ಮೈಸೂರು: 15ರಿಂದ 18 ವರ್ಷದೊಳಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ಹಾಕುವ ಅಭಿಯಾನಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಇಲ್ಲಿನ ಮಹಾರಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸೋಮವಾರ ಚಾಲನೆ ನೀಡಿದರು.
ಕೋವಿಡ್ ಎರಡನೇ ಅಲೆಯಲ್ಲಿ ಆದ ಅನಾಹುತಗಳು ಈ ಬಾರಿ ಆಗುವುದಿಲ್ಲ.ಬೇರೆ ರಾಜ್ಯಗಳಷ್ಟು ಪರಿಸ್ಥಿತಿ ನಮ್ಮಲ್ಲಿ ಹದಗೆಟ್ಟಿಲ್ಲ.
ಒಟ್ಟು 1.47 ಲಕ್ಷ ಮಕ್ಕಳಿಗೆ ಲಸಿಕೆ ನೀಡುವ ಗುರಿ ಹೊಂದಲಾಗಿದೆ. ಒಂದು ವಾರದಲ್ಲಿ ಈ ಗುರಿ ತಲುಪಲು 200 ತಂಡಗಳನ್ನು ರಚಿಸಲಾಗಿದೆ.ಇದಕ್ಕಾಗಿ ಸಂಚಾರ ತಂಡಗಳನ್ನು ಸಹ ನಿಯೋಜಿಸಲಾಗಿದೆ ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.
ಕೇಂದ್ರ ಸರ್ಕಾರ ಹೇಳಿದರೆ ಕಠಿಣ ನಿಯಮಗಳನ್ನು ಜಾರಿಗೆ ತರಲಾಗುವುದು. ಲಾಕ್ ಡೌನ್ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಂತಿಮ ತೀರ್ಮಾನ ಕೈಗೊಳ್ಳುವರು ಎಂದರು.