News Kannada
Sunday, March 26 2023

ಮಡಿಕೇರಿ

ಮಾ.12ಕ್ಕೆ ಕೋಟೇಶ್ವರದಲ್ಲಿ ಜಿಲ್ಲಾ ಮಹಿಳಾ ಸಮಾವೇಶ : ವೀಣಾ ಎಸ್. ಶೆಟ್ಟಿ

District Women's Conference to be held at Koteshwar on Mar. 12: Veena S. Shetty
Photo Credit : News Kannada

ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಬೃಹತ್ ಮಹಿಳಾ ಸಮಾವೇಶವು ಮಾ.12ರಂದು ಮಧ್ಯಾಹ್ನ 3 ಗಂಟೆಗೆ ಕುಂದಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೋಟೇಶ್ವರದ ಕುರುಕ್ಷೇತ್ರ ಮೈದಾನದಲ್ಲಿ ನಡೆಯಲಿದೆ ಎಂದು ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.

ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಬೃಹತ್ ಮಹಿಳಾ ಸಮಾವೇಶವನ್ನು ಉದ್ಘಾಟಿಸಲಿದ್ದು, ಖ್ಯಾತ ಚಲನಚಿತ್ರ ನಟಿ ಹಾಗೂ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಮಾಳವಿಕಾ ಅವಿನಾಶ್ ರವರು ದಿಕ್ಸೂಚಿ ಭಾಷಣ ಮಾಡಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಮುಖ್ಯ ಅತಿಥಿಗಳಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲೆಯ ಸಚಿವರು, ಶಾಸಕರು ಹಾಗೂ ಪಕ್ಷದ ರಾಜ್ಯ ಮತ್ತು ಜಿಲ್ಲಾ ಮುಖಂಡರು ಭಾಗವಹಿಸಲಿದ್ದಾರೆ.

ಪಕ್ಷದ ಪ್ರಮುಖರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠಗಳ ಸಹಿತ ಜಿಲ್ಲೆಯ ಎಲ್ಲ ಆರು ಮಂಡಲಗಳ ವ್ಯಾಪ್ತಿಯ ಮಹಿಳಾ ಮೋರ್ಚಾ ಮತ್ತು ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಕಾರ್ಯಕರ್ತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಜಿಲ್ಲಾ ಮಹಿಳಾ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ವಿನಂತಿಸಿದ್ದಾರೆ.

See also  ಉಡುಪಿ: ಪಕ್ಕಿಬೆಟ್ಟು ಶ್ರೀ ಬ್ರಹ್ಮಬೈದರ್ಕಳ ಗರೋಡಿಗೆ ಶಾಸಕ ರಘುಪತಿ ಭಟ್ ಭೇಟಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು