ಕೊಡಗು: ಎಲ್ಲಾ ಜಿಲ್ಲೆಗಳಲ್ಲೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡಬೇಕು ಎಂಬುದು ರಾಜ್ಯ ಸರ್ಕಾರದ ಚಿಂತನೆಯಾಗಿದೆ, ಆದರೆ ಕೊಡಗು ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಈಗಾಗಲೇ ಮಡಿಕೇರಿಯಲ್ಲಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ ಕಾರ್ಯ ನಡೆಯುತ್ತಿದ್ದು. ಎಲ್ಲಾ ತಜ್ಞ ವೈದ್ಯರು ಲಭ್ಯವಿರುತ್ತಾರೆ ಎಂದು ಆರೋಗ್ಯ ಸಚಿವರು ವಿಧಾನ ಪರಿಷತ್ ನಲ್ಲಿ ತಿಳಿಸಿದ್ದಾರೆ.
ಸುಜಾ ಕುಶಾಲಪ್ಪ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಕೊಡಗಿನಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ತಜ್ಞ ವೈದ್ಯರು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಇದ್ದಾರೆ ಹೃದಯ ಹಾಗೂ ಕ್ಯಾನ್ಸರ್ ರೆಫೆರಲ್ ಮೇಲೆ ಚಿಕಿತ್ಸೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಎಂದರು. ಒಟ್ಟಿನಲ್ಲಿ ಕೊಡಿಗಿನ ಜನರ ಬೇಡಿಕೆ ಮಾರೀಚಿಕ ಆಗಿ ಉಳಿದಿದೆ.