News Kannada
Thursday, February 02 2023

ಮಡಿಕೇರಿ

ಮಡಿಕೇರಿ: ನಾಡಿನ ಶಿಲ್ಪಕಲೆಗೆ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ- ಡಾ.ನಂಜುಂಡೇಗೌಡ

Madikeri: Amarashilpi Jakanachari's contribution to the sculpture of the state is immense: Dr. Nanjundegowda
Photo Credit : By Author

ಮಡಿಕೇರಿ, ಜ.1: ಕರ್ನಾಟಕ ಶಿಲ್ಪಕಲೆಯ ತವರೂರು ಆಗಿದ್ದು, ನಾಡಿನ ಶಿಲ್ಪಕಲೆಗೆ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಕೊಡುಗೆ ಅಪಾರ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರು ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ, ಜಿಲ್ಲಾ ವಿಶ್ವಕರ್ಮ ಒಕ್ಕೂಟ ಇವರ ಸಹಕಾರದಲ್ಲಿ ನಗರದ ಭಾರತೀಯ ವಿದ್ಯಾಭವನದಲ್ಲಿ ಭಾನುವಾರ ನಡೆದ ‘ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರ ಸಂಸ್ಮರಣಾ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಭಾರತೀಯ ಇತಿಹಾಸದಲ್ಲಿ ಕಲೆಗೆ ತನ್ನದೇ ಆದ ಇತಿಹಾಸ ಇದೆ. ಆ ದಿಸೆಯಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು, ಹಳೆಬೀಡು, ಸೋಮನಾಥಪುರ ಮತ್ತಿತರ ಕಡೆಗಳಲ್ಲಿ ಕೆತ್ತಿರುವ ಕೆತ್ತನೆಗಳೆ ಸಾಕ್ಷಿ ಎಂದು ನುಡಿದರು.
ಆಧುನಿಕ ಜಗತ್ತಿನಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಬೆಳೆದಂತೆ ಶಿಲ್ಪಕಲಾ ಕ್ಷೇತ್ರದಲ್ಲಿಯೂ ಸಾಕಷ್ಟು ಬದಲಾವಣೆ ಕಾಣಬಹುದು, ಆ ನಿಟ್ಟಿನಲ್ಲಿ ಅಮರಶಿಲ್ಪಿ ಜಕಣಾಚಾರಿ ಅವರು ನಾಡಿಗೆ ನೀಡಿರುವ ಅಮರಶಿಲ್ಪದ ಕೊಡುಗೆಯನ್ನು ಉಳಿಸಿಕೊಂಡು ಹೋಗುವಂತಾಗಬೇಕು ಎಂದು ಡಾ.ನಂಜುಂಡೇಗೌಡ ಅವರು ಕರೆ ನೀಡಿದರು.

ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ನಾಗರಾಜು ಅವರು ಮಾತನಾಡಿ ವಿಶ್ವಕರ್ಮ ಸಮಾಜದಲ್ಲಿ ಕಬ್ಬಿಣ, ಮರಗೆಲಸ, ಶಿಲ್ಪಕಲೆ, ಚಿನ್ನಬೆಳ್ಳಿ ಹೀಗೆ ಐದು ರೀತಿಯ ಕುಲಕಸುಬುಗಳನ್ನು ನಿರ್ವಹಿಸುತ್ತಿದ್ದರು, ಆದರೆ ಕಾಲ ಬದಲಾದಂತೆ ವೃತ್ತಿ ಕೌಶಲವೂ ಬದಲಾಗುತ್ತಿದೆ ಎಂದರು.

‘ಭಾರತೀಯ ಇತಿಹಾಸ ಮತ್ತು ಸಂಸ್ಕೃತಿಯಲ್ಲಿ ಶಿಲ್ಪಕಲೆಗೆ ಹೆಚ್ಚಿನ ಮಹತ್ವವಿದೆ. ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ಬೇಲೂರು ಹಳೆಬೀಡಿನಲ್ಲಿ ಕಲ್ಲಿನಿಂದ ಶಿಲ್ಪಕಲೆಯನ್ನು ಕೆತ್ತಿ ಇಡೀ ವಿಶ್ವವೇ ವೀಕ್ಷಿಸುವಂತೆ ಮಾಡಿದ್ದಾರೆ ಎಂದು ನಾಗರಾಜು ಅವರು ವಿವರಿಸಿದರು.’

ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ದೇವದಾಸ್ ಅವರು ಮಾತನಾಡಿ ವಿಶ್ವಕರ್ಮ ಸಮಾಜದವರು ವಿವಿಧ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಕಲೆಗಳ ಪ್ರದರ್ಶನಕ್ಕೆ ಅವಕಾಶ ಮಾಡಬೇಕು. ಆ ನಿಟ್ಟಿನಲ್ಲಿ ಮಡಿಕೇರಿ ನಗರದಲ್ಲಿ ಕನಿಷ್ಟ 10 ಸೆಂಟು ಜಾಗವನ್ನಾದರೂ ನೀಡಬೇಕು ಎಂದು ಅವರು ಕೋರಿದರು.

ರಾಜ್ಯ ವಿಶ್ವಕರ್ಮ ಸಮುದಾಯಗಳ ಅಭಿವೃದ್ಧಿ ನಿಗಮದ ನಾಮ ನಿರ್ದೇಶಕರಾದ ಎಚ್.ಎನ್.ಸುಬ್ರಮಣ್ಯ ಅವರು ಮಾತನಾಡಿ ವಿಶ್ವಕರ್ಮ ಸಮಾಜದ ಜನರು ಆರ್ಥಿಕವಾಗಿ ಸಬಲರಾಗಲು ಇನ್ನೂ ಹೆಚ್ಚಿನ ನೆರವು ಒದಗಿಸುವಂತಾಗಬೇಕು ಎಂದು ಅವರು ಮನವಿ ಮಾಡಿದರು.

ಉಪ ವಿಭಾಗಾಧಿಕಾರಿ ಯತೀಶ್ ಉಲ್ಲಾಳ್ ಅವರು ಮಾತನಾಡಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಅವರು ತಮ್ಮ ಶಿಲ್ಪ ಕಲೆಯ ಕಾಯಕದ ಮೂಲಕ ಇಡೀ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದರು.

ಸಂಪಾಜೆ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕುಮಾರ ಅವರು ಮಾತನಾಡಿ ಅಮರಶಿಲ್ಪಿ ಜಕಣಾಚಾರಿ ಅವರು ಅತ್ಯಂತ ನಾಜೂಕಾದ ಹಲವಾರು ದೇವಾಲಯಗಳನ್ನು ನಿರ್ಮಿಸಿ ದಂತಕಥೆಯಾದ ಶಿಲ್ಪಿ, ಜಕಣಾಚಾರಿ ಅವರು ಕಲ್ಯಾಣ ಚಾಲುಕ್ಯರ ಹಾಗೂ ಹೊಯ್ಸಳರ ಶೈಲಿಯ ದೇವಾಲಯಗಳನ್ನು ಬೇಲೂರು ಹಾಗೂ ಹಳೇಬೀಡಿನಲ್ಲಿ ನಿರ್ಮಿಸಿದ್ದಾರೆ ಎಂದು ಹೇಳಿದರು.

See also  ಮಡಿಕೇರಿ| ಚೆಟ್ಟಳ್ಳಿ- ಸುಂಟಿಕೊಪ್ಪ ರಸ್ತೆ ಅವ್ಯವಸ್ಥೆ : ಗ್ರಾಮಸ್ಥರ ಅಸಮಾಧಾನ

ಕರ್ನಾಟಕದ ತುಮಕೂರಿನಿಂದ 9 ಕಿ.ಮೀ ದೂರದಲ್ಲಿರುವ ಕೈದಾಳೆಯಲ್ಲಿ ಜಕಣಾಚಾರಿ ಅವರು ಜನಿಸಿದರು. ಕೆಲವು ದಾಖಲೆಗಳ ಪ್ರಕಾರ ಈ ಊರಿನ ಮೂಲ ಹೆಸರು ಕ್ರೀಡಾಪುರ ಆಗಿದೆ ಎಂದು ಕುಮಾರ ಅವರು ತಿಳಿಸಿದರು.

ಅಮರ ಶಿಲ್ಪಿ ಜಕಣಾಚಾರಿ ಅವರು ತಮ್ಮ ಜೀವನವನ್ನು ಕಲೆಗಾಗಿ ಮುಡಿಪಾಗಿಟ್ಟಿದ್ದರು. ತಮ್ಮ ವೃತ್ತಿ ಜೀವನವನ್ನು ನೃಪ ಹಯರು ಆ ಪ್ರದೇಶವನ್ನು ಆಳುತ್ತಿರುವಾಗ ಪ್ರಾರಂಭಿಸಿದರು. ನಾಡಿನಲ್ಲಿ ಹಲವು ದೇವಾಲಯಗಳನ್ನು ನಿರ್ಮಿಸುತ್ತ ಮುನ್ನಡೆದರು ಎಂದರು.

ವಿವಿಧ ವೃತ್ತಿ ಕೌಶಲ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ವಿಶ್ವಕರ್ಮ ಸಮಾಜದ ಮಂಜುನಾಥ್, ಅನಿಲ್ ಬಡಿಗೇರ್, ಸುನಿಲ್, ಪುಟ್ಟಣ್ಣ ಆಚಾರ್ಯ, ಮೋಹನ್ ಅವರನ್ನು ಇದೇ ಸಂದರ್ಭದಲ್ಲಿ ಶಾಲು, ಫಲ ತಾಂಬೂಲ ನೀಡಿ ಸನ್ಮಾನಿಸಲಾಯಿತು.
ತಹಶೀಲ್ದಾರ್ ಪಿ.ಎಸ್.ಮಹೇಶ್, ತಾಲ್ಲೂಕು ವಿಶ್ವಕರ್ಮ ಒಕ್ಕೂಟದ ಅಧ್ಯಕ್ಷರಾದ ಜಗದೀಶ್ ಆಚಾರ್ಯ, ಬಿ.ಸಿ.ಶಂಕರಯ್ಯ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಚಿನ್ನಸ್ವಾಮಿ, ಮಣಜೂರು ಮಂಜುನಾಥ್ ಇತರರು ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು