News Kannada
Saturday, February 24 2024
ಮೈಸೂರು

ಮೈಸೂರು ದಸರಾಗೆ ಹೆಚ್ಚು ಜನ ಬರುವ ನಿರೀಕ್ಷೆ: ಕೆಎಸ್‌ ಆರ್‌ ಟಿಸಿ ಯಿಂದ ಹೆಚ್ಚುವರಿ ಬಸ್​​​

2nd PUC annual exam: KSRTC arranges free travel
Photo Credit : News Kannada

ಮೈಸೂರು: ನಾಡಹಬ್ಬ ದಸರಾ ಸಂಭ್ರಮ ಆಚರಣೆಗೆ ಸಾಂಸ್ಕೃತಿಕ ನಗರಿ ಮದುವಣಗಿತ್ತಿಯಂತೆ ಸಜ್ಜಾಗಿದೆ. ಅ.15ರಂದು ನಾಡಹಬ್ಬ ದಸರಾ ಆಚರಣೆಗೆ ಚಾಲನೆ ದೊರೆಯಲಿದೆ. ರಾಜ್ಯ ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆ ಜಾರಿ ಮಾಡಿದ್ದು, ಇದರಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರು ದಸರಾ ವೀಕ್ಷಣೆಗೆ ಬರುವ ಸಾಧ್ಯತೆ ಇದೆ.

ಈ ಹಿನ್ನೆಲಯಲ್ಲಿ ಮೈಸೂರಿನ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧಿಕ ಬಸ್​ಗಳನ್ನು ರಸ್ತೆಗೆ ಇಳಿಸಲು ನಿರ್ಧರಿಸಿದೆ. ಶಕ್ತಿಯೋಜನೆ ಜಾರಿಯಾದಾಗಿನಿಂದ ಪ್ರತಿದಿನ ಒಟ್ಟು 3.75 ಲಕ್ಷ ಜನರು ಪ್ರಯಾಣಿಸುತ್ತಿದ್ದಾರೆ. ಈ ಸಂಖ್ಯೆ ಐದು ಲಕ್ಷಕ್ಕೆ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಹೀಗಾಗಿ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಲು ಮತ್ತು ಸಾರ್ವಜನಿಕರ ಮನವಿ ಮೇರೆಗೆ ಮೈಸೂರು ಕೆಎಸ್‌ಆರ್‌ಟಿಸಿ ವಿಭಾಗವು ಅಕ್ಟೋಬರ್ 15 ರಿಂದ ತಿಂಗಳಾಂತ್ಯದವರೆಗೆ ಸುಮಾರು 350 ಹೆಚ್ಚುವರಿ ಬಸ್‌ಗಳನ್ನು ಬಿಡಲಿದೆ. ಬೇಡಿಕೆ ಹೆಚ್ಚಾದರೆ ಬೇರೆ ಜಿಲ್ಲೆಗಳ ಡಿಪೋಗಳಿಂದ ಬಸ್ಸುಗಳನ್ನು ತರಬೇಕಾಗಬಹುದು. ದಸರಾ ದಟ್ಟಣೆಯನ್ನು ನಿರ್ವಹಿಸಲು ವಿಭಾಗವು ಸಂಪೂರ್ಣ ಸನ್ನದ್ಧವಾಗಿದೆ” ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ಜಿ. ಶ್ರೀನಿವಾಸ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು