News Kannada
Sunday, January 29 2023

ಮಡಿಕೇರಿ

ಮಡಿಕೇರಿ: ಡಾ.ಎಂ.ಎ.ಕಾರ್ಯಪ್ಪ ಅವರಿಂದ ಕಿಡ್ನಿ ಆರೋಗ್ಯ ತಪಾಸಣೆ

Photo Credit : By Author

ಮಡಿಕೇರಿ : ಅಮೇರಿಕಾದಲ್ಲಿ ವೈದ್ಯಕೀಯ ವೃತ್ತಿಯಲ್ಲಿರುವ ಹೆಸರಾಂತ ಕಿಡ್ನಿ ತಜ್ಞ ವೈದ್ಯರಾದ ಡಾ.ಎಂ.ಎ.ಕಾರ್ಯಪ್ಪ ಅವರು ಬುಧವಾರ ನಗರದ ಜಿಲ್ಲಾಸ್ಪತ್ರೆಯಲ್ಲಿ ಕಿಡ್ನಿಗೆ ಸಂಬಂಧಿಸಿದಂತೆ ಆರೋಗ್ಯ ತಪಾಸಣೆ ಮಾಡಿದರು. ನೂರಾರು ರೋಗಿಗಳು ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಪಡೆದರು.

ಕಿಡ್ನಿಗೆ ಸಂಬಂಧಿಸಿದಂತೆ ವಹಿಸಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಹಲವು ಮಾಹಿತಿ ನೀಡಿದರು. ಆರೋಗ್ಯಕ್ಕೆ ಸಂಬಂಧಿಸಿದಂತೆ ವಹಿಸಬೇಕಾದ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.

ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಡಾ.ಕಾರ್ಯಪ್ಪ ಅವರು ದೇಶದಲ್ಲಿ ಇರುವ ಸಂಪನ್ಮೂಲವನ್ನು ಸರಿಯಾಗಿ ಬಳಸಿಕೊಂಡು ಉತ್ತಮ ಆರೋಗ್ಯ ಕಾಪಾಡಿಕೊಳ್ಳುವತ್ತ ಗಮನಹರಿಸಬೇಕು ಎಂದರು.

ದೇಶದಲ್ಲಿ ಮೂತ್ರಪಿಂಡ ರೋಗಿಗಳ ಸಂಖ್ಯೆ ಹೆಚ್ಚಿದೆ. ಆ ನಿಟ್ಟಿನಲ್ಲಿ ಮೂತ್ರಪಿಂಡಕ್ಕೆ ಸಂಬಂಧಿಸಿದಂತೆ ಹಲವು ಮುನ್ನೆಚ್ಚರಿಕಾ ಕ್ರಮ ವಹಿಸಬೇಕಿದೆ ಎಂದರು.

ಕಳೆದ ಮೂರು ವರ್ಷದಲ್ಲಿ ಕೋವಿಡ್ ಕಾರಣದಿಂದಾಗಿ ಕೊಡಗು ಜಿಲ್ಲೆಗೆ ಬರಲು ಸಾಧ್ಯವಾಗಿರಲಿಲ್ಲ. ಮುಂದಿನ ದಿನಗಳಲ್ಲಿ ಪ್ರತಿವರ್ಷ ಕೊಡಗು ಜಿಲ್ಲೆಗೆ ಆಗಮಿಸಿ ಕಿಡ್ನಿಗೆ ಸಂಬಂಧಿಸಿದಂತೆ ಹೆಚ್ಚಿನ ಆರೋಗ್ಯ ಸೇವೆ ಕಲ್ಪಿಸಲಾಗುವುದು ಎಂದು ಡಾ.ಕಾರ್ಯಪ್ಪ ಅವರು ಹೇಳಿದರು.

ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಕಳ್ಳಿಚಂಡ ಕಾರ್ಯಪ್ಪ ಇತರರು ಇದ್ದರು.

See also  ಮಡಿಕೇರಿ: ಕೊಡಗು ತುಳುವೆರ ಸಮಿತಿ ವತಿಯಿಂದ ಪ್ರೀಮಿಯರ್ ಲೀಗ್ ಕ್ರಿಕೆಟ್‍
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು