News Kannada
Friday, March 01 2024
ಮಡಿಕೇರಿ

ಮಡಿಕೇರಿ: ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹ

Madikeri: Veerashaiva Lingayat Jangamas demand that scheduled caste certificates should not be issued to them.
Photo Credit :

ಮಡಿಕೇರಿ, ಆ.30: ವೀರಶೈವ ಲಿಂಗಾಯತ ಜಂಗಮರಿಗೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡದಂತೆ ಆಗ್ರಹಿಸಿ ರಾಜ್ಯಾದ್ಯಂತ ಏಕಕಾಲದಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿ ನಗರದಲ್ಲೂ ಪ್ರೋ.ಬಿ.ಕೃಷ್ಣಪ್ಪ ಸ್ಥಾಪಿತ ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೊಡಗು ಜಿಲ್ಲಾ ಘಟಕ ಪ್ರತಿಭಟನೆ ನಡೆಸಿತು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಎದುರು ಜಮಾಯಿಸಿದ ಸಂಘಟನೆಯ ಪ್ರಮುಖರು ಹಾಗೂ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ ಬೇಡಿಕೆಯ ಈಡೇರಿಕೆಗಾಗಿ ಆಗ್ರಹಿಸಿದರು.

ಈ ಸಂದರ್ಭ ಸಂಘಟನೆಯ ಜಿಲ್ಲಾ ಸಂಚಾಲಕಿ ಗಾಯತ್ರಿ ನರಸಿಂಹ ಮಾತನಾಡಿ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಹೆಸರಿನಲ್ಲಿ ಈಗಾಗಲೇ ರಾಜ್ಯದಲ್ಲಿ 1.5 ಲಕ್ಷಕ್ಕೂ ಹೆಚ್ಚು ಜನ ನಕಲಿ ಬೇಡಜಂಗಮರ ಜಾತಿ ಪ್ರಮಾಣ ಪತ್ರಗಳನ್ನು ಪಡೆದುಕೊಂಡು ಸರ್ಕಾರಿ ನೌಕರಿ ಮತ್ತು ಸೌಲಭ್ಯಗಳು ಪಡೆಯುತ್ತಿದ್ದಾರೆ ಎಂದು ಆರೋಪಿಸಿದರು.

ಬೇಡಿಕೆಗಳು
ಅಲ್ಲದೆ ಅನೇಕ ಸಂಘ ಸಂಸ್ಥೆಗಳ ಜನಪ್ರತಿನಿಧಿಗಳು ವಿವಿಧ ಸಂಸ್ಥೆಗಳಲ್ಲಿ ರಾಜಕೀಯ ಪ್ರಾತಿನಿಧ್ಯ ಪಡೆದುಕೊಂಡಿದ್ದು, ಇಂತಹ ಸುಳ್ಳು ಪ್ರಮಾಣ ಪತ್ರಗಳ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಲು ಪ್ರತಿ ಜಿಲ್ಲೆಯಲ್ಲೂ ವಿಶೇಷ ನ್ಯಾಯಾಲಯ ಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಅಖಿಲ ಕರ್ನಾಟಕ ಡಾ.ಅಂಬೇಡ್ಕರ್ ಬೇಡ ಜಂಗಮ ಪರಿಶಿಷ್ಟ ಜಾತಿ ರಕ್ಷಣಾ ವೇದಿಕೆ ಸಂಸ್ಥೆಯ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕು ಹಾಗೂ ಈ ಸಂಸ್ಥೆಯು ವಿತರಿಸುವ ಬೇಡಜಂಗಮ ಜಾತಿ ಗುರುತಿನ ಚೀಟಿಗಳನ್ನು ಪರಿಗಣಿಸಿ ಜಾತಿ ಸಿಂಧುತ್ವ ಪ್ರಮಾಣ ಪತ್ರಗಳನ್ನು ನೀಡಬಾರದು. ಒಂದು ವೇಳೆ ಪ್ರಮಾಣಪತ್ರವನ್ನು ನೀಡಿದ್ದು ಕಂಡುಬಂದಲ್ಲಿ ಅಂತಹ ಅಧಿಕಾರಿಗಳನ್ನು ಸೇವೆಯಿಂದ ವಜಾ ಮಾಡಬೇಕು. ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ಶಿಕ್ಷಣ ಮತ್ತು ಉದ್ಯೋಗ ಮತ್ತಿತರ ಸೌಲಭ್ಯಗಳನ್ನು ಪಡೆದಿರುವವರನ್ನು ಶಿಕ್ಷೆಗೆ ಗುರಿಪಡಿಸಬೇಕು, ಸಳ್ಳು ಪ್ರಮಾಣ ಪತ್ರ ನೀಡುವ ಅಧಿಕಾರಿ ವಿರುದ್ಧ ಪರಿಶಿಷ್ಟ ಜಾತಿ, ಪಂಗಡಗಳ ದೌರ್ಜನ್ಯ ತಡೆ ಕಾಯ್ದೆ-1989ರ ಕೇಸು ದಾಖಲಿಸಿ ಜೈಲಿಗೆ ಕಳುಹಿಸಬೇಕೆಂದು ಗಾಯತ್ರಿ ಎಂದು ಆಗ್ರಹಿಸಿದರು.

ಜಿಲ್ಲಾ ಸಂಘಟನಾ ಸಂಚಾಲಕರಾದ ಹೆಚ್.ಮಂಜುನಾಥ್, ಬಾವ ಮಾಲ್ದಾರೆ, ನಾಗೇಶ್, ಸದಸ್ಯ ಎನ್.ಆರ್.ದೇವರಾಜ್ ಕುಡ್ಲೂರು, ದಲಿತ ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪವಿತ್ರ ಶಿವಕುಮಾರ್, ಸೋಮವಾರಪೇಟೆ ತಾಲೂಕು ಸಂಚಾಲಕ ಹೆಚ್.ಎ.ನಾಗರಾಜು, ವಿರಾಜಪೇಟೆ ತಾಲೂಕು ಸಂಚಾಲಕ ಹೆಚ್.ಆರ್.ಮನು, ಪ್ರಮುಖರಾದ ಸುಶೀಲಾ ವಿನೋದ್, ಹೆಚ್.ಎಂ.ರೇಖಾ, ಹೆಚ್.ಸಿ.ಭಾನುಮತಿ, ಹೆಚ್.ಹೆಚ್.ಗೌರಮ್ಮ, ರಾಜು ಮೇಧ, ಜಿ.ರಘು ಪಾಲ್ಗೊಂಡಿದ್ದರು. ಬೇಡಿಕೆಯ ಮನವಿ ಪತ್ರವನ್ನು ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ನಂಜುಂಡೇಗೌಡ ಅವರ ಮೂಲಕ ಮುಖ್ಯಮಂತ್ರಿಗಳಿಗೆ ನೀಡಲಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1620
Coovercolly Indresh

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು