News Kannada
Friday, February 03 2023

ಮಂಡ್ಯ

ಮಂಡ್ಯ: ಡಿ.14ರಂದು ಬೃಹತ್ ಉದ್ಯೋಗ ಮೇಳ ಆಯೋಜನೆ

Mandya: A mega job fair will be held in Mandya on Dec. 14.
Photo Credit : By Author

ಮಂಡ್ಯ: ಜಿಲ್ಲಾಡಳಿತ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಡಿ. 14 ರಂದು 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಪಿ.ಇ.ಎಸ್ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಡಾ: ಹೆಚ್ ಎನ್ ಗೋಪಾಲಕೃಷ್ಣ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದರು. ಉದ್ಯೋಗ ಮೇಳದಲ್ಲಿ ಅಂದಾಜು 100 ಕ್ಕೂ ಹೆಚ್ಚು ಪ್ರಸಿದ್ಧ ಕಂಪನಿಗಳು ಭಾಗವಹಿಸಲಿದ್ದು, ಹೆಚ್ಚು ಜನರು ಹೆಸರು ನೊಂದಾಯಿಸಿಕೊಳ್ಳಿ ಎಂದರು. 5000 ಕ್ಕೂ ಹೆಚ್ಚು ಉದ್ಯೋಗ ಅವಕಾಶಗಳಿದ್ದು, 18 ರಿಂದ 35 ವರ್ಷದೊಳಗಿನ ಎಸ್.ಎಸ್.ಎಲ್.ಸಿ/ಪಿಯುಸಿ/ ಐಟಿಐ/ ಡಿಫ್ಲೋಮಾ/ ಬಿ.ಇ ಅಥವಾ ಯಾವುದೇ ಪದವಿಧರರು ಉದ್ಯೋಗ ಮೇಳದಲ್ಲಿ ಭಾಗವಹಿಸಲು http://skillconnect.kaushalkar.com/ candidatereg ನಲ್ಲಿ ಹೆಸರು ನೊಂದಾಯಿಸಿಕೊಳ್ಳಬಹುದು. ಹೆಸರು ನೊಂದಾಯಿಸಿಕೊಳ್ಳಲು ಸಾಧ್ಯವಾಗದಿದ್ದರೂ ಸಹ ನೇರವಾಗಿ ಉದ್ಯೋಗ ಮೇಳದಲ್ಲಿ ಭಾಗವಹಿಸಿ. ಅಭ್ಯರ್ಥಿಗಳು ತಮ್ಮ ಸ್ವವಿವರ resume ಅನ್ನು ksdc.recruitment@gmail.com ನಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 08232-295010, 9164443223, 8152882461 ಯನ್ನು ಸಂಪರ್ಕಿಸುವಂತೆ ತಿಳಿಸಿದರು.

ಕೌಶಲ್ಯಾಭಿವೃದ್ಧಿ ಅಧಿಕಾರಿ ವೇಣು ಗೋಪಾಲ್, ಜಿಲ್ಲಾಧಿಕಾರಿಗಳ ಕಚೇರಿ ಸಹಾಯಕ ಸ್ವಾಮಿಗೌಡ ಉಪಸ್ಥಿತರಿದ್ದರು.

See also  ಪ್ರಯಾಣಿಕರ ತಂಗುದಾಣದ ದುರಸ್ತಿಗೆ ಪಣತೊಟ್ಟ ಕಿರಣ್ ಬ್ರಿಗೇಡ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು