News Kannada
Wednesday, May 31 2023
ಮಂಡ್ಯ

ಮಂಡ್ಯ: ಶ್ರೀರಂಗಪಟ್ಟಣ ಬಂದ್‌ಗೆ ಹಿಂದು ಸಂಘಟನೆಗಳ ಕರೆ

Mandya: Hindu organisations call for Srirangapatna bandh
Photo Credit : News Kannada

ಮಂಡ್ಯ: ದಲಿತ ಕುಟುಂಬದ ಮೇಲೆ ಮುಸ್ಲಿಂ ಯುವಕರ ಗುಂಪೊಂದು ನಡೆಸಿದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರ ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ಪಟ್ಟಣದಲ್ಲಿ ಶುಕ್ರವಾರ ಹಿಂದೂ ಸಂಘಟನೆಗಳು ಬಂದ್ ಕರೆ ನೀಡಿವೆ.

ಬಜರಂಗದಳ, ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಇತರ ಹಿಂದೂ ಕಾರ್ಯಕರ್ತರು ಬಂದ್‌ಗೆ ಕರೆ ನೀಡಿದ್ದು, ಎಲ್ಲಾ ವಾಣಿಜ್ಯ ಸಂಸ್ಥೆಗಳನ್ನು ಮುಚ್ಚುವಂತೆ ಮತ್ತು ಸಂಜೆಯವರೆಗೆ ಸ್ಥಗಿತಗೊಳಿಸುವಂತೆ ಅಂಗಡಿಕಾರರಿಗೆ ಮನವಿ ಮಾಡಿದ್ದಾರೆ.

ಹಿಂದೂ ಸಂಘಟನೆಗಳು ಶ್ರೀರಂಗಪಟ್ಟಣದ ಪ್ರಮುಖ ರಸ್ತೆ ಮೂಲಕ ಪೊಲೀಸ್ ಠಾಣೆವರೆಗೆ ಮೆರವಣಿಗೆ ನಡೆಸಲಿವೆ. ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

ಕಳೆದ ವಾರ ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕ್ಷುಲ್ಲಕ ವಿಚಾರಕ್ಕೆ ಮುಸ್ಲಿಂ ಯುವಕರ ಗುಂಪೊಂದು ದಲಿತ ಕುಟುಂಬದ ಮೇಲೆ ಹಲ್ಲೆ ನಡೆಸಿತ್ತು. ಆರೋಪಿಗಳನ್ನು ಕೂಡಲೇ ಬಂಧಿಸಿ ಅವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಹಿಂದೂ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಬಂದ್ ಕರೆ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳದಲ್ಲಿ ಭದ್ರತೆ ಹೆಚ್ಚಿಸಿದ್ದಾರೆ.

See also  ರಾಯಚೂರು: ಕರ್ನಾಟಕದ ವೈವಿಧ್ಯಮಯ ಸಂಸ್ಕೃತಿಯನ್ನು ಬಿಜೆಪಿ ವಿರೂಪಗೊಳಿಸಿದೆ ಎಂದ ರಾಹುಲ್ ಗಾಂಧಿ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12792
NewsKannada

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು