News Kannada
Thursday, September 28 2023
ಮಂಡ್ಯ

ದುದ್ದದಲ್ಲಿ ಮಂಡ್ಯ ತಾಲೂಕು 17ನೇ ಕನ್ನಡ ಸಾಹಿತ್ಯ ಸಮ್ಮೇಳನ

17th Kannada Sahitya Sammelana of Mandya Taluk at Dudda
Photo Credit : By Author

ಮಂಡ್ಯ: ತಾಲೂಕು ಕನ್ನಡ ಸಾಹಿತ್ಯ ಪರಿ?ತ್ತಿನ ವತಿಯಿಂದ ಮಂಡ್ಯ ತಾಲೂಕು ದುದ್ದ ಗ್ರಾಮದಲ್ಲಿ ಮಂಡ್ಯ ತಾಲೂಕು ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವ ನಿರ್ಣಯ ಕೈಗೊಳ್ಳಲಾಯಿತು.

ಜಿಲ್ಲಾ, ತಾಲೂಕು, ಮಂಡ್ಯ ನಗರ ಕಸಾಪ ಪದಾಧಿಕಾರಿಗಳು ಮತ್ತು ದುದ್ದ ಹೋಬಳಿ ಗ್ರಾಮ ಮುಖಂಡರೊಂದಿಗೆ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಪ್ರಥಮ ಪೂರ್ವಭಾವಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು.

ಮಂಡ್ಯ ತಾಲೂಕು ಕಸಾಪ ಅಧ್ಯಕ್ಷ ಮಂಜು ಮುತ್ತೇಗೆರೆ ಪ್ರಾಸ್ತಾವಿಕ ನುಡಿಗಳನ್ನಾಡಿ ಮಂಡ್ಯ ತಾಲೂಕು ಸಮ್ಮೇಳನಗಳು ತಾಲೂಕಿನ ವಿವಿಧ ಹೋಬಳಿಗಳಲ್ಲಿ ಈಗಾಗಲೇ ನಡೆದಿದ್ದು ದುದ್ದ ಹೋಬಳಿ ಕೇಂದ್ರದಲ್ಲಿ ಈ ಸಮ್ಮೇಳನ ನಡೆಸುವುದು ಸೂಕ್ತ. ಈಗಾಗಲೇ ಈ ವ್ಯಾಪ್ತಿಯ ಕೆಲವು ಗ್ರಾಮಗಳಿಗೆ ಭೇಟಿ ನೀಡಿ ಅಭಿಪ್ರಾಯ ಸಂಗ್ರಹಿಸಲಾಗಿದ್ದು ಉತ್ತಮ ಸ್ಪಂದನೆ ವ್ಯಕ್ತವಾಗಿದೆ ಎಂದರು. ಸಮ್ಮೇಳನದ ದಿನಾಂಕ, ಸಮ್ಮೇಳನಾಧ್ಯಕ್ಷರು, ಕಾರ್ಯಕ್ರಮದ ರೂಪುರೇಷೆ ಬಗ್ಗೆ ಅಭಿಪ್ರಾಯ ಮಂಡಿಸುವಂತೆ ಕೋರಿದರು.

ನಂತರ ಮಾತನಾಡಿದ ಜಿಲ್ಲಾ ಕಸಾಪ ಉಪಾಧ್ಯಕ್ಷ ಗುರುಪ್ರಸಾದ್ ದುದ್ದ ಗ್ರಾಮ ಐತಿಹಾಸಿಕ ಕೇಂದ್ರವಾಗಿದ್ದು ಹಲವಾರು ಹಳ್ಳಿಗಳನ್ನು ಒಳಗೊಂಡ ಪ್ರದೇಶವಾಗಿರುವುದರಿಂದ ಇಲ್ಲಿ ನಡೆಸುವುದು ಸೂಕ್ತ. ಸಾಹಿತ್ಯ ಪರಿ?ತ್ತು ಸರ್ಕಾರ ಮತ್ತು ಗ್ರಾಮಪಂಚಾಯಿತಿಗಳ ಸಹಕಾರ ಪಡೆದು ಸಮ್ಮೇಳನ ನಡೆಸೋಣ ಎಂದರು.

ಸಭೆಯಲ್ಲಿ ಜಿಲ್ಲಾ ಕಸಾಪ ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ದರಸಗುಪ್ಪೆ, ಹುಸ್ಕೂರು ಕೃಷ್ಣಗೌಡ, ಕೋಶಾಧ್ಯಕ್ಷ ಬಿ.ಎಂ.ಅಪ್ಪಾಜಪ್ಪ, ತಾಲೂಕು ಕಸಾಪ ಪದಾಧಿಕಾರಿಗಳಾದ ಚಂದ್ರಲಿಂಗು, ಶಿವಲಿಂಗೇಗೌಡ, ನಗರ ಕಸಾಪ ಅಧ್ಯಕ್ಷೆ ಸುಜಾತಕೃ? ತಮ್ಮ ಸಲಹೆಗಳನ್ನು ನೀಡಿದರು. ಹೋಬಳಿ ಮುಖಂಡರಾದ ಚಂದಗಾಲು ತಮ್ಮಣ್ಣ, ಸುರೇಶ್, ರುದ್ರೇಶ್, ಮಹೇಂದ್ರ, ರಾಮಾರಾಧ್ಯ ಮಾತನಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಕಸಾಪ ಅಧ್ಯಕ್ಷ ಸಿ.ಕೆ.ರವಿಕುಮಾರ ಚಾಮಲಾಪುರ ಮಾತನಾಡಿ ಸೆಪ್ಟಂಬರ್ ಅಂತ್ಯದಲ್ಲಿ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಒಂದು ದಿನದ ಸಮ್ಮೇಳನ ನಡೆಸಲಾಗುವುದು. ಧ್ವಜಾರೋಹಣ, ಸಮ್ಮೇಳನಾಧ್ಯಕ್ಷರ ಮೆರವಣಿಗೆ, ಉದ್ಘಾಟನಾ ಸಮಾರಂಭ, ವಿಚಾರಗೋಷ್ಠಿ, ಕವಿಗೋಷ್ಠಿ, ಸಂವಾದಗೋಷ್ಠಿ, ಸಮಾರೋಪ ಸಮಾರಂಭದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ಮತ್ತು ನಾಟಕ ಪ್ರದರ್ಶನ ಹಮ್ಮಿಕೊಳ್ಳುವ ಚಿಂತನೆ ಇದೆ ಎಂದರು.

ಮುಂದಿನ ದಿನಗಳಲ್ಲಿ ಹೋಬಳಿ ಮಟ್ಟದಲ್ಲಿ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಲಾಗುವುದು. ಹೊಳಲು ಗಾಣದಾಳು, ಚಂದಗಾಲು ವ್ಯಾಪ್ತಿಯ ಸಭೆಯನ್ನು ವಿ.ಸಿ.ಫಾರಂನಲ್ಲಿ, ಮಲ್ಲಿಗೆರೆ, ಬೇವುಕಲ್, ಮುದಗಂದೂರು, ಶಿವಳ್ಳಿ, ಹುಳ್ಳೇನಹಳ್ಳಿ ಮುಂತಾದ ಗ್ರಾಮಗಳ ಸಭೆಯನ್ನು ಮೇಲುಕೋಟೆ ಕ್ಷೇತ್ರದ ಶಾಸಕರಾದ ಸಿ.ಎಸ್.ಪುಟ್ಟರಾಜು ಸಮ್ಮುಖದಲ್ಲಿ ದುದ್ದದಲ್ಲಿ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ವಿವರಿಸಿದರು.

ಸಭೆಯಲ್ಲಿ ಶ್ರೀರಂಗಪಟ್ಟಣ ಕಸಾಪ ಅಧ್ಯಕ್ಷ ಬಲ್ಲೇನಹಳ್ಳಿ ಮಂಜುನಾಥ್, ಬಿ.ಜಿ.ಉಮಾ, ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್,ಬಿ.ಲಿಂಗೇಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು.

See also  ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ: ದೇಶದ ಹಲವು ರಾಜ್ಯಗಳಲ್ಲಿ ರೆಡ್‌ ಅಲರ್ಟ್‌ !
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು