ಮೈಸೂರು: ಮೈಸೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಬೆಂಕಿ ಹಚ್ಚಿಕೊಂಡು ಮಗು ಸಮೇತ ತಾಯಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ಸಿಂಧು (24) ಎಂಬ ಮಹಿಳೆ ಖಿನ್ನತೆಯಿಂದ ಮನೆಯಲ್ಲಿ ಯಾರೂ ಇಲ್ಲದ ವೇಳೆ 8 ತಿಂಗಳ ತನ್ನ ಮಗುವಿನ ಜೊತೆಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಾಮರಾಜನಗರ ಮೂಲದ ಸಿಂಧು ಕಳೆದ 9 ವರ್ಷಗಳ ಹಿಂದೆ ದಾಸನೂರಿನ ಮಹದೇವಸ್ವಾಮಿ ಎಂಬುವನ್ನು ಮದುವೆಯಾಗಿದ್ದರು. 4 ಬಾರಿ ಗರ್ಭಪಾತವಾದ ಬಳಿಕ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಗುವಿಗೆ ಜನ್ಮ ನೀಡಿದ ಬಳಿಕ ಸಿಂಧು ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.
ಸಹಾಯವಾಣಿಗೆ ಕರೆ ಮಾಡಿ:
ನೀವು ಆತ್ಮಹತ್ಯೆಯ ಯೋಚನೆ ಮಾಡುತ್ತಿದ್ದರೆ ಅಥವಾ ಅಂತವರ ಕುರಿತು ನಿಮಗೆ ತಿಳಿದಿದ್ದರೆ, ಸಹಾಯ ಅಗತ್ಯವಿರುವ ಯಾರಾದರೂ, ಕರೆ ಮಾಡಿ ಸುಶೇಗ್ ಚಾರಿಟೇಬಲ್ ಟ್ರಸ್ಟ್ 0824-2983444 ಗೆ ಏಕೆಂದರೆ ಪ್ರತಿಯೊಬ್ಬರ ಜೀವವು ಅಮೂಲ್ಯವಾದ್ದದ್ದು.