News Kannada
Saturday, January 28 2023

ಮಡಿಕೇರಿ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಹೆಡ್‌ಮಾಸ್ಟರ್ ಮೇಲೆ ಪೋಕ್ಸ್ ಕೇಸ್

Kodagu: High school headmaster booked for sexually harassing girl students
Photo Credit : IANS

ಕೊಡಗು: ಮಕ್ಕಳಿಗೆ ಪಾಠ ಮಾಡಬೇಕಾದ, ಬುದ್ಧಿ ಕಲಿಸಬೇಕಾದ ಮುಖ್ಯ ಶಿಕ್ಷಕನೊಬ್ಬ ತಾನೇ ಅವರಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಕೊಡಗಿನಲ್ಲಿ ನಡೆದಿದೆ.

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಹೈಸ್ಕೂಲ್ ಮುಖ್ಯ ಶಿಕ್ಷಕನೊಬ್ಬನ ಮೇಲೆ ಪೋಕೋ ಪ್ರಕರಣ ದಾಖಲಾಗಿದೆ. ಕೊಡಗು ಜಿಲ್ಲೆ ಮಡಿಕೇರಿ ತಾಲೂಕಿನ ನಾಪೋಕ್ಲು ಸಮೀಪದ ಚೆಯ್ಯಂಡಾಣೆಯ ಅನುದಾನಿತ ಶಾಲೆಯೊಂದರ ಮುಖ್ಯ ಶಿಕ್ಷಕ ಮನೋಹರ್ ಮೇಲೆ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪ ಎದುರಾಗಿದೆ.

ಪ್ರೌಢ ಶಾಲೆಯ ಇಬ್ಬರು ವಿದ್ಯಾರ್ಥಿನಿಯರಿಗೆ ಈತ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನಲಾಗಿದೆ. ಇವರಿಬ್ಬರೂ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದು, ಅವರನ್ನು ಮುಖ್ಯ ಶಿಕ್ಷಕರ ಕಚೇರಿಗೆ ಕರೆಸಿಕೊಂಡು ಅಸಭ್ಯ ವರ್ತನೆ ತೋರಿದ ಆರೋಪವಿದೆ.
ತಮಗೆ ಶಾಲೆಯಲ್ಲಿ ಲೈಂಗಿಕ ಕಿರುಕುಳ ನೀಡಲಾಗುತ್ತಿದೆ ಎಂದು ವಿದ್ಯಾರ್ಥಿಯರು ಪೋಷಕರಿಗೆ ತಿಳಿಸಿದ್ದರು. ಅವರು ಪೊಲೀಸ್ ಠಾಣೆಗೆ ದೂರು ನೀಡಿದರು. ಇದೀಗ ಮಡಿಕೇರಿಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕೋ ಪ್ರಕರಣ ದಾಖಲಾಗಿದೆ.

See also  ಮಡಿಕೇರಿ: ಚೆಟ್ಟಿಮಾನಿಯಲ್ಲಿ ಸಂಭ್ರಮದ ಕೆಸರುಗದ್ದೆ ಕ್ರೀಡಾಕೂಟ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles
Editor's Pick

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು