಲದೇವತೆ ಕಾವೇರಿ ಮಾತೆಯ ಉಗಮ ಸ್ಥಾನವನ್ನು ಸರಕಾರ ಸಂಪೂರ್ಣವಾಗಿ ಕಡೆಗಣಿಸಿದೆ. ಮೇಲುಸೇತುವೆ ನಿರ್ಮಾಣ ಕಾರ್ಯ ಪೂರ್ಣಗೊಳ್ಳದೆ ಇರುವುದರಿಂದ ಭಾಗಮಂಡಲ ಅವ್ಯವಸ್ಥೆಯ ಆಗರವಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯರಾದ ಶಾಂತೆಯಂಡ ವೀಣಾ ಅಚ್ಚಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾರ್ವಜನಿಕರು ಹಾಗೂ ಭಕ್ತರ ದೂರಿನ ಹಿನ್ನೆಲೆ ಭಾಗಮಂಡಲಕ್ಕೆ ಭೇಟಿ ನೀಡಿ ಮೇಲುಸೇತುವೆ ಕಾಮಗಾರಿ ಪರಿಶೀಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಳೆಗಾಲದಲ್ಲಿ ಗ್ರಾಮಸ್ಥರಿಗೆ ಹಾಗೂ ಭಕ್ತಾಧಿಗಳಿಗೆ ಸಹಕಾರಿಯಾಗುವ ನಿಟ್ಟಿನಲ್ಲಿ ಕಾಂಗ್ರೆಸ್ ಸರಕಾರದ ಆಡಳಿತಾವಧಿಯಲ್ಲಿ ಸೇತುವೆ ಯೋಜನೆಯನ್ನು ರೂಪಿಸಿ ಕಾಮಗಾರಿ ಆರಂಭಿಸಲಾಗಿತ್ತು. ಆದರೆ ಇಂದು ಕೊಡಗಿನ ಬಿಜೆಪಿ ಪ್ರತಿನಿಧಿಗಳು ಸೇತುವೆ ನಿರ್ಮಾಣ ಕಾರ್ಯವನ್ನು ಪೂರ್ಣಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ ಆರೋಪಿಸಿದರು.

ಈ ಬಗ್ಗೆ ಸದನದಲ್ಲಿ ಪ್ರಶ್ನೆ ಮಾಡಿದ ಸಂದರ್ಭ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ ಮಳೆಗಾಲದ ಸಂದರ್ಭ ಸಂಚಾರಕ್ಕೆ ಮುಕ್ತಗೊಳಿಸುವ ಭರವಸೆ ದೊರೆತ್ತಿತ್ತು. ಆದರೆ ಇದುವರೆಗೂ ಯೋಜನೆ ಪೂರ್ಣಗೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಚರಂಡಿಯ ನೀರು ಕಾವೇರಿ ಸಂಗಮಕ್ಕೆ ಸೇರುತ್ತಿದ್ದು, ರಸ್ತೆಗಳು ಸಂಪೂರ್ಣ ಕೆಸರುಮಯವಾಗಿದೆ. ಕಾಮಗಾರಿಯ ದೊಡ್ಡ ದೊಡ್ಡ ಪಿಲ್ಲರ್‌ಗಳು ರಸ್ತೆ ಮಧ್ಯಭಾಗದಲ್ಲಿಯೇ ತಡೆಗೋಡೆಗಳಂತೆ ಬಿದ್ದಿದ್ದು, ಸಂಚಾರಕ್ಕೆ ಅಡ್ಡಿಯಾಗಿದೆ. ಪ್ರತಿವರ್ಷದಂತೆ ಈ ಬಾರಿಯು ಮಳೆಗಾಲದಲ್ಲಿ ತ್ರಿವೇಣಿ ಸಂಗಮ ಪ್ರವಾಹದಿಂದ ದ್ವೀಪವಾಗಿ ಮಾರ್ಪಡುವ ಸಾಧ್ಯತೆ ಇದೆ. ಇದರಿಂದ ಗ್ರಾಮಸ್ಥರು ಹಾಗೂ ಭಕ್ತಾಧಿಗಳು ಪರದಾಡಬೇಕಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾವೇರಿ ನೀರಾವರಿ ನಿಗಮದ ವತಿಯಿಂದ ಕೈಗೊಳ್ಳಲಾಗಿರುವ ಕಾಮಗಾರಿ ಅವೈಜ್ಞಾನಿಕವಾಗಿದೆ, ವೀಣಾ ಅಚ್ಚಯ್ಯ ಗುತ್ತಿಗೆದಾರರು ಕಾಮಗಾರಿಯ ಗುತ್ತಿಗೆ ಪಡೆದ ನಂತರ ಸ್ಥಳ ಪರಿಶೀಲಿಸದೆ ಇರುವುದು ಈ ಅವ್ಯವಸ್ಥೆಗಳಿಗೆ ಕಾರಣವೆಂದು ಎಂದು ಆರೋಪಿಸಿದರು.

ವ್ಯವಸ್ಥಾಪನಾ ಸಮಿತಿ ರಚಿಸಿ
ತಲಕಾವೇರಿ, ಭಾಗಮಂಡಲ ವ್ಯವಸ್ಥಾಪನಾ ಸಮಿತಿ ರಚನೆಯಾಗದೆ ಇರುವುದೇ ಪುಣ್ಯ ಕ್ಷೇತ್ರದ ಅವ್ಯವಸ್ಥೆಗಳಿಗೆ ಕಾರಣವೆಂದು ಟೀಕಿಸಿದ ಅವರು, ಸರಕಾರ ತಕ್ಷಣ ಸಮಿತಿ ರಚನೆ ಮಾಡಬೇಕೆಂದು ಒತ್ತಾಯಿಸಿದರು.

ಈ ಸಂದರ್ಭ ವಲಯ ಕಾಂಗ್ರೆಸ್ ಅಧ್ಯಕ್ಷ ಡಿ.ಎನ್.ಹರ್ಷ, ಜಿಲ್ಲಾ ಕಾಂಗ್ರೆಸ್ ಸಮಿತಿ ಸದಸ್ಯರಾದ ಬಿದ್ದಂಡ ಸುಮಿತ ಮಾದಪ್ಪ, ಸುನೀಲ್ ಪತ್ರವೋ ಪ್ರಮುಖರಾದ ಬೊಳ್ಳಜಿರ ಬಿ.ಅಯ್ಯಪ್ಪ ಹಾಜರಿದ್ದರು.

See also  ಒಕ್ಕಲಿಗರ ಸಂಘದ ಚುನಾವಣೆ : ನಿರ್ದೇಶಕರ ಸ್ಥಾನಕ್ಕೆ ತೀವ್ರ ಪೈಪೋಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು