News Kannada
Saturday, February 04 2023

ಮಡಿಕೇರಿ

ಮಡಿಕೇರಿ: ಫೆ.03 ರಿಂದ 06 ರವರೆಗೆ ರಾಜಸೀಟಿನಲ್ಲಿ ಫಲಪುಷ್ಪ ಪ್ರದರ್ಶನ ಮತ್ತು ವೈನ್ ಉತ್ಸವ

Photo Credit : Facebook

ಮಡಿಕೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆ ಫೆಬ್ರವರಿ, 03 ರಿಂದ 06 ರವರೆಗೆ ನಗರದ ರಾಜಾಸೀಟು ಉದ್ಯಾನವನದಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ ಎಂದು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಈಗಾಗಲೇ ರಾಜಾಸೀಟು ಉದ್ಯಾನವನದಲ್ಲಿ 10 ರಿಂದ 12 ಸಾವಿರ ಸಂಖ್ಯೆಯ 15-20 ರೀತಿಯ ಹೂವುಗಳಾದ ಪೇಟೂನಿಯ, ಕ್ಯಾನ, ಸಾಲ್ವಿಯ, ಸೇವಂತಿಗೆ, ಚಂಡು ಹೂ, ಜೀನಿಯಾ, ಕ್ಯಾಲಾಂಡೂಲಾ, ಪ್ಲಾಕ್ಸ್, ವಿಂಕಾ ರೋಸಿಯಾ, ಡೇಲಿಯಾ, ಅಲಿಸಂ ಮತ್ತಿತರ ಗಿಡಗಳನ್ನು ಪಾತಿಯಲ್ಲಿ ಹಾಗೂ ಕುಂದಗಳಲ್ಲಿ ನಾಟಿ ಮಾಡಲಾಗಿದ್ದು, ಪ್ರದರ್ಶನದಲ್ಲಿ ಜೋಡಿಸಲಾಗುವುದು.

ಫಲಪುಷ್ಪ ಪ್ರದರ್ಶನದ ಮುಖ್ಯ ಆರ್ಕಷಣೆಯಾಗಿ ವಿವಿಧ ಹೂಗಳಿಂದ ಕಲಾಕೃತಿಗಳನ್ನು ನಿರ್ಮಿಸಿ ಪ್ರದರ್ಶನಕ್ಕೆ ಇಡಲಾಗುವುದು ಹಾಗೂ ಅಲಂಕಾರಿಕ ವಿವಿಧ ಹೂ ಕುಂದಗಳ ಪ್ರದರ್ಶನ, ಬೋನ್ ಸಾಯ್ ಪ್ರದರ್ಶನ, ತರಕಾರಿ ಕೆತ್ತನೆ ಪ್ರದರ್ಶಿಸಲಾಗುವುದು.

ಫಲಪುಷ್ಪ ಪ್ರದರ್ಶನ ಜೊತೆಗೆ ವೈನ್ ಉತ್ಸವ ಆಯೋಜಿಸಲಾಗುವುದು ವೈನ್ ಉತ್ಸವದಲ್ಲಿ ವಿವಿಧ ಹಣ್ಣುಗಳಿಂದ ತಯಾರಿಸಿದ ವೈನ್ ಜ್ಯೂಸ್‍ಗಳನ್ನು ಪ್ರದರ್ಶನ ಹಾಗೂ ಮಾರಾಟಕ್ಕೆ ಇಡಲಾಗುವುದು. ವೈನ್ ಉತ್ಸವದಲ್ಲಿ ಭಾಗವಹಿಸುವವರು ಸ್ವಂತ ಉತ್ಪಾದನಾ ಘಟಕ ಹೊಂದಿದ್ದು,  ದೃಢೀಕರಣ ಪ್ರಮಾಣ ಪತ್ರ ಹೊಂದಿರಬೇಕು. ಹಾಗೂ ಆಲ್ಕೋಹಾಲ್ ಪ್ರಮಾಣವು ಅಬಕಾರಿ ಕಾಯ್ದೆಯಡಿ ನಿಗಧಿಪಡಿಸಿದ ಪ್ರಮಾಣಕ್ಕಿಂತ ಕಡಿಮೆ ಇರಬೇಕು.

ಗಾಂಧಿ ಮೈದಾನದಲ್ಲಿ ವಿವಿಧ ನರ್ಸರಿ ಗಿಡಗಳ ಮಾರಾಟ ಮಳಿಗೆ, ಕೃಷಿ ಪರಿಕರಗಳ ಪ್ರದರ್ಶನ, ತೋಟಗಾರಿಕೆ, ಇತರೆ ಇಲಾಖೆಯ ವಸ್ತು ಪ್ರದರ್ಶನದ ಮಳಿಗೆ ಆಯೋಜಿಸಲಾಗುವುದು. ರೈತರು ಬೆಳೆದಿರುವ ವಿಶಿಷ್ಟವಾದ ಹಣ್ಣುಗಳು, ತರಕಾರಿ, ತೋಟದ ಬೆಳೆಗಳು, ಸಂಬಾರ ಬೆಳೆಗಳನ್ನು ಪ್ರದರ್ಶಿಸಲು ಉದ್ದೇಶಿಸಲಾಗಿದೆ.

ಅತ್ಯುತ್ತಮ ಹಣ್ಣು, ತರಕಾರಿ, ಮತ್ತಿತರ ಪ್ರದರ್ಶನಕ್ಕೆ ಬಹುಮಾನ ನೀಡಲಾಗುವುದು. ತೋಟಗಾರಿಕೆಯಲ್ಲಿ ಆಸಕ್ತಿಯಿರುವ ಮಹಿಳೆಯರಿಗೆ ಹಾಗೂ ಸಾರ್ವಜನಿಕರಿಗೆ ಒಣ ಹೂ ಜೋಡಣೆ, ಬಿಡಿ ಹೂ ಜೋಡಣೆ, ಇಕೆಬಾನೆ, ರಂಗೋಲಿ ಸ್ಪರ್ಧೆ ಆಯೋಜಿಸಲಾಗುವುದು. ಆಸಕ್ತರು ಹೆಚ್ಚಿನ ಮಾಹಿತಿಗೆ ತೋಟಗಾರಿಕೆ ಇಲಾಖೆ ಅಧಿಕಾರಿ ಅವರನ್ನು ಸಂಪರ್ಕಿಸಬಹುದು ಎಂದು ತೋಟಗಾರಿಕೆ ಉಪ ನಿರ್ದೇಶಕರಾದ ಪ್ರಮೋದ್ ಅವರು ತಿಳಿಸಿದ್ದಾರೆ.

See also  ದುಬೈ: ಐಸಿಸಿ ಏಕದಿನ ರ‍್ಯಾಂಕಿಗ್ ನಲ್ಲಿ ಅಗ್ರಸ್ಥಾನ ಪಡೆದ ಜಸ್ಪ್ರೀತ್ ಬುಮ್ರಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1620
Coovercolly Indresh

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು