News Kannada
Friday, June 09 2023
ಮಡಿಕೇರಿ

ವಿರಾಜಪೇಟೆ: ‘ನಮ್ಮ ಕ್ಲಿನಿಕ್’ ಯೋಜನೆಗೆ ಚಾಲನೆ ನೀಡಿದ ಕೆ.ಜಿ.ಬೋಪಯ್ಯ

K.G. Bopaiah launches 'Namma Clinic' project
Photo Credit : By Author

ವಿರಾಜಪೇಟೆ: ಬಡ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ‘ನಮ್ಮ ಕ್ಲಿನಿಕ್’ ಯೋಜನೆಯನ್ನು ಜಾರಿಗೊಳಿಸಿದ್ದು, ಇದರ ಉಪಯೋಗವನ್ನು ಪಡೆದುಕೊಳ್ಳುವಂತೆ ಶಾಸಕರಾದ ಕೆ.ಜಿ.ಬೋಪಯ್ಯ ಅವರು ಕರೆ ನೀಡಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುಬ್ಬಳ್ಳಿಯಲ್ಲಿ ಬುಧವಾರ ವರ್ಚುವಲ್ ಮೂಲಕ ‘ನಮ್ಮ ಕ್ಲಿನಿಕ್’ ಯೋಜನೆಗೆ ಚಾಲನೆ ನೀಡುವ ಸಂದರ್ಭದಲ್ಲಿ ಶಾಸಕರು ವಿರಾಜಪೇಟೆಯ ಮೊಗೇರಗಲ್ಲಿ ಬಡಾವಣೆಯಲ್ಲಿ ‘ನಮ್ಮ ಕ್ಲಿನಿಕ್’ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ನಗರ, ಪಟ್ಟಣ ಪ್ರದೇಶಗಳಲ್ಲಿ 30 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಪ್ರದೇಶದಲ್ಲಿ ‘ನಮ್ಮ ಕ್ಲಿನಿಕ್’ ಆಸ್ಪತ್ರೆ ಆರಂಭಕ್ಕೆ ಚಾಲನೆ ನೀಡಲಾಗಿದ್ದು, ಪ್ರಥಮ ಹಂತದಲ್ಲಿ 114 ‘ನಮ್ಮ ಕ್ಲಿನಿಕ್’ಗಳ ಪ್ರಾರಂಭಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದಾರೆ ಎಂದು ತಿಳಿಸಿದರು.

ಕೊಡಗು ಜಿಲ್ಲೆಯ ವಿರಾಜಪೇಟೆ ಪಟ್ಟಣದ ಮೊಗೇರಗಲ್ಲಿ ಬಡಾವಣೆಯಲ್ಲಿ ‘ನಮ್ಮ ಕ್ಲಿನಿಕ್’ ಆರಂಭಿಸಲಾಗಿದ್ದು, ಆರೋಗ್ಯ ಸಂಬಂಧಿಸಿದಂತೆ ಸೇವೆಗಳನ್ನು ಪಡೆದುಕೊಳ್ಳುವಂತಾಗಬೇಕು ಎಂದು ಕೆ.ಜಿ.ಬೋಪಯ್ಯ ಅವರು ಸಲಹೆ ಮಾಡಿದರು.

ಸರ್ಕಾರದ ಹಲವು ಕಾರ್ಯಕ್ರಮಗಳಲ್ಲಿ ಮೊದಲ ಆದ್ಯತೆಯಾಗಿ ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಯಾವುದೇ ಕಾಯಿಲೆಗಳನ್ನು ಪ್ರಾಥಮಿಕ ಹಂತದಲ್ಲಿಯೇ ಗುಣಪಡಿಸಿಕೊಂಡಲ್ಲಿ ಅನುಕೂಲವಾಗಲಿದೆ. ಆ ನಿಟ್ಟಿನಲ್ಲಿ ತಮ್ಮ ಬಡಾವಣೆ ವ್ಯಾಪ್ತಿಯಲ್ಲಿಯೇ ‘ನಮ್ಮ ಕ್ಲಿನಿಕ್’ ಆರಂಭಗೊಂಡಿದ್ದು, ಪಟ್ಟಣದ ಜನರಿಗೆ ಉಪಯುಕ್ತವಾಗಿದೆ ಎಂದು ಶಾಸಕರು ತಿಳಿಸಿದರು.

ಕೇಂದ್ರ ಸರ್ಕಾರವು ಎಲ್ಲಾ ರೀತಿಯ ಆರೋಗ್ಯ ಸೌಲಭ್ಯ ಕಲ್ಪಿಸಲು ಮುಂದಾಗಿದೆ. ಜನೌಷಧಿ ಕೇಂದ್ರಗಳನ್ನು ಆರಂಭಿಸಿ ಕಡಿಮೆ ಬೆಲೆಯಲ್ಲಿ ಉತ್ತಮ ಔಷಧಿಯನ್ನು ಪಡೆದುಕೊಳ್ಳಬಹುದು, ಆದರೆ ಅಪಪ್ರಚಾರಕ್ಕೆ ಯಾರೂ ಸಹ ಕಿವಿಗೊಡಬಾರದು. ಮೂಢನಂಬಿಕೆಗಳಿಗೆ ಬಲಿಯಾಗಬಾರದು ಎಂದರು.ಬಡಜನರ ನೋವಿಗೆ ಸ್ಪಂಧಿಸುವಲ್ಲಿ ಸರ್ಕಾರ ಹಲವು ಕಾರ್ಯಕ್ರಮ ಹಮ್ಮಿಕೊಂಡಿದೆ. ಆರೋಗ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದೆ ಎಂದರು.

ನಗರ, ಪಟ್ಟಣ ಪ್ರದೇಶಗಳಲ್ಲಿ ಶುಚಿತ್ವಕ್ಕೆ ಒತ್ತು ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡದಂತೆ ಗಮನಹರಿಸಬೇಕು. ನಮ್ಮ ಕ್ಲಿನಿಕ್ ಯೋಜನೆಯ ಆರೋಗ್ಯ ಸೌಲಭ್ಯಗಳು ಎಲ್ಲರಿಗೂ ಎಲ್ಲೆಡೆ ತಲುಪುವಂತಾಗಲಿ ಎಂದು ಇದೇ ಸಂದರ್ಭದಲ್ಲಿ ಕೆ.ಜಿ.ಬೋಪಯ್ಯ ಅವರು ತಿಳಿಸಿದರು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ ಅವರು ಮಾತನಾಡಿ ‘ನಮ್ಮ ಕ್ಲಿನಿಕ್’ ಯೋಜನೆಯಡಿ ಹಲವು ಆರೋಗ್ಯ ಸೇವೆಗಳು ದೊರೆಯಲಿದ್ದು, ಇದನ್ನು ಪಡೆದುಕೊಳ್ಳುವಂತಾಗಬೇಕು ಎಂದರು.

‘ಸಮಾಜದಲ್ಲಿ ಆಸ್ಪತ್ರೆಗಳು ಹೆಚ್ಚಾಗಲಿ, ಆದರೆ ರೋಗಿಗಳ ಸಂಖ್ಯೆ ಕಡಿಮೆಯಾಗಲಿ ಎಂದು ಜಿಲ್ಲಾಧಿಕಾರಿ ಅವರು ಆಶಿಸಿದರು.’ ವಿರಾಜಪೇಟೆ ಪುರಸಭೆ ಸದಸ್ಯರಾದ ದೇಚಮ್ಮ ಅವರು ಮಾತನಾಡಿ ‘ನಮ್ಮ ಕ್ಲಿನಿಕ್’ ಇಲ್ಲಿನ ಸುತ್ತಮುತ್ತಲಿನ ಮತ್ತು ಪಟ್ಟಣದ ಜನರಿಗೆ ಹೆಚ್ಚಿನ ಪ್ರಯೋಜನವಾಗಲಿದೆ. ವೈದ್ಯರು ಸೇರಿದಂತೆ ಎಲ್ಲರನ್ನು ಕುಟುಂಬದವರಂತೆ ನೋಡಿಕೊಳ್ಳಬೇಕು. ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದು ಅವರು ಹೇಳಿದರು.

ಪುರಸಭೆ ಸದಸ್ಯರಾದ ಮತೀನ್ ಅವರು ಮಾತನಾಡಿ ನಮ್ಮ ವಾರ್ಡಿನಲ್ಲಿ(ಮೊಗೇರಗಲ್ಲಿ) ‘ನಮ್ಮ ಕ್ಲಿನಿಕ್’ ಆರಂಭವಾಗಿರುವುದು ಸಂತಸದ ವಿಚಾರ. ಈ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂದರು.

See also  ಪ್ರತ್ಯೇಕ ವಿದ್ಯುತ್ ಸಹಾಯವಾಣಿಗೆ ಜನರ ಆಗ್ರಹ

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಮಾತನಾಡಿ ನಗರ/ ಪಟ್ಟಣ ಪ್ರದೇಶದ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ ಒದಗಿಸುವುದು ‘ನಮ್ಮ ಕ್ಲಿನಿಕ್’ ಯೋಜನೆಯ ಪ್ರಮುಖ ಉದ್ದೇಶವಾಗಿದೆ ಎಂದರು.

ನಮ್ಮ ಕ್ಲಿನಿಕ್ ಯೋಜನೆಯಡಿ ಗರ್ಭಿಣಿಯರ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರೆಯದವರ ಸಮಗ್ರ ಆರೋಗ್ಯ ಸೇವೆಗಳು, ಸಾರ್ವತ್ರಿಕ ಲಸಿಕಾಕರಣ ಸೇವೆ, ಕುಟುಂಬ ಕಲ್ಯಾಣ ಗರ್ಭನಿರೋಧಕ ಸೇವೆ, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗೆ ಹೊರರೋಗಿಗಳ ಸೇವೆ ಹಾಗೂ ಅಸಾಂಕ್ರಾಮಿಕ ರೋಗಗಳ ಪರೀಕ್ಷೆ ಮತ್ತು ಚಿಕಿತ್ಸೆ ಲಭ್ಯವಿರುತ್ತದೆ ಎಂದು ತಿಳಿಸಿದರು. ‘ನಮ್ಮ ಕ್ಲಿನಿಕ್’ ನಲ್ಲಿ ಒಬ್ಬ ನುರಿತ ವೈದ್ಯರು, ಶ್ರುಶ್ರೂಷಕರು, ಲ್ಯಾಬ್ ಟೆಕ್ನಿಷಿಯನ್, ‘ಡಿ’ ದರ್ಜೆ ನೌಕರರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಡಾ.ಆರ್.ವೆಂಕಟೇಶ್ ಅವರು ಮಾಹಿತಿ ನೀಡಿದರು.

‘ನಮ್ಮ ಕ್ಲಿನಿಕ್’ ಆಸ್ಪತ್ರೆಯಲ್ಲಿ ಭಾನುವಾರ ಹೊರತುಪಡಿಸಿ ಉಳಿದಂತೆ ಬೆಳಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಆರೋಗ್ಯ ಸೇವೆಗಳು ದೊರೆಯಲಿವೆ. ಇದನ್ನು ಬಳಸಿಕೊಳ್ಳುವಂತಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅವರು ತಿಳಿಸಿದರು.

ಪುರಸಭೆ ಅಧ್ಯಕ್ಷರಾದ ಟಿ.ಆರ್.ಸುಶ್ಮಿತಾ, ತಹಶೀಲ್ದಾರ್ ಅರ್ಚನಾ ಭಟ್, ನಗರಾಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್, ತಾಲ್ಲೂಕು ವೈದ್ಯಾಧಿಕಾರಿ ಡಾ.ಯತಿರಾಜ್, ಪುರಸಭೆ ಮುಖ್ಯಾಧಿಕಾರಿ ಚಂದ್ರಕುಮಾರ್, ಪುರಸಭೆ ಸದಸ್ಯರು ಇತರರು ಇದ್ದರು. ಸುಲೇಖ ಸ್ವಾಗತಿಸಿದರು. ಎಂಜಿನಿಯರ್ ಹೇಮಕುಮಾರ್ ನಿರೂಪಿಸಿ, ವಂದಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು