News Kannada
Monday, October 02 2023
ಮಡಿಕೇರಿ

ಮಡಿಕೇರಿ: ಕೊಡಗಿನ ಎರಡು ಅದ್ಭುತಗಳಿಗೆ ವೋಟ್ ಮಾಡಿ

Vote for the two wonders of Kodagu
Photo Credit :

ಮಡಿಕೇರಿ: ವಿಶ್ವದ ಏಳು ಅದ್ಭುತಗಳ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಈಗ ರಾಜ್ಯವ್ಯಾಪಿ ಅಭಿಯಾನ ನಡೆಯುತ್ತಿದೆ. ಈ ವಿಶೇಷ ಅಭಿಯಾನದಲ್ಲಿ ನೀವು ಪಾಲ್ಗೊಂಡು ಕೊಡಗಿನ ಅದ್ಭುತಗಳನ್ನು ಕರುನಾಡಿನ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಿಸುವ ಸುವರ್ಣಾವಕಾಶವಿದೆ.

ಕೊಡಗು ಜಿಲ್ಲೆಯ ಎರಡು ಸ್ಥಳಗಳು ಈಗಾಗಲೇ ಕರ್ನಾಟಕದ ನೂರು ಅದ್ಭುತಗಳ ಪಟ್ಟಿಯಲ್ಲಿ ಸ್ಥಾನ ಪಡೆದಿವೆ. ಈ ಎರಡುಸ್ಥಳಗಳಿಗೆ ವೋಟ್ ಮಾಡುವ ಮೂಲಕ ನೀವು ಇವುಗಳನ್ನು ರಾಜ್ಯದ ಅದ್ಭುತವನ್ನಾಗಿ ಮಾಡಬಹುದು.

ಕೊಡಗಿನ ನಾಮನಿರ್ದೇಶನಗಳು: ಕೊಡಗಿನಲ್ಲಿರುವ ಪ್ರಮುಖ ಆಕರ್ಷಣೆ ಟಿಬೆಟ್ ನಿರಾಶ್ರಿತರ ಧಾರ್ಮಿಕ ಸ್ಥಳ ಬೈಲುಕುಪ್ಪೆಯ ಕುಳಿತಭಂಗಿಯಲ್ಲಿರುವ ಬುದ್ಧನ ಸ್ವರ್ಣದೇಗುಲ ಹಾಗೂ ಕೊಡಗಿನ ಅತ್ಯಂತ ಎತ್ತರದ ಪ್ರದೇಶ, ಕರ್ನಾಟಕದ ಮೂರನೆ ಅತೀ ಎತ್ತರದ ಬೆಟ್ಟ ತಡಿಯಂಡಮೋಳ್.

ಈಗಾಗಲೇ https://www.7wondersofkarnataka.com ನಲ್ಲಿ ನಾಮನಿರ್ದೇಶನಗೊಂಡಿರುವ ನೂರು ಅದ್ಭುತಗಳ ಸಾಲಿನಲ್ಲಿ ನಿಂತಿರುವ ಕೊಡಗಿನ ಈ ಎರಡು ಸ್ಥಳಗಳ ಪೈಕಿ ನಿಮ್ಮ ಆಯ್ಕೆಯ ಸ್ಥಳಕ್ಕೆ ತಲಾ 10 ವೋಟ್ ಮಾಡಿ ರಾಜ್ಯದ ಏಳು ಅದ್ಭುತಗಳನ್ನಾಗಿಸ ಬಹುದು.

ಪ್ರಸ್ತುತ 100 ಅದ್ಭುತಗಳ ಪಟ್ಟಿಯಲ್ಲಿರುವ ಸ್ಥಳಗಳಲ್ಲಿ ಅತಿ ಹೆಚ್ಚು ವೋಟ್ ಪಡೆದ ಸ್ಥಳಗಳು ಮುಂದಿನ ಹಂತದಲ್ಲಿ ಅಂತಿಮ 49ರಪಟ್ಟಿಗೆ ಬರಲಿವೆ. ತದನಂತರ ಅಂತಿಮ 21ರ ಪಟ್ಟಿಯಲ್ಲಿ ಉಳಿದು ಬಳಿಕ ಪ್ರವಾಸೋದ್ಯಮ ಇಲಾಖೆ ತಜ್ಞರ ಸಮಿತಿಯ ಆಯ್ಕೆಯಂತೆ ಕರ್ನಾಟಕದ ಏಳು ಅದ್ಭುತಗಳ ಸಾಲಿನಲ್ಲಿ ನಿಲ್ಲಬಹುದು. ಹೀಗಾಗಿ ಕೊಡಗು ಜಿಲ್ಲೆಯ ಪ್ರತಿಯೊಬ್ಬರೂ ತಮ್ಮ ಪಾಲಿನ ಹತ್ತು ವೋಟ್‌ಗಳನ್ನು ತಮ್ಮ ನೆಚ್ಚಿನ ಸ್ಥಳಕ್ಕೆ ನೀಡಬಹುದು. ಜತೆಗೆ ಸ್ನೇಹಿತರು, ಕುಟುಂಬ ಸದಸ್ಯರೂ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬಹುದು.

ಏನಿದು ಅಭಿಯಾನ: ಪ್ರಪಂಚದ ಏಳು ಅದ್ಭುತಗಳನ್ನು ಎಂದೋ ಹುಡುಕಿಯಾಗಿದೆ. ಅದೇ ಮಾದರಿಯಲ್ಲಿ ಕರ್ನಾಟಕದ ಏಳು ಅದ್ಭುತಗಳನ್ನು ಗುರುತಿಸಲು ಪ್ರವಾಸೋದ್ಯಮ ಇಲಾಖೆಯ ಸಹಭಾಗಿತ್ವದಲ್ಲಿ ಈ ವಿಶಿಷ್ಟ ಅಭಿಯಾನ ಹಮ್ಮಿಕೊಂಡಿದೆ.

‘ಕರ್ನಾಟಕ ಒಂದು ರಾಜ್ಯ ಹಲವು ಜಗತ್ತು’ ಎಂದೇ ಪ್ರಸಿದ್ಧಿ. ಇಂತಹ ಕರ್ನಾಟಕದ ಸುಂದರ ಕರಾವಳಿ ತೀರ, ದುರ್ಗಮ ಕಾನನಗಳು, ರಮಣೀಯ ಜಲಪಾತಗಳು, ಸಮುದ್ರ ತೀರಗಳು, ಐತಿಹಾಸಿಕ ಸ್ಥಳಗಳನ್ನು ಇಂತಹ ಹಲವು ಜಗತ್ತುಗಳನ್ನು ಒಳಗೊಂಡಿದೆ. ಈಪೈಕಿ ಏಳು ಅದ್ಭುತಗಳನ್ನು ಸಾರ್ವಜನಿಕರೇ ಗುರುತಿಸಲು ರೂಪಿಸಿರುವ ವೇದಿಕೆಯೇ ‘ಬನ್ನಿ ಹುಡುಕೋಣ ಕರ್ನಾಟಕದ ಏಳು ಅದ್ಭುತಗಳನ್ನು’ ಎಂಬ ಈಅಭಿಯಾನ.

See also  ಮಡಿಕೇರಿ: ವೀಣಾ ಅಚ್ಚಯ್ಯ ವಿರುದ್ಧ ಕೊಡಗು ಜಿಲ್ಲಾ ಬಿಜೆಪಿ ಅಸಮಾಧಾನ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು