ಮಂಡ್ಯ: ಮಂಡ್ಯ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಬೆಂಗಳೂರು ಸಮರ್ಥನಂ ಅಂಗವಿಕಲರ ಸಂಸ್ಥೆ ಮತ್ತು ಎಸ್.ಬಿ ಎಜ್ಯುಕೇಷನ್ ಟ್ರಸ್ಟ್ ಮಂಡ್ಯ ತಾವರಗೆರೆ ಕೈಗಾರಿಕಾ ತರಬೇತಿ ಕೇಂದ್ರ, ಮದ್ದೂರು ಮಾಂಡವ್ಯ ಕೈಗಾರಿಕಾ ತರಬೇತಿ ಕೇಂದ್ರ, ಇವರುಗಳ ಸಹಯೋಗದೊಂದಿಗೆ ಸೆಪ್ಟೆಂಬರ್ 21 ರಂದು ಬೆಳಿಗ್ಗೆ 9 ಗಂಟೆಗೆ ಮಂಡ್ಯ ನೆಹರುನಗರದ ಎಸ್.ಬಿ.ಸಮುದಾಯ ಭವನದಲ್ಲಿ ಬೃಹತ್ ಉದ್ಯೋಗ ಮೇಳ ನಡೆಯಲಿದೆ.
ಬೃಹತ್ ಉದ್ಯೋಗ ಮೇಳದಲ್ಲಿ 30 ಕ್ಕೂ ಹೆಚ್ಚು ಕಂಪನಿಗಳು ಭಾಗವಹಿಸಲಿದ್ದು, ಆಸಕ್ತಿಯುಳ್ಳ ಎಸ್.ಎಸ್.ಎಲ್.ಸಿ, ಪಿಯುಸಿ, ಐಟಿಐ ಯಾವುದೇ ಪದವಿ, ಡಿಪ್ಲೋಮಾ, ಬಿ.ಇ, ವಿದ್ಯಾರ್ಹತೆ ಹೊಂದಿರುವ ಕನಿಷ್ಠ 18 ವರ್ಷ ಗಳಿಂದ 35 ವರ್ಷದ ಅಭ್ಯರ್ಥಿಗಳು ಸ್ವ ವಿವರದೊಂದಿಗೆ ಹಾಗೂ ಎಲ್ಲಾ ಮೂಲ ದಾಖಲಾತಿ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಉದ್ಯೋಗಾಧಿಕಾರಿಗಳ ದೂ.ಸಂ.08232-295124 ಅಥವಾ ಮೊ.ನಂ.9480812121 ಸಂಪರ್ಕಿಸಬಹುದೆಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.