ಮಡಿಕೇರಿ, ಆ.9: ಭಾರತದ 75ನೇ ಸ್ವಾತಂತ್ರೋತ್ಸವದ ಅಂಗವಾಗಿ ಭಾರತೀಯ ಜನತಾ ಪಾರ್ಟಿಯ ಮಡಿಕೇರಿ ನಗರ ಘಟಕದ ಹಿಂದುಳಿದ ವರ್ಗಗಳ ಮೋರ್ಚಾದ ವತಿಯಿಂದ ಆ.14 ರಂದು ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.
“ಮನೆಮನೆಯಲ್ಲೂ ಸ್ವಾತಂತ್ರ್ಯ ದಿನಾಚರಣೆ” ಎಂಬ ವಿಷಯವನ್ನು ಆಧರಿಸಿ ನಗರದ ಶ್ರೀ ಚೌಡೇಶ್ವರಿ ದೇವಾಲಯದ ಸಭಾಂಗಣದಲ್ಲಿ ಬೆಳಗ್ಗೆ 10 ಗಂಟೆಗೆ ಸ್ಪರ್ಧೆ ನಡೆಯಲಿದೆ ಎಂದು ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷ ಬಿ.ಎಂ.ರಾಜೇಶ್ ತಿಳಿಸಿದ್ದಾರೆ.
ಸಬ್ ಜೂನಿಯರ್ – 1ನೇ ತರಗತಿಯಿಂದ 4ನೇ ತರಗತಿಯವರೆಗೆ, ಜೂನಿಯರ್ – 5ನೇ ತರಗತಿಯಿಂದ 7ನೇ ತರಗತಿಯವರೆಗೆ, ಸೀನಿಯರ್ – 8ನೇ ತರಗತಿಯಿಂದ 10ನೇ ತರಗತಿಯವರೆಗೆ ಎಂಬ ಮೂರು ವಿಭಾಗಗಳಲ್ಲಿ ಸ್ಪರ್ಧೆ ನಡೆಯಲಿದೆ.
ಸ್ಪರ್ಧೆಯಲ್ಲಿ ಭಾಗವಹಿಸುವ ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನಾ ಪತ್ರ ಹಾಗೂ ವಿಜೇತರಿಗೆ ಪ್ರಥಮ, ದ್ವಿತೀಯ, ಮತ್ತು ತೃತೀಯ ಬಹುಮಾನಗಳನ್ನು ಮೂರು ವಿಭಾಗಗಳಿಗೆ ನೀಡಲಾಗುತ್ತದೆ.
ಆಸಕ್ತ ವಿದ್ಯಾರ್ಥಿಗಳು ಆ.12 ರಂದು ಸಂಜೆ 5 ಗಂಟೆಯೊಳಗೆ ತಮ್ಮ ಹೆಸರನ್ನು ತಮ್ಮ ಶಾಲೆಯಲ್ಲಿ ಅಥವಾ ಗಜೇಂದ್ರ (ಕುಷ) – 98455 46184, ಅರವಿಂದ ಜ್ಯುವೆಲ್ಲರಿ – 9448312444, ನಾರಾಯಣಿ ಜ್ಯುವೆಲ್ಲರಿ – 9886191321 ಇಲ್ಲಿ ನೋಂದಾಯಿಸಿಕೊಳ್ಳಬಹುದೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.