News Kannada
Friday, March 01 2024
ಮಡಿಕೇರಿ

ಮಡಿಕೇರಿ: ಪ್ರಿಯಾಂಕ ಖರ್ಗೆ ಹೇಳಿಕೆಗೆ ಕೊಡಗು ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

Madikeri: Kodagu BJP Mahila Morcha condemns Priyank Kharge's remarks
Photo Credit :

ಮಡಿಕೇರಿ,ಆ.26: ಕಾಂಗ್ರೆಸ್ ಶಾಸಕ ಪ್ರಿಯಾಂಕ ಖರ್ಗೆ ಅವರು ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದು, ಇದನ್ನು ತೀವ್ರವಾಗಿ ಖಂಡಿಸುವುದಾಗಿ ಕೊಡಗು ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಚೋಡುಮಾಡ ಶರೀನ್ ಸುಬ್ಬಯ್ಯ, ಪ್ರಧಾನ ಕಾರ್ಯದರ್ಶಿಗಳಾದ ಅನಿತಾ ಪೂವಯ್ಯ ಹಾಗೂ ಬಿ.ಎನ್.ಭುವನೇಶ್ವರಿ ತಿಳಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರುಗಳು ಉದ್ಯೋಗದ ವಿಚಾರದಲ್ಲಿ ಸರ್ಕಾರವನ್ನು ಟೀಕಿಸುವ ನೆಪದಲ್ಲಿ ಕಾಂಗ್ರೆಸ್ ಶಾಸಕ ಮಹಿಳೆಯರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಇದು ರಾಜ್ಯದ ಎಲ್ಲಾ ಮಹಿಳಾ ಸಮೂಹಕ್ಕೆ ಮಾಡಿದ ಅಪಮಾನವಾಗಿದೆ. ಇವರ ಹೇಳಿಕೆ ಕಾಂಗ್ರೆಸ್ ಸಂಸ್ಕೃತಿಯನ್ನು ಪ್ರತಿಬಿಂಬಿಸಿದೆ ಎಂದು ಆರೋಪಿಸಿದ್ದಾರೆ.

ಪ್ರಿಯಾಂಗ ಖರ್ಗೆ ಅವರು ತಾವು ನೀಡಿದ ಹೇಳಿಕೆಯನ್ನು ಹಿಂದಕ್ಕೆ ಪಡೆದು ಮಹಿಳೆಯರ ಕ್ಷಮೆ ಕೇಳಬೇಕು ಮತ್ತು ಕಾಂಗ್ರೆಸ್ ಪಕ್ಷ ಇವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಶರೀನ್ ಸುಬ್ಬಯ್ಯ ಒತ್ತಾಯಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು