News Kannada
Monday, November 28 2022

ಮೈಸೂರು

ಬೇಕರಿ ಕ್ಷೇತ್ರದಲ್ಲಿ ಉದ್ಯೋಗಕ್ಕಾಗಿ ಉಚಿತ ತರಬೇತಿ - 1 min read

Photo Credit : News Kannada

ಮೈಸೂರು : ಇತ್ತೀಚೆಗೆ ಬೇಕರಿ ಉದ್ಯಮ ಜನಪ್ರಿಯವಾಗುತ್ತಿದ್ದು, ಉದ್ಯೋಗವಕಾಶಗಳು ಹೆಚ್ಚುತ್ತಿವೆ. ಹೀಗಾಗಿ ಈ ಕ್ಷೇತ್ರದಲ್ಲಿ ಆಸಕ್ತಿಯುಳ್ಳವರಿಗೆ ಉಚಿತ ತರಬೇತಿ ನೀಡಲು ಮೈಸೂರಿನ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಹಾಗೂ ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಕೌಶಲ್ಯ ಅಭಿವೃದ್ಧಿ ತರಬೇತಿ ಯೋಜನೆಯಡಿ ಬೇಕರಿ ಅಂಡ್ ಕನ್‌ಫೆಕ್ಷನರಿ ಕ್ಷೇತ್ರದಲ್ಲಿ ಉದ್ಯೋಗ ಪ್ರಾರಂಭಿಸಲು ಇಚ್ಚಿಸುವ ಅಭ್ಯರ್ಥಿಗಳಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳು ತರಬೇತಿಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಕನಿಷ್ಠ ವಿದ್ಯಾರ್ಹತೆ 8ನೇ ತರಗತಿ ಉತ್ತೀರ್ಣರಾಗಿರಬೇಕು. ತರಬೇತಿ ಅವಧಿ 6 ವಾರಗಳು. ಷರತ್ತಿಗೊಳಪಟ್ಟು 2000 ರೂ.ಗಳ ಸ್ಟೈಪಂಡ್‍ ನೀಡಲಾಗುತ್ತದೆ.

ತರಬೇತಿಯ ಅವಧಿಯಲ್ಲಿ ಮಧ್ಯಾಹ್ನದ ಊಟ, ಸಮವಸ್ತ್ರ ಹಾಗೂ ಕಲಿಕಾ ಸಾಮಗ್ರಿಗಳನ್ನು ಉಚಿತವಾಗಿ ನೀಡಲಾಗುವುದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ ಇಲಾಖೆಯ ಫುಡ್ ಕ್ರಾಫ್ಟ್ ಇನ್‌ಸ್ಟಿಟ್ಯೂಟ್ ಸಂಸ್ಥೆಯಿಂದ ಜಂಟಿಯಾಗಿ ಪ್ರಮಾಣಪತ್ರ ನೀಡಲಾಗುವುದು ಮತ್ತು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕೆಲಸ ಪಡೆಯಲು ಸಹಾಯ ಮಾಡಲಾಗುವುದು.

ನಿಗಧಿಪಡಿಸಿದ ಅರ್ಜಿ ನಮೂನೆಯನ್ನು ಕಚೇರಿಯಲ್ಲಿ ಪಡೆದು, ಇತ್ತೀಚಿನ 5 ಭಾವಚಿತ್ರ, ಶೈಕ್ಷಣಿಕ ಅಂಕಪಟ್ಟಿ ಪ್ರತಿ, ಜಾತಿ ಪ್ರಮಾಣ ಪತ್ರ, ಬ್ಯಾಂಕ್‌ಖಾತೆಯ ವಿವರ ಮತ್ತು ಆಧಾರ್ ಕಾರ್ಡ್ ನ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬಹುದು.

ದೊಡ್ಡಕೆರೆ ಮೈದಾನದಲ್ಲಿರುವ ದಸರಾ ವಸ್ತು ಪ್ರದರ್ಶನ ಆವರಣದ ಕನ್ನಡ ಕಾರಂಜಿ ಕಟ್ಟಡದ ಮೊದಲನೇ ಮಹಡಿಯಲ್ಲಿರುವ ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನಲ್ಲಿ ತರಬೇತಿ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 6362018821, 0821-2445388, 2974388 ಅನ್ನು ಸಂಪರ್ಕಿಸಬಹುದು ಎಂದು ಫುಡ್ ಕ್ರಾಫ್ಟ್ ಇನ್ಸ್ಸ್ಟಿಟ್ಯೂಟ್‌ನ ಪ್ರಾಂಶುಪಾಲರು ತಿಳಿಸಿದ್ದಾರೆ.

See also  ಶೋಷಣೆಯ ಅಗ್ನಿಕುಂಡದಲ್ಲಿ ಅರಳಿದ ಹೂವು ಸಾವಿತ್ರಿಬಾಪುಲೆ; ಸಾಹಿತಿ ಬನ್ನೂರು ಕೆ.ರಾಜು
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published.

177
Lava Kumar

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು