ಮಡಿಕೇರಿ: ವಿಶ್ವ ಛಾಯಾಗ್ರಾಹಕರ ದಿನಾಚರಣೆಯ ಪ್ರಯುಕ್ತ ಕೊಡಗು ಪತ್ರಕರ್ತರ ಸಂಘ ಹಾಗೂ ಪತ್ರಿಕಾ ಭವನ ಟ್ರಸ್ಟ್ ನ ಸಂಯುಕ್ತಾಶ್ರಯದಲ್ಲಿ ಜಿಲ್ಲೆಯಲ್ಲಿರುವ ಪದವಿ ವಿದ್ಯಾರ್ಥಿಗಳಿಗೆ ಹಾಗೂ ಕೊಡಗು ಪತ್ರಕರ್ತರ ಸಂಘದ ಸದಸ್ಯರಿಗೆ ಛಾಯಾಚಿತ್ರ ಮತ್ತು ವೀಡಿಯೋಗ್ರಫಿ ಸ್ಪರ್ಧೆ ಏರ್ಪಡಿಸಲಾಗಿದೆ.
“ಮುಂಗಾರು ಮಳೆಯ ಮುಖಗಳು” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮೊಬೈಲ್ ಹಾಗೂ ಡಿ.ಎಸ್.ಎಲ್.ಆರ್ ಕ್ಯಾಮರಾದಲ್ಲಿ ತೆಗೆದ ಛಾಯಾಚಿತ್ರ ಮತ್ತು ವೀಡಿಯೋಗಳನ್ನು ಸ್ಪರ್ಧೆಗೆ ಸಲ್ಲಿಸಬಹುದಾಗಿದೆ.
2022ನೇ ಆಗಸ್ಟ್ 1 ರಿಂದ 10ರವರೆಗಿನ ಅವಧಿಯಲ್ಲಿ ತೆಗೆದ ಛಾಯಾಚಿತ್ರ ಮತ್ತು ವೀಡಿಯೋಗಳನ್ನು ಮಾತ್ರ ಕಳುಹಿಸಬೇಕು. ವೀಡಿಯೋ ಅವಧಿ ಒಂದು ನಿಮಿಷಕ್ಕೆ ಮಾತ್ರ ಸೀಮಿತವಾಗಿರಬೇಕು. ಅದನ್ನು ಕಟ್ ಹಾಗೂ ಜೋಡಣೆ ಹೊರತುಪಡಿಸಿ ಯಾವುದೇ ರೀತಿಯ ಇತರ ಎಡಿಟಿಂಗ್ ಮಾಡುವಂತಿಲ್ಲ.
ಫೋಟೋಗ್ರಫಿಯನ್ನು ಕೂಡ ಎಡಿಟಿಂಗ್ ಮಾಡಲು ಅವಕಾಶ ಇರುವುದಿಲ್ಲ. ಸ್ಪರ್ಧೆಯಲ್ಲಿ ಪಾಲ್ಗೊಳ್ಳುವ ಪದವಿ ವಿದ್ಯಾರ್ಥಿಗಳು ತಮ್ಮ ಕಾಲೇಜಿನ ಗುರುತಿನ ಚೀಟಿಯನ್ನು ಸಲ್ಲಿಸಬೇಕು. ಆ.19ರಂದು ಪತ್ರಿಕಾಭವನದಲ್ಲಿ ನಡೆಯುವ ವಿಶ್ವ ಛಾಯಾಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ಬಹುಮಾನ ವಿತರಣೆ ಮಾಡಲಾಗುವುದು.
ಪ್ರತಿ ವಿಭಾಗಕ್ಕೂ ಪ್ರಥಮ, ದ್ವಿತೀಯ, ತೃತೀಯ ಬಹುಮಾನ ನೀಡಲಾಗುವುದು. ಸ್ಪರ್ಧಿಗಳು ಫೋಟೋ ಹಾಗೂ ವೀಡಿಯೋವನ್ನು kodagupatrak[email protected] ಈ ಇಮೇಲ್‍ಗೆ ಆಗಸ್ಟ್ 10ರೊಳಗೆ ಕಳುಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗೆ 7019124270, 8762986772, 8277021535 ದೂರವಾಣಿಯನ್ನು ಸಂಪರ್ಕಿಸುವಂತೆ ಕೊಡಗು ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಉಜ್ವಲ್ ರಂಜಿತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.