ಮಡಿಕೇರಿ, ಸೆ.25: ಮಂಗಳೂರು ವಿಶ್ವವಿದ್ಯಾನಿಲಯ ಕೊಡವ ಸಾಂಸ್ಕೃತಿಕ ಅಧ್ಯಯನ ಪೀಠ ಪ್ರಸಾರಾಂಗ ಮತ್ತು ಕೊಡವ ಮಕ್ಕಡ ಕೂಟ ಇದರ ಜಂಟಿ ಆಶ್ರಯದಲ್ಲಿ ಪಟ್ಟೋಲೆ ಪಳಮೆ (ಕೊಡವ, ಕನ್ನಡ, ಇಂಗ್ಲಿಷ್ ಆವೃತ್ತಿ) ಕೃತಿ ಬಿಡುಗಡೆ ಸಮಾರಂಭ ಅ.1 ರಂದು ನಗರದ ಪತ್ರಿಕಾ ಭವನದಲ್ಲಿ ನಡೆಯಲಿದೆ ಎಂದು ಕೂಟದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ತಿಳಿಸಿದ್ದಾರೆ.
ಮಧ್ಯಾಹ್ನ 2 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಬೊವೇರಿಯಂಡ ನಂಜಮ್ಮ ಮತ್ತು ಚಿಣ್ಣಪ್ಪ ಅನುವಾದಿಸಿರುವ ಕೃತಿಯನ್ನು ಮಡಿಕೇರಿ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚು ರಂಜನ್ ಬಿಡುಗಡೆಗೊಳಿಸಲಿದ್ದಾರೆ.
ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಸುಬ್ರಹ್ಮಣ್ಯ ಯಡಪಡಿತ್ತಾಯ ಅಧ್ಯಕ್ಷತೆ ವಹಿಸಲಿದ್ದಾರೆ. ಮುಂಬೈ ಎಸ್.ಎನ್.ಡಿ.ಟಿ. ಮಹಿಳಾ ವಿಶ್ವವಿದ್ಯಾನಿಲಯದ ವಿಶ್ರಾಂತ ಪ್ರಾಧ್ಯಾಪಕ ಡಾ.ವೀಣಾ ಪೂಣಚ್ಚ ಕೃತಿ ಪರಿಚಯ ಮಾಡಲಿದ್ದಾರೆ ಎಂದು ಬೊಳ್ಳಜಿರ ಬಿ.ಅಯ್ಯಪ್ಪ ಮಾಹಿತಿ ನೀಡಿದ್ದಾರೆ.