News Kannada
Tuesday, February 07 2023

ಮಡಿಕೇರಿ

ಮಡಿಕೇರಿ: ಮತದಾರರ ಪಟ್ಟಿಗೆ ಅರ್ಹ ನಾಗರಿಕರು ಮತ್ತು ಯುವ ಮತದಾರರ ನೋಂದಣಿ

Lords of democracy, your time has begun...
Photo Credit : IANS

ಮಡಿಕೇರಿ, ಜ.6: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಭಾವಚಿತ್ರವಿರುವ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯವನ್ನು ಕೈಗೊಂಡು ಅರ್ಹ ನಾಗರಿಕರನ್ನು ಮತ್ತು ಯುವ ಮತದಾರರನ್ನು ಮತದಾರರ ಪಟ್ಟಿಗೆ ನೋಂದಣಿ ಮಾಡಲು 2022 ರ ನವೆಂಬರ್, 09 ರಿಂದ 2022 ರ ಡಿಸೆಂಬರ್, 08 ರವರೆಗೆ ಹಕ್ಕು ಮತ್ತು ಆಕ್ಷೇಪಣೆಯನ್ನು ಸ್ವೀಕರಿಸಲಾಗಿದೆ.

ಹಾಗೆಯೇ 2022 ರ ನವೆಂಬರ್, 12, ನವೆಂಬರ್, 20, ಡಿಸೆಂಬರ್, 03 ಮತ್ತು ಡಿಸೆಂಬರ್, 04 ರಂದು ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ನೋಂದಣಿ ಕಾರ್ಯಕ್ರಮವನ್ನು ಸಹ ಹಮ್ಮಿಕೊಳ್ಳಲಾಗಿದೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕೊಡಗು ಜಿಲ್ಲೆಯ 208-ಮಡಿಕೇರಿ ಮತ್ತು 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿಯನ್ನು 2023 ರ ಜನವರಿ, 05 ರಂದು ಎಲ್ಲಾ ಮತಗಟ್ಟೆಗಳಲ್ಲಿ, ತಹಶೀಲ್ದಾರರ, ಉಪ ವಿಭಾಗಾಧಿಕಾರಿ, ಜಿಲ್ಲಾಧಿಕಾರಿ ಕಚೇರಿ ಹಾಗೂ ಜಿಲ್ಲೆಯ ಅಧಿಕೃತ ವೆಬ್‍ಸೈಟ್ https://kodagu.nic.in ರಲ್ಲಿ ಪ್ರಕಟಿಸಲಾಗಿದೆ.
ಪ್ರಸ್ತುತ ಕೊಡಗು ಜಿಲ್ಲೆಯ ಎರಡು ವಿಧಾನಸಭಾ ಕ್ಷೇತ್ರಗಳಿಂದ ಒಟ್ಟು 4,44,098 ಮತದಾರರು ಇದ್ದು, 208-ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,25,910 ಮತದಾರರು ಹಾಗೂ 209-ವಿರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,18,188 ಮತದಾರರು ಇದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ ಅವಧಿಯಲ್ಲಿ ಜಿಲ್ಲೆಯಲ್ಲಿರುವ ಎಲ್ಲಾ ಕಾಲೇಜುಗಳಲ್ಲಿ ವಿಶೇಷ ಅಭಿಯಾನವನ್ನು ಹಮ್ಮಿಕೊಂಡು ಮತದಾರರ ಪಟ್ಟಿಯಲ್ಲಿ ನೋಂದಣಿಯಾಗದೇ ಇರುವ ವಿದ್ಯಾರ್ಥಿಗಳನ್ನು ಗುರುತಿಸಿ, 18-19 ವರ್ಷದ ಒಟ್ಟು 3,747 ಯುವ ಮತದಾರರನ್ನು ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.

ಜಿಲ್ಲೆಯಲ್ಲಿರುವ 250 ಹಾಡಿಗಳ ಪೈಕಿ ಜನವಸತಿ ಇರುವ 76 ಹಾಡಿಗಳಲ್ಲಿ ವಾಸವಿರುವ ಜೇನುಕುರುಬ ಸಮುದಾಯದ ಜನಾಂಗದವರನ್ನು ಮತದಾರರ ಪಟ್ಟಿಯಲ್ಲಿ ನೋಂದಾಯಿಸಲು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಸಹಯೋಗದೊಂದಿಗೆ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ, ಸಮಾಜ ಕಲ್ಯಾಣ ಇಲಾಖೆ, ತಾಲ್ಲೂಕು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಅಧಿಕಾರಿಗಳ ವಿಶೇಷ ತಂಡವನ್ನು ರಚಿಸಿ, ಈ ತಂಡವು ಪ್ರತಿಯೊಂದು ಹಾಡಿಗಳಿಗೂ ಭೇಟಿ ನೀಡಿ, ಒಟ್ಟು 1002 ಮತದಾರರನ್ನು ಗುರುತಿಸಿ, ಮತದಾರರ ಪಟ್ಟಿಯಲ್ಲಿ ನೋಂದಣಿ ಮಾಡಲಾಗಿದೆ.

ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿ ಕಚೇರಿ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ಮತದಾರರು https://www.nvsp.in, https://voterportal.eci.gov.in ವೆಬ್‍ಸೈಟ್‍ನಲ್ಲಿ ಆನ್‍ಲೈನ್ ಮೂಲಕ ಮತ್ತು ವಿಎಚ್‍ಎ ಮೊಬೈಲ್ ಆಪ್ ಮೂಲಕ ಮಾಹಿತಿ ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಡಾ.ಬಿ.ಸಿ.ಸತೀಶ ಅವರು ತಿಳಿಸಿದ್ದಾರೆ.

See also  ಮೈಸೂರು ಅತ್ಯಾಚಾರ ಪ್ರಕರಣದಲ್ಲಿ ರಾಜಕೀಯ ಸರಿಯಲ್ಲ: ಸಚಿವ ಎಸ್.ಅಂಗಾರ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು