News Kannada
Thursday, October 06 2022

ಮಡಿಕೇರಿ

ಮಡಿಕೇರಿ: ವೀಣಾ ಅಚ್ಚಯ್ಯ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ - 1 min read

BJP upset with Veena Achaiah
Photo Credit :

ಮಡಿಕೇರಿ: ಕಳೆದ 6 ವರ್ಷಗಳ ಕಾಲ ವಿಧಾನ ಪರಿಷತ್ ಸದಸ್ಯರಾಗಿ ಕೊಡಗಿನ ಅಭಿವೃದ್ಧಿ ಕಾರ್ಯಗಳಲ್ಲಿ ನಿರ್ಣಾಯಕ ಪಾತ್ರ ವಹಿಸದ ಶಾಂತೆಯಂಡ ವೀಣಾ ಅಚ್ಚಯ್ಯ ಅವರು, ಅನುದಾನ ಸದ್ಬಳಕೆಯಲ್ಲಿ ಮೊದಲ ಸ್ಥಾನದಲ್ಲಿರುವ ಮೈಸೂರು- ಕೊಡಗು ಸಂಸದ ಪ್ರತಾಪ್ ಸಿಂಹ ಅವರ ವಿರುದ್ಧ ಮಾಡಿರುವ ಟೀಕೆ ಹಾಸ್ಯಾಸ್ಪದವೆಂದು ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಿಕಾ ಪ್ರಕಟಣೆ ನೀಡಿರುವ ಬಿಜೆಪಿ ಜಿಲ್ಲಾ ವಕ್ತಾರ ಮಹೇಶ್ ಜೈನಿ, ಅಭಿವೃದ್ಧಿ ಕಾರ್ಯಗಳಿಗೆ ಸಮಯ ಮೀಸಲಿಡದೆ ಸಭೆ, ಸಮಾರಂಭಗಳಿಗೆ ಸೀಮಿತವಾಗಿ ಅವಧಿ ಪೂರೈಸಿದ ವೀಣಾ ಅಚ್ಚಯ್ಯ ಅವರು ಸಂಸದರ ವಿರುದ್ಧ ಮಾಡಿರುವ ಟೀಕೆ ಖಂಡನೀಯ. ತಮ್ಮದೇ ಪಕ್ಷದ ಸರಕಾರವಿದ್ದಾಗಲೂ ಜಿಲ್ಲೆಯ ಬಗ್ಗೆ ಕಾಳಜಿ ತೋರದೆ ಇದ್ದ ಇವರು, ಇದೀಗ ಅಭಿವೃದ್ಧಿ ಕಾರ್ಯಗಳಿಂದಲೇ ಜನಪ್ರಿಯತೆಯನ್ನು ಗಳಿಸಿರುವ ಸಂಸದರನ್ನು ಉದ್ದೇಶಪೂರ್ವಕವಾಗಿ ಟೀಕಿಸುತ್ತಿರುವುದು ಸರಿಯಲ್ಲವೆಂದು ತಿಳಿಸಿದ್ದಾರೆ.

ಕೇಂದ್ರ ಸರಕಾರ ಸಂಸದರಿಗೆ ನೀಡುವ ಅನುದಾನ ಬಳಕೆಯಲ್ಲಿ ಪ್ರತಾಪ್ ಸಿಂಹ ಅವರು ಮೊದಲ ಸ್ಥಾನದಲ್ಲಿದ್ದಾರೆ. ಈ ಹಿಂದಿನ ಕಾಂಗ್ರೆಸ್ ಸಂಸದರುಗಳು ಮಾಡಿರುವ ಸಾಧನೆ ಏನು ಎನ್ನುವುದನ್ನು ಕೊಡಗಿನ ಜನ ಅರಿತಿದ್ದಾರೆ. ಇದೇ ಕಾರಣಕ್ಕೆ ಯುವ ಸಂಸದ ಪ್ರತಾಪ್ ಸಿಂಹ ಅವರನ್ನು ಎರಡನೇ ಬಾರಿಯೂ ಭರ್ಜರಿ ಮತಗಳಿಂದ ಗೆಲ್ಲಿಸಿದ್ದಾರೆ.
ರಾಜ್ಯದಲ್ಲಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರಕಾರವಿದ್ದಾಗ ನಡೆದ ಶಾಂತೆಯಂಡ ಕಪ್ ಹಾಕಿ ಹಬ್ಬಕ್ಕೆ ಅನುದಾನ ತರಲು ವೀಣಾ ಅಚ್ಚಯ್ಯ ಅವರಿಂದ ಆಗಿರಲಿಲ್ಲ. ಸುಮಾರು 30 ಲಕ್ಷ ರೂ. ಅನುದಾನವನ್ನು ದೊರಕಿಸಿಕೊಡುವಲ್ಲಿ ಪ್ರತಾಪ್ ಸಿಂಹ ಅವರು ಪ್ರಮುಖ ಪಾತ್ರ ವಹಿಸಿದ್ದರು ಎನ್ನುವುದನ್ನು ಮೊದಲು ನೆನಪು ಮಾಡಿಕೊಳ್ಳಲಿ ಎಂದು ಮಹೇಶ್ ಜೈನಿ ತಿರುಗೇಟು ನೀಡಿದ್ದಾರೆ.

ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆಯಡಿ 78 ಕೋಟಿ ರೂ., ಮೈಸೂರಿನಿಂದ ಕುಶಾಲನಗರಕ್ಕೆ 105 ಕಿ.ಮೀ ದೂರದ 4 ಪಥದ ರಸ್ತೆಗೆ 3993 ಸಾವಿರ ಕೋಟಿ, ಮಡಿಕೇರಿಯಿಂದ ಸಂಪಾಜೆಯವರೆಗೆ ರಸ್ತೆ ಬದಿ ತಡೆಗೋಡೆ ನಿರ್ಮಾಣಕ್ಕೆ 59 ಕೋಟಿ ರೂ. ಅನುದಾನ ತಂದಿರುವ ಹೆಗ್ಗಳಿಕೆ ಪ್ರತಾಪ್ ಸಿಂಹ ಅವರಿಗೆ ಸಲ್ಲುತ್ತದೆ. ಚನ್ನರಾಯ ಪಟ್ಟಣದಿಂದ ಕೊಡಗಿನ ಶನಿವಾರಸಂತೆ, ಸೋಮವಾರಪೇಟೆ ಮತ್ತು ಕುಟ್ಟ ಮಾರ್ಗವನ್ನು ರಾಷ್ಟ್ರೀಯ ಹೆದ್ದಾರಿಯನ್ನಾಗಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಮೈಸೂರಿನಿಂದ ಕುಶಾಲನÀಗರಕ್ಕೆ ರೈಲ್ವೆ ಮಾರ್ಗಕ್ಕೆ ಅನುಮೋದನೆ ಪಡೆಯಲಾಗಿದ್ದು, ಈ ಎಲ್ಲಾ ಸಾಧನೆಗೆ ಸಂಸದ ಪ್ರತಾಪ್ ಸಿಂಹ ಅವರು ಕಾರಣಕರ್ತರಾಗಿದ್ದಾರೆ.

2018 ರಲ್ಲಿ ಕೊಡಗು ಪ್ರಾಕೃತಿಕ ವಿಕೋಪಕ್ಕೆ ತುತ್ತಾದಾಗ ಜಿಲ್ಲೆಯಲ್ಲೇ ತಂಗಿದ ಸಂಸದರು ಸಂತ್ರಸ್ತರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿದ್ದಾರೆ. ಎನ್‍ಡಿಆರ್‍ಎಫ್ ಮೂಲಕ ಪರಿಹಾರ ಕಾರ್ಯಗಳನ್ನು ಕೈಗೊಂಡಿದ್ದಾರೆ. ಇದು ಸಂಸದರ ಯಶಸ್ವೀ ಕಾರ್ಯವೈಖರಿಗೆ ಮತ್ತು ಜನಪರ ಕಾಳಜಿಗೆ ಸಾಕ್ಷಿಯಾಗಿದೆ ಎಂದು ಮಹೇಶ್ ಜೈನಿ ಸಮರ್ಥಿಸಿಕೊಂಡಿದ್ದಾರೆ.

ಕಾಂಗ್ರೆಸ್ ನಾಯಕರು ವಿನಾಕಾರಣ ಗೊಂದಲ ಸೃಷ್ಟಿಸಿ ರಾಜಕೀಯ ಲಾಭ ಪಡೆಯಲು ಹವಣಿಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಕೊಡಗಿನ ಪ್ರಜ್ಞಾವಂತ ಮತದಾರರು ಕಾಂಗ್ರೆಸ್ಸಿಗರಿಗೆ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

See also  ದೇಶದ ಸಂಸ್ಕೃತಿಯನ್ನು ಪ್ರಶ್ನೆ ಮಾಡುವ ಹಕ್ಕು ನಿಮಗಿಲ್ಲ; ಸಂಸದ ಪ್ರತಾಪ್ ಸಿಂಹ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

1620
Coovercolly Indresh

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು