ಮೈಸೂರು, ; ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಆರ್ ಧ್ರುವ ನಾರಾಯಣ್ ಅವರ ವಿರುದ್ಧ ಉದ್ದೇಶ ಪೂರ್ವಕವಾಗಿ ಬಿ.ಜೆ.ಪಿ ಪಕ್ಷದ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿರುವುದನ್ನು ಖಂಡಿಸಿ ಇಂದು ಮೈಸೂರು ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಯಿತಲ್ಲದೆ ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ ನಡೆಯಿತು.
ರಾಮಸ್ವಾಮಿ ವೃತ್ತದಲ್ಲಿಂದು ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡ ಪ್ರತಿಭಟನಾಕಾರರು ನಾವು ಭಾರತೀಯರು ಕೋಮುವಾದದ ದಲ್ಲಾಳಿಗಳನ್ನು ಸಹಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರಲ್ಲದೆ ಬಿಜೆಪಿ ಕಛೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಹಲವರನ್ನು ಬಂಧಿಸಿದರು. ಬಿಜೆಪಿಗೆ ಧಿಕ್ಕಾರ. ತಾಲಿಬಾನ್ ಆರ್ ಎಸ್ ಎಸ್ ಮತ್ತು ಬಿಜೆಪಿ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮೈಸೂರು ನಗರ ಮತ್ತು ಗ್ರಾಮಾಂತರ ಯುವ ಕಾಂಗ್ರೆಸ್ ಹಾಗೂ ವಿದ್ಯಾರ್ಥಿ ಕಾಂಗ್ರೆಸ್, ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು, ಬ್ಲಾಕ್ ಅಧ್ಯಕ್ಷರುಗಳು, ಸದಸ್ಯರುಗಳು,ಮುಖಂಡರು ಪಾಲ್ಗೊಂಡಿದ್ದರು.
ನಿರ್ಮಲಾ ಸೀತಾರಾಮನ್ ರನ್ನು ಭೇಟಿಯಾದ ಸಿಎಂ ಬೊಮ್ಮಾಯಿ: ಜಿಎಸ್ ಟಿ ಪರಿಹಾರ ಮೂರು ವರ್ಷಗಳಿಗೆ ಮುಂದುವರೆಸುವಂತೆ ಮನವಿ
ಬಿಜೆಪಿ ಪ್ರತಿಭಟನೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ; ಬಿಜೆಪಿ ಕಛೇರಿಗೆ ಮುತ್ತಿಗೆ ಯತ್ನ; ಬಂಧನ
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.