ಮಡಿಕೇರಿ : 2022-23ನೇ ಸಾಲಿನ 30ನೇ ರಾಜ್ಯಮಟ್ಟದ ಮುಕ್ತ ಕೆಸರು ಗದ್ದೆ ಕ್ರೀಡಾಕೂಟ ಮತ್ತು ಆಟೋಟ ಸ್ಪರ್ಧೆಗಳು ಜು.23 ರಂದು ಕಗ್ಗೋಡ್ಲು ಗ್ರಾಮದ ಪಡನ್ನೋಳಂಡ ಬೋಪಣ್ಣ ಕುಶಾಲಪ್ಪ ಅವರ ಗದ್ದೆಯಲ್ಲಿ ನಡೆಯಲಿದೆ ಕೊಡಗು ಜಿಲ್ಲಾ ಯುವ ಒಕ್ಕೂಟದ ಅಧ್ಯಕ್ಷ ಪಿ.ಪಿ.ಸುಕುಮಾರ್ ತಿಳಿಸಿದ್ದಾರೆ.
ಕೊಡಗು ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಯೂತ್ ಹಾಸ್ಟೇಲ್ ಅಸೋಸಿಯೇಶನ್ ಆಫ್ ಇಂಡಿಯಾ (ಮಡಿಕೇರಿ ಘಟಕ), ಕೊಡಗು ಜಿಲ್ಲಾ ಯುವ ಒಕ್ಕೂಟ, ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲ್ಲೂಕು ಯುವ ಒಕ್ಕೂಟ ಹಾಗೂ ಕಗ್ಗೊಡ್ಲು ಕಾವೇರಿ ಯುವಕ ಸಂಘ ಸಂಯುಕ್ತಾಶ್ರಯದಲ್ಲಿ ಬೆಳಗ್ಗೆ 9.30 ರಿಂದ ಸ್ಪರ್ಧೆಗಳು ನಡೆಯಲಿವೆ.
ಸಾರ್ವಜನಿಕ ಪುರುಷ ಮತ್ತು ಮಹಿಳೆಯರ ಹಗ್ಗ ಜಗ್ಗಾಟ (9 ಜನರ ತಂಡ), ಸಾರ್ವಜನಿಕ ಪುರುಷರ ವಾಲಿಬಾಲ್ (4 ಜನರ ತಂಡ), ಸಾರ್ವಜನಿಕ ಮಹಿಳೆಯರಿಗೆ ಥ್ರೋಬಾಲ್ (6 ಜನರ ತಂಡ), ಸ್ಪರ್ಧೆಯನ್ನು ಏರ್ಪಡಿಸಲಾಗಿದೆ.
ಮಧ್ಯಾಹ್ನ 1 ಗಂಟೆಗೆ ಕೆಸರು ಗದ್ದೆ ಓಟದ ಸ್ಪರ್ಧೆ ನಡೆಯಲಿದ್ದು, ನಂತರ ಕಿರಿಯರ ಪಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 50ಮೀ ಓಟ, ಹಿರಿಯರ ಪ್ರಾಥಮಿಕ ಶಾಲಾ ಬಾಲಕ, ಬಾಲಕಿಯರಿಗೆ 100ಮೀ ಓಟ, ಪ್ರೌಢಶಾಲಾ ಬಾಲಕ, ಬಾಲಕಿಯರಿಗೆ 200 ಮೀ. ಓಟ, ಪದವಿ ಪೂರ್ವ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, ಪದವಿ ಕಾಲೇಜು ಬಾಲಕ, ಬಾಲಕಿಯರಿಗೆ 400 ಮೀ. ಓಟ, 40 ವರ್ಷ ಮೇಲ್ಪಟ್ಟ ಪುರುಷ ಹಾಗೂ ಮಹಿಳೆಯರಿಗೆ 300 ಮೀ. ಓಟದ ಸ್ಪರ್ಧೆ ನಡೆಯಲಿದೆ.
ಅಲ್ಲದೆ ಸಾರ್ವಜನಿಕ ಪುರುಷರ ಹಾಗೂ ಮಹಿಳೆಯರ ಮುಕ್ತ ಓಟ, ಕಗ್ಗೋಡ್ಲು ಗ್ರಾಮಸ್ಥರಿಗೆ ಸಾಂಪ್ರದಾಯಿಕ ನಾಟಿ ಓಟ ನಡೆಯಲಿದೆ. ನಂತರ ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣಾ ಕಾರ್ಯಕ್ರಮ ಜರುಗಲಿದೆ.
ಹಗ್ಗ-ಜಗ್ಗಾಟ ಸಾರ್ವಜನಿಕ ಪುರುಷರ ವಿಭಾಗಕ್ಕೆ ಮೈದಾನ ಶುಲ್ಕ ರೂ. 1,000 ಮಹಿಳೆಯರ ವಿಭಾಗ ರೂ.750, ವಾಲಿಬಾಲ್ ತಂಡಗಳಿಗೆ ಮೈದಾನ ಶುಲ್ಕ ರೂ.1,000 ಥ್ರೋಬಾಲ್ ಸಾರ್ವಜನಿಕ ಮಹಿಳೆಯರ ವಿಭಾಗಕ್ಕೆ ರೂ.1,000 ನಿಗಧಿಪಡಿಸಲಾಗಿದ್ದು, ಆಸಕ್ತರು ಜು.20ರ ಅಪರಾಹ್ನ 5 ಗಂಟೆಯೊಳಗೆ ತಂಡದ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಸುಕುಮಾರ್ ಮಾಹಿತಿ ನೀಡಿದ್ದಾರೆ.
ಪ್ರಥಮ ಹಾಗೂ ದ್ವಿತೀಯ ಸ್ಥಾನ ಗಳಿಸುವ ತಂಡಗಳಿಗೆ ನಗದು ಹಾಗೂ ಪಾರಿತೋಷಕ ನೀಡಲಾಗುವುದು. ಓಟದ ಸ್ಪರ್ಧೆಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆದವರಿಗೆ ಪಾರಿತೋಷಕ ಮತ್ತು ಪ್ರಶಂಸನಾ ಪತ್ರ ನೀಡಲಾಗುವುದು.
ಹೆಚ್ಚಿನ ಮಾಹಿತಿಗೆ ಪಿ.ಪಿ.ಸುಕುಮಾರ್-94812 13920, ಬಾಳಡಿ ದಿಲೀಪ್-94806 74546, ಎ.ಆರ್.ನೇತ್ರಾವತಿ-94496 79460, ಕೆ.ಕೆ.ಗಣೇಶ್-94497 59029, ಕೂಡಂಡ ಸಾಬ ಸುಬ್ರಮಣಿ – 98455 71290 ಸಂಪರ್ಕಿಸಬಹುದಾಗಿದೆ.