ಮಂಡ್ಯ : ಸ್ಥಳೀಯ ಸಂಸ್ಥೆಗಳಿಂದ ಮೇಲ್ಮನೆಗೆ ನಡೆಯುತ್ತಿರುವ ಚುನಾವಣೆಯಲ್ಲಿ ಮಂಡ್ಯ ಸೇರಿದಂತೆ ರಾಜ್ಯದಲ್ಲಿ 15 ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ವಿಪಕ್ಷನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದರು.
ಸುದ್ಧಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಮೇಲ್ಮನೆಗೆ ನಡೆಯುತ್ತಿರುವ 25 ಸ್ಥಾನಗಳಲ್ಲಿ 20 ಸ್ಥಾನಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ.
ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳದೆ ಸ್ವತಂತ್ರವಾಗಿ ಸ್ಪರ್ಧೆ ಮಾಡಿದ್ದೇವೆ ಎಂದು ಹೇಳಿದರು.