News Kannada
Monday, October 02 2023
ಮಡಿಕೇರಿ

ಮಡಿಕೇರಿ: ಹೋಂ-ಸ್ಟೇ, ಹೋಟೆಲ್, ರೆಸಾರ್ಟ್ ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನ ಪಾಲಿಸಿ

Election irregularities worth Rs 278 crore Rs. Cash, cash, assets seized
Photo Credit : Pixabay

ಮಡಿಕೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆ ಮಾದರಿ ನೀತಿ ಸಂಹಿತೆ ಜಾರಿಯಾಗಿರುವುದರಿಂದ ಇತ್ತೀಚೆಗೆ ಜಿಲ್ಲಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯಲ್ಲಿನ ಹೋಂ-ಸ್ಟೇ, ಹೋಟೆಲ್, ರೆಸಾರ್ಟ್ ಗಳಲ್ಲಿ ಚುನಾವಣಾ ಆಯೋಗದ ನಿರ್ದೇಶನದಂತೆ ಹೋಂ-ಸ್ಟೇ/ ಹೋಟೆಲ್/ ರೆಸಾರ್ಟ್ ಗಳಿಗೆ ಆಗಮಿಸುವ ಅತಿಥಿಗಳ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು ಹಾಗೂ ಕಡ್ಡಾಯವಾಗಿ ಆಧಾರ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ವೋಟರ್ ಐಡಿ ಇವುಗಳಲ್ಲಿ ಯಾವುದಾದರು ಒಂದು ಗುರುತಿನ ದಾಖಲಾತಿಯನ್ನು ಪಡೆಯುವುದು.

ಹೋಂ-ಸ್ಟೇ/ಹೋಟೆಲ್/ ರೆಸಾರ್ಟ್ ಗಳಲ್ಲಿ ಕಡ್ಡಾಯವಾಗಿ ಸಿ.ಸಿ.ಕ್ಯಾಮೆರಾಗಳನ್ನು ಅಳವಡಿಸುವುದು ಹಾಗೂ ಸಿಸಿ ಟಿವಿಯ ಒಂದು ತಿಂಗಳ ತುಣುಕುಗಳನ್ನು ಸಂಗ್ರಹಿಸುವುದು. ಹೋಂ-ಸ್ಟೇ/ಹೋಟೆಲ್/ರೆಸಾರ್ಟ್ ಗಳಿಗೆ ಆಗಮಿಸುವ ಅತಿಥಿಗಳ ವಾಹನದ ವಿವರಗಳನ್ನು ನೋಂದಣಿ ಪುಸ್ತಕದಲ್ಲಿ ಕಡ್ಡಾಯವಾಗಿ ನಮೂದಿಸುವುದು.

ಹೋಂ-ಸ್ಟೇ/ಹೋಟೆಲ್/ರೆಸಾರ್ಟ್ ಗಳಲ್ಲಿ ಯಾವುದೇ ರೀತಿಯ ರಾಜಕೀಯ ಪ್ರಚಾರಗಳನ್ನು ಮಾಡುವಂತಿಲ್ಲ. ಯಾವುದೇ ಕಾರ್ಯಕ್ರಮಗಳು ರಾಜಕೀಯ ಪ್ರೇರಿತವಾಗಿರಬಾರದು. ಕಾನೂನು ಬಾಹಿರ ಚಟುವಟಿಕೆಗಳು ನಡೆಸಬಾರದು. ಜಿಲ್ಲೆಯ ಹೋಂ-ಸ್ಟೇ ಮಾಲೀಕರು ಕಡ್ಡಾಯವಾಗಿ ಪ್ರವಾಸೋದ್ಯಮ ಇಲಾಖೆಯ ಅಂತರ್ಜಾಲ ತಾಣ http://karnatakatourism.org/kttf ಮುಖಾಂತರ ಆನ್ಲೈನ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು. ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವುದು ಹಾಗೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಎಚ್ಚರವಹಿಸುವಂತೆ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕರು ಹಾಗೂ ಉಪವಿಭಾಗಾಧಿಕಾರಿ ಯತೀಶ್ ಉಳ್ಳಾಲ್ ಅವರು ತಿಳಿಸಿದ್ದಾರೆ.

See also  ಮಂಗಳೂರು: ಮಂಕಿ ಫಾಕ್ಸ್ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳಿಗೆ ಜಿಲ್ಲಾಧಿಕಾರಿ ಸೂಚನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು