News Kannada
Friday, December 02 2022

ಮಂಡ್ಯ

ಮಸೀದಿ ಕುರಿತು ವಿವಾದಿತ ಹೇಳಿಕೆ: ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ದೂರು ದಾಖಲು

Photo Credit :

ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಕುರಿತು ಸಾಮಾಜಿಕ ಜಾಲತಾಣದಲ್ಲಿ ವಿವಾದಿತ ಹೇಳಿಕೆ ನೀಡಿ ವಿಡಿಯೋ ಹರಿಬಿಟ್ಟಿದ್ದ ಕಾಳಿ ಮಠದ ಋಷಿಕುಮಾರಸ್ವಾಮಿ ವಿರುದ್ಧ ಪಟ್ಟಣ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಖಾಸಗಿ ಕಾರ್ಯಕ್ರಮ ನಿಮಿತ್ತ ಶ್ರೀರಂಗಪಟ್ಟಣಕ್ಕೆ ಆಗಮಿಸಿದ್ದ ಅರಸೀಕೆರೆಯ ಕಾಳಿ ಮಠದ ಋಷಿಕುಮಾರ ಸ್ವಾಮೀಜಿ, ಮಸೀದಿ ಮುಂಭಾಗದಲ್ಲೇ ನಿಂತು ವಿವಾದಿತ ಹೇಳಿಕೆ ಉಲ್ಲೇಖಿಸಿ ವಿಡಿಯೋ ಚಿತ್ರೀಕರಣ ನಡೆಸಿ, ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದ ತಮ್ಮ ಖಾತೆಯಲ್ಲಿ ಪ್ರಕಟಿಸಿದ್ದಾರೆ.

ಇದೀಗ ಈ ವಿಡಿಯೋ ವೈರಲ್​ ಆಗಿದೆ. ಈ ಹಿನ್ನೆಲೆ ಮಸೀದಿಗೆ ಭದ್ರತೆ ಹೆಚ್ಚಿಸುವ ಕುರಿತು ವಕ್ಫ್​ ಬೋರ್ಡ್​ ಸಮಿತಿ ಹಾಗೂ ಕೇಂದ್ರ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಶ್ರೀರಂಗಪಟ್ಟಣ ಪಟ್ಟಣ ಪೊಲೀಸ್​ ಠಾಣೆಗೆ ಮನವಿ ಮಾಡಿವೆ. ಮಸೀದಿ ಭದ್ರತೆಗೆ ನಿಯೋಜನೆಗೊಂಡ ಸಿಬ್ಬಂದಿ ನೀಡಿರುವ ಲಿಖಿತ ಮಾಹಿತಿ ಪ್ರಕಾರ ವಿಡಿಯೋದಲ್ಲಿ ಮಾತನಾಡಿರುವ ಋಷಿಕುಮಾರಸ್ವಾಮಿ ಹಾಗೂ ವಿಡಿಯೋ ಚಿತ್ರೀಕರಿಸಿದ ಇಬ್ಬರ ಮೇಲೂ ದೂರು ದಾಖಲಾಗಿದೆ.

ಇತ್ತೀಚೆಗೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ನಮ್ಮಮ್ಮ ಸೂಪರ್​ ಸ್ಟಾರ್​ ಖ್ಯಾತಿಯ ಸಮನ್ವಿ ಅಸ್ಥಿ ವಿಸರ್ಜನೆಗೆ ಆಗಮಿಸಿದ್ದ ಋಷಿ ಕುಮಾರಸ್ವಾಮಿ, ವಾರಾಂತ್ಯದ ಕರ್ಫ್ಯೂ ನಡುವೆ ಈ ವಿವಾದಿತ ವಿಡಿಯೋ ಮಾಡಿದ್ದರು.

See also  ಆಲಿಕಲ್ಲು ಮಳೆಗೆ ನೂರಾರು ಗಿಳಿಗಳು ಸಾವು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು