ಕುಶಾಲನಗರ: ಹೃದಯಾಘಾತದಿಂದ 6 ನೇ ತರಗತಿ ವಿದ್ಯಾರ್ಥಿ ಕೀರ್ತನ್ (12) ಭಾನುವಾರ ಮೃತಪಟ್ಟಿದ್ದಾನೆ.
ಕೂಡುಮಂಗಳೂರು ಗ್ರಾಮದ ಚಾಲಕ ಮಂಜಾಚಾರಿ ಅವರ ಪುತ್ರ ಕೊಪ್ಪಭಾರತ ಮಾತಾ ಶಾಲಾ ವಿದ್ಯಾರ್ಥಿ ಕೀರ್ತನ್ ಮರಣದ ಕಾರಣ ಎಲ್ಲರನ್ನು ದಂಗುಬಡಿಸಿದೆ.
ಶನಿವಾರ ತಡರಾತ್ರಿ ಮಲಗಿದ ಜಾಗದಿಂದ ಕೀರ್ತನ್ ಎರಡು ಬಾರಿ ಕಿರುಚಿಕೊಂಡಿದ್ದು ಪೋಷಕರು ಕುಶಾಲನಗರ ಆಸ್ಪತ್ರೆ ಕರೆದೊಯ್ಯುವ ವೇಳೆಗೆ ಬಾಲಕ ಮೃತಪಟ್ಟಿದ್ದಾನೆ.
ಈತ ಓದುತ್ತಿದ್ದ ಅದೇ ಶಾಲೆಯ ಬಸ್ ಚಾಲಕನಾಗಿ ಬಾಲಕನ ತಂದೆ ಕರ್ತವ್ಯ ನಿರ್ವಹಿಸುತ್ತಿದ್ದಾರೆ.