ಕೊಡಗು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬವನ್ನು ಮಡಿಕೇರಿ ಮತ್ತು ಕುಶಾಲನಗರದಲ್ಲಿ ಸಂಭ್ರಮಾಚರಣೆ.
ಜಿಲ್ಲಾ ಜೆಡಿಎಸ್ ವತಿಯಿಂದ ಮಡಿಕೇರಿಯ ಶ್ರೀ ಕುಂದುರುಮೊಟ್ಟೆ ಚೌಟಿಮಾರಿಯಮ್ಮ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ಬಳಿಕ ನಗರದ ಎ.ವಿ ಶಾಲೆ ಹಾಗೂ ಹಿಂದೂಸ್ಥಾನಿ ಶಾಲೆಯ ವಿದ್ಯಾರ್ಥಿಗಳೊಂದಿಗೆ ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಆಚರಣೆ ಸಿಹಿ ವಿತರಿಸಿ,ಲೇಖನ ಸಾಮಾಗ್ರಿಗಳನ್ನು ವಿತರಿಸಲಾಯಿತು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ಕೆ.ಎಂ ಗಣೇಶ್ ಹಾಗೂ ಪ್ರಮುಖರು ಹಾಜರಿದ್ದರು.
ಕುಮಾರಸ್ವಾಮಿ ಅವರ ಹುಟ್ಟುಹಬ್ಬ ಅಂಗವಾಗಿ ಕುಶಾಲನಗರದಲ್ಲಿ ಜೆಡಿಎಸ್ ಕಾರ್ಯಕರ್ತರು ಕೇಕ್ ಕತ್ತರಿಸಿ ಸಂಭ್ರಮಾಚರಿಸಿದರು.
ಈ ಸಂದರ್ಭ ಜೆಡಿಎಸ್ ಮುಖಂಡ ನಾಪಂಡ ಮುತ್ತಪ್ಪ, ಯುವ ಜೆಡಿಎಸ್ ಜಿಲ್ಲಾಧ್ಯಕ್ಷ ಸಿ.ಎಲ್ ವಿಶ್ವ ಸೇರಿದಂತೆ ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಹಾಜರಿದ್ದರು.