News Kannada
Saturday, December 03 2022

ಮೈಸೂರು

ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರುವ ಉದ್ದೇಶದಿಂದ ನಾಳೆ ಕಾರ್ಯಾಗಾರ : ಪ್ರೊ.ಜಿ.ಹೇಮಂತ್ ಕುಮಾರ್ ಮಾಹಿತಿ

Photo Credit :

ಮೈಸೂರು, : ರಾಷ್ಟ್ರೀಯ ಶಿಕ್ಷಣ ನೀತಿಯ ಜಾರಿ ತರುವ ಉದ್ದೇಶದಿಂದ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಒಂದು ದಿನದ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ತಿಳಿಸಿದರು.
ಮೈಸೂರು ವಿಶ್ವವಿದ್ಯಾನಿಲಯದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು ನಾಳೆ ಬೆಳಿಗ್ಗೆ 11ಗಂಟೆಗೆ ಮೈಸೂರಿನ ಕ್ರಾಫರ್ಡ್ ಹಾಲ್ ನಲ್ಲಿ ಕಾರ್ಯಾಗಾರ ನಡೆಯಲಿದೆ ಎಂದರು. ಎನ್ ಇಪಿ ಜಾರಿಗೆ ತರಲು ಕಳೆದ 2 ತಿಂಗಳುಗಳಿಂದ ಚರ್ಚೆ ಮಾಡುತ್ತಿದ್ದೇವೆ. ಎನ್ ಇಪಿ ಕಲಿಯುವ ಪ್ರಕ್ರಿಯೆಯಲ್ಲಿ ವಿದ್ಯಾರ್ಥಿಯ ವಿಶಿಷ್ಟ ಸಾಮರ್ಥ್ಯವನ್ನು ಗುರುತಿಸಿ ಉತ್ತೀಜಿಸುವ ಗುರಿ ಇದೆ. ತಾಂತ್ರಿಕ ಕೌಶಲ್ಯಗಳನ್ನು ಹೆಚ್ಚಿಸುವ ಔದ್ಯೋಗಿಕ ಕೋರ್ಸ್ ಗಳ ಅನುಷ್ಠಾನ ಮಾಡಲಾಗುವುದು. ಈ ವರ್ಷದಿಂದ ನಾಲ್ಕು ವರ್ಷಗಳ ಡಿಗ್ರಿ ಮಾಡಲಾಗುವುದು. ಪರೀಕ್ಷಾ ಮಾದರಿ ಹಳೆಯದೆ ಇರುತ್ತದೆ. ಭಾಷಾ ತರಗತಿಗಳು ಹಿಂದಿನ ಮಾದರಿಯಲ್ಲೇ ಮುಂದುವರಿಯಲಿದೆ. ನಾಲ್ಕು ವರ್ಷ ಮುಗಿಸಿದ ಬಳಿಯ ಗೌರವ ಪದವಿ ನೀಡಲಾಗುವುದು. ಎನ್ ಇಪಿ ಯಲ್ಲಿ ಸಂವಹನ ಕೌಶಲ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಸಮಸ್ಯೆಗಳನ್ನು ಪರಿಹರಿಸಿಕೊಳ್ಳುವ ಕೌಶಲ್ಯ ವನ್ನು ಹೆಚ್ಚಿಸುತ್ತದೆ ಎಂದರು.

See also  ಮಕ್ಕಳ ಸಮಗ್ರ ವ್ಯಕ್ತಿತ್ವ ಬದಲಾವಣೆಗೆ  ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಪೂರಕ : ಪ್ರೊ. ಜಿ.ಹೇಮಂತ್ ಕುಮಾರ್
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

145

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು