ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಕಟ್ಟಡ ಹಾಗೂ ಯೋಜನೆಗಳ ಉದ್ಘಾಟನಾ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥ ನಾರಾಯಣ ಶುಕ್ರವಾರ ಚಾಲನೆ ನೀಡಿದರು.
ಮೊದಲಿಗೆ ಸಂಶೋಧನಾ ವಿದ್ಯಾರ್ಥಿಗಳ ನೂತನ ವಸತಿ ನಿಲಯ ಹಾಗೂ ಗಣಕ ಅಧ್ಯಯನ ವಿಭಾಗದ ಎರಡನೇ ಮಹಡಿ ಸೆಂಟರ್ ಆಫ್ ಎಕ್ಸಲೆನ್ಸ್ ಅನ್ನು ಉದ್ಘಾಟಿಸಿದರು. ನಂತರ ಕೇಂದ್ರ ಸರ್ಕಾರದ ರೂಸಾ ಯೋಜನೆಯಡಿ ರೂಪಿಸಿರುವ ಕೆರೆಯರ್ ಹಬ್, ಮೈಸೂರು ವಿವಿಯ ಸಮುದಾಯ ರೇಡಿಯೋ ‘ರೇಡಿಯೋ ಮಾನಸ’, ಹಾಸನ ಸ್ನಾತಕೋತ್ತರ ಕೇಂದ್ರದ ನೂತನ ಶೈಕ್ಷಣಿಕ ಭವನ ಹಾಗೂ ಯುವರಾಜ ಕಾಲೇಜಿನ ರೂಸಾ 2.0 ಅನುದಾನದ ಅಡಿಯಲ್ಲಿ ನಿರ್ಮಿಸಲಾದ ನೂತನ ಕಟ್ಟಡ ಹಾಗೂ ಮೈಸೂರು ವಿಶ್ವವಿದ್ಯಾನಿಲಯದ ನೂತನ ಘಟಕ ಕಾಲೇಜುಗಳ ಆರಂಭಕ್ಕೆ ಆನ್‌ಲೈನ್ ಮೂಲಕ ಚಲನೆ ನೀಡಿದರು. ಇದೇ ವೇಳೆ ಕುಲಪತಿ ಪ್ರೊ. ಜಿ.ಹೇಮಂತಕುಮಾರ್ ಮಾತನಾಡಿ, ವಿದ್ಯಾರ್ಥಿಗಳ ಸುರಕ್ಷತೆಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಒಟ್ಟು 72 ಸಿಸಿ ಕ್ಯಾಮರಾಗಳಿದ್ದು, ಹೊರಗಿನವರೂ ಬಂದರೂ ಪ್ರವೇಶ ಹಾಗೂ ಎಕ್ಸಿಟ್ ನಿಗಾ ವಹಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.
ನಂತರ ಕೆರಿಯರ್ ಹಬ್‌ನಲ್ಲಿ ವಿದ್ಯಾರ್ಥಿಗಳೇ ಸಿದ್ಧಪಡಿಸಿದ ಡಿಜಿಟಲ್ ಸಾಕ್ಷ್ಯಚಿತ್ರವನ್ನು ಸಚಿವರು ಹಾಗೂ ಗಣ್ಯರು ವೀಕ್ಷಿಸಿದರು. ಸಂಸದ ಪ್ರತಾಪಸಿಂಹ, ಶಾಸಕ ಎಲ್.ನಾಗೇಂದ್ರ, ಮೈವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಪಿ.ಜ್ಞಾನಪ್ರಕಾಶ್ ಇನ್ನಿತರರು ಉಪಸ್ಥಿತರಿದ್ದರು.
ಮೈಸೂರು ವಿವಿ ಕಟ್ಟಡ, ಯೋಜನೆಗಳ ಕಾರ್ಯಕ್ರಮಕ್ಕೆ ಸಚಿವ ಅಶ್ವತ್ಥ ನಾರಾಯಣ ಚಾಲನೆ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.