News Kannada
Wednesday, March 22 2023

ಮಂಡ್ಯ

ಕಾವೇರಿ ನೀರು ಹೋರಾಟ ಮಾಡಿದ ರೈತರ ವಿರುದ್ಧ ದಾಖಲಾಗಿದ್ದ ಪ್ರಕರಣ ಹಿನ್ನೆಲೆ, ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಆದೇಶ

Photo Credit :

ಮಂಡ್ಯ: 2016ರಲ್ಲಿ ಕಾವೇರಿ ನೀರಿಗಾಗಿ ಹೋರಾಟ  ಮಾಡಿದಂತ ರೈತರ ವಿರುದ್ಧ ದಾಖಲಾಗಿದ್ದಂತ ಪ್ರಕರಣ ಸಂಬಂಧ, ಇದೀಗ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಆದೇಶ ಹೊರಡಿಸಿದೆ. ಈ ಮೂಲಕ ರೈತರಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದೆ.

ಈ ಕುರಿತಂತೆ ಮಂಡ್ಯ ಜಿಲ್ಲೆಯ ಪಾಂಡವಪುರದ 139 ರೈತರ ವಿರುದ್ಧ ಕಾವೇರಿ ನೀರಿಗಾಗಿ ಹೋರಾಟ ಮಾಡಿದಂತ ಸಂದರ್ಭದಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಬಾರಿ ಕೇಸ್ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿತ್ತು. ಈ ಹಿನ್ನಲೆಯಲ್ಲಿ ರಾಜಕಾರಣಿಗಳಿಗೆ ರೈತರು ಪ್ರಕರಣ ವಾಪಾಸ್ ಪಡೆಯುವಂತೆ ಮನವಿ ಮಾಡಿದ್ದರು.

ಹೀಗೆ ಮನವಿ ಮಾಡಿದ್ದರೂ ರಾಜಕಾರಣಿಗಳ ನಿರ್ಲಕ್ಷ್ಯದಿಂದಾಗಿ ಇದುವರೆಗೆ ರೈತರ ವಿರುದ್ಧ ದಾಖಲಿಸಲಾಗಿದ್ದಂತ ಪ್ರಕರಣಗಳನ್ನು ವಾಪಾಸ್ ಪಡೆದಿರಲಿಲ್ಲ. ಈ ಹಿನ್ನಲೆಯಲ್ಲಿ ಇದೀಗ ಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಇದರಿಂದಾಗಿ ರೈತರಿಗೆ ಕಾನೂನು ಹೋರಾಟ ಮಾಡೋದು ತಪ್ಪಿಲ್ಲ. ಒಂದು ತಿಂಗಳೊಳಗೆ ಪ್ರಕರಣ ವಾಪಾಸ್ ಪಡೆಯದೇ ಇದ್ದರೇ, ಉಪವಾಸ ಸತ್ಯಾಗ್ರಹ ನಡೆಸೋದಾಗಿ ಎಚ್ಚರಿಕೆ ನೀಡಿದ್ದಾರೆ.

See also  ಮಂಡ್ಯ: ಸಾವಿನಲ್ಲೂ ಒಂದಾದ ಅಮ್ಮ ಮಗ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

44
News Kannada

The most exciting, trusted and preferred news websites of Karnataka and Kannadigas around the world.

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು