ಬೆಂಗಳೂರು: ಕೆರಗೋಡು ವಿಧಾನಸಭಾ ಕ್ಷೇತ್ರದಿಂದ ನಾಲ್ಕ ಬಾರಿ ಶಾಸಕ, ಒಮ್ಮೆ ವಿಧಾನ ಪರಿಷತ್ ಸದಸ್ಯ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರೂ ಆಗಿದ್ದ ಡಾ.ಎಚ್.ಡಿ.ಚೌಡಯ್ಯ (94) ಮಂಗಳವಾರ ತಡರಾತ್ರಿ ಅನಾರೋಗ್ಯದಿಂದ ನಿಧನರಾದರು.
ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಮಾಡಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ.
ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದರು ಎಂದು ತಿಳಿಸಿದ್ದಾರೆ.
ಮಾಜಿ ಶಾಸಕರು, ಶಿಕ್ಷಣ ತಜ್ಞರು, ಶಿಸ್ತು, ದಕ್ಷ ಆಡಳಿಗಾರರೂ ಆಗಿದ್ದ ಹೆಚ್.ಡಿ.ಚೌಡಯ್ಯ ಅವರ ನಿಧನ ನನಗೆ ಬಹಳ ನೋವನ್ನುಂಟು ಮಾಡಿದೆ. ನಾಲ್ಕು ಅವಧಿಗೆ ಶಾಸಕರು, ಎರಡು ಅವಧಿಗೆ ವಿಧಾನ ಪರಿಷತ್ ಸದಸ್ಯರೂ ಆಗಿದ್ದ ಅವರು ಆದರ್ಶ ಜನಪ್ರತಿನಿಧಿ ಆಗಿದ್ದರು. ವಿವಿಧ ಕ್ಷೇತ್ರಗಳಲ್ಲಿ ಸಮಾಜಕ್ಕೆ ಎಣೆ ಇಲ್ಲದಷ್ಟು ಸೇವೆ ಸಲ್ಲಿಸಿದ್ದರು.