News Kannada

ಮಂಡ್ಯ

ಮಕ್ಕಳ ಮನೋವಿಕಾಸಕ್ಕೆ ಬೇಸಿಗೆ ಶಿಬಿರಗಳು ಅಗತ್ಯ: ಚಿಕ್ಕಸ್ವಾಮಿ - 1 min read

Photo Credit : News Kannada

ಮಳವಳ್ಳಿ: ಬೇಸಿಗೆ ಶಿಬಿರಗಳಲ್ಲಿ ಮಕ್ಕಳ ವ್ಯಕ್ತಿತ್ವ ವಿಕಸನ ಮಾತ್ರವಲ್ಲ ಮನೋವಿಕಸನ ಕೂಡ ಆಗುತ್ತದೆ ಎಂದು ಮಳವಳ್ಳಿ ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ ಹೇಳಿದರು.

ಅವರು ತಾಲೂಕಿನ ಚೆನ್ನಿಪುರ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಆವರಣದಲ್ಲಿ ಸ್ಪರ್ಶ ಮಕ್ಕಳ ಕೇಂದ್ರ ಹಾಗೂ ರಂಗ ಬಂಡಿ ರಂಗ ಸಹಯೋಗದಲ್ಲಿ ಏರ್ಪಡಿಸಿದ್ದ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ ನಗರಗಳಲ್ಲಿ ನಾಯಿಕೊಡೆಗಳಂತೆ ಬೇಸಿಗೆ ಶಿಬಿರಗಳು ಬರಿ ಹಣ ಮಾಡುವ ಕೇಂದ್ರಗಳಾಗಿ ನಡೆಯುತ್ತಿವೆ. ಆದರೆ ಹಳ್ಳಿಗಾಡಿನ ಈ ಭಾಗದಲ್ಲಿ ಮಕ್ಕಳ ಪ್ರತಿಭಾ ಪ್ರದರ್ಶನಕ್ಕೆ ಒಂದು ತಿಂಗಳುಗಳ ಕಾಲ  ಶಿಬಿರ ಏರ್ಪಡಿಸಿ ಅದರಲ್ಲೂ ಸಂವಿಧಾನ ಶಿಲ್ಪಿ ಬಾಬಾಸಾಹೇಬ್ ಡಾ. ಬಿ.ಆರ್ ಅಂಬೇಡ್ಕರ್ ಬುದ್ಧ  ಜಗಜ್ಯೋತಿ ಬಸವೇಶ್ವರರ ಜನ್ಮದಿನಾಚರಣೆಯ ನ್ನು ಆಚರಿಸಿ ಮಕ್ಕಳಿಗೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಆಯೋಜಿಸಿರುವುದು ಪ್ರಶಂಸನೀಯ ಕಾರ್ಯ ಎಂದು ಶ್ಲಾಘಿಸಿದರು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕರ್ನಾಟಕ ಜಾನಪದ ಅಕಾಡೆಮಿ ಸದಸ್ಯ ಸಿಎಂ ನರಸಿಂಹಮೂರ್ತಿ ಮಾತನಾಡಿ ಮಕ್ಕಳಲ್ಲಿ ಕ್ರಿಯಾಶೀಲತೆಯನ್ನು ಹೆಚ್ಚಿಸಿಕೊಳ್ಳಲು ಬೇಸಿಗೆ ಶಿಬಿರಗಳು ಸರಿಯಾದ ವೇದಿಕೆ.  ಜಾನಪದ ಚಿತ್ರಕಲೆ ನಾಟಕ ನೃತ್ಯ ಮೊದಲಾದ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳಿಗೆ ಸಾಧ್ಯವಾಗಬಹುದಾದ ಹೊಸ ನೆಲೆಗಟ್ಟನ್ನು ಒದಗಿಸಬಲ್ಲವು ಎಂದರು. ಇದೇ ಸಂದರ್ಭದಲ್ಲಿ ಜಗಜ್ಯೋತಿ ಬಸವೇಶ್ವರರ ಕಾಯಕ ಸಮಾನತೆ ಅರಿವು ಮತ್ತು ದಾಸೋಹದ ಚಿಂತನೆಗಳನ್ನು ಮಕ್ಕಳಿಗೆ ವಿವರಿಸಿದರು.

ಸಮಾರಂಭದಲ್ಲಿ ಎಸ್ ಡಿ ಎಂ ಸಿ ಅಧ್ಯಕ್ಷ ನಾಗಲಿಂಗೇ ಗೌಡ ಅಧ್ಯಕ್ಷತೆ ವಹಿಸಿದ್ದರು ಮುಖ್ಯ ಅತಿಥಿಗಳಾಗಿ  ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯ ಮುಖ್ಯ ಶಿಕ್ಷಕ ಸಿ.ಮಹದೇವಯ್ಯ ಮಳವಳ್ಳಿ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಚೇತನ್ ಕುಮಾರ್, ಉಪಾಧ್ಯಕ್ಷ ಸಿ.ಎಂ.ಶಿವರಾಜು ಬಿಆರ್ ಸಿ ದಿನೇಶ್ ಬಾಬು, ಗ್ರಾಮ ಪಂಚಾಯಿತಿ ಸದಸ್ಯರುಗಳಾದ ತೇಜಸ್ವಿನಿ ಸುನಂದಮ್ಮ ಸುಜಾತ ಸರೋಜಮ್ಮ ಸಿಎಂ ನಟೇಶ್ ಹಾಜರಿದ್ದರು.

ಶಿಬಿರದ ನಿರ್ದೇಶಕರಾದ ಮಧು ಮಳವಳ್ಳಿ ನಿರ್ದೇಶನದಲ್ಲಿ ಬೊಮ್ಮನಹಳ್ಳಿಯ ಕಿಂದರಿಜೋಗಿ ಹಾಗೂ ನಾಣಿ ಭಟ್ಟನ ಸ್ವರ್ಗದ ಕನಸು ನಾಟಕಗಳನ್ನು ಮಕ್ಕಳು ಮನೋಜ್ಞವಾಗಿ ಅಭಿನಯಿಸಿದರು.

ಸ್ಪರ್ಶ ಮಕ್ಕಳ ಕೇಂದ್ರದ ಮುಖ್ಯಸ್ಥ ಸಂಸ ಸುರೇಶ್ ಚನ್ನಿ ಪುರದ ಸ್ತ್ರೀಶಕ್ತಿ ಸ್ವಸಹಾಯ ಸಂಘದ  ಮಹಿಳಾ ಸದಸ್ಯರು ಯುವಕ ಸಂಘದ ಪದಾಧಿಕಾರಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.  ಇದೇ ಸಂದರ್ಭದಲ್ಲಿ ಶಿಬಿರದಲ್ಲಿ ಭಾಗವಹಿಸಿದ್ದ ಮಕ್ಕಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

See also  ಎಸ್‌ಡಿಎಂನಲ್ಲಿ ಬೇಸಿಗೆ ಶಿಬಿರ ಆರಂಭ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles
Subscribe to our Brand New YouTube Channel

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು