News Kannada
Tuesday, February 07 2023

ಮೈಸೂರು

ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗುವುದು ಕೇಶವ ಕೃಪಾದಲ್ಲಿ: ಹೆಚ್ಡಿಕೆ

Photo Credit :

ಮೈಸೂರು: ಮಂಗಳೂರಿನಲ್ಲಿ ನಡೆಯುತ್ತಿರುವ ಅಷ್ಟಮಂಗಲ ಪ್ರಶ್ನೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಅಷ್ಟಮಂಗಲ ಪ್ರಶ್ನೆಗಿಂತ ಎಲ್ಲಾ ತೀರ್ಮಾನ ಆಗುವುದು ಕೇಶವ ಕೃಪಾದಲ್ಲಿ. ಅಲ್ಲಿಂದ ಬರುವ ಸಂದೇಶಗಳನ್ನು ಬಿಜೆಪಿಯವರು ಪಾಲಿಸುತ್ತಾರೆ ಎಂದು ಟೀಕಿಸಿದ್ದಾರೆ.

ಮೈಸೂರಿನಲ್ಲಿ ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ ಎಂದರು. ಇನ್ನೂ ಒಂದು ವರ್ಷ ಈ ತರದ ಬರವಣಿಗೆಗಳು ನಡೆಯುತ್ತಿರುತ್ತವೆ‌. ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ ಎಂದು ಹೆಚ್ಡಿಕೆ ಕಳವಳ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿಚಾರದಲ್ಲಿ ಜೆಡಿಎಸ್ ಸ್ಟ್ಯಾಂಡ್ ಸಂಬಂಧ ಪ್ರತಿಕ್ರಿಯಿಸಿದ ಅವರು, ಅದರ ಬಗ್ಗೆ ಆತುರ ಮಾಡುವುದು ಏನಿದೆ? ದೇವರು ಕನಸ್ಸಿನಲ್ಲೇನಾದರೂ ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದ್ದಾನೆಯೇ? ಅದನ್ನು ಸರಿಪಡಿಸಿ ಅಂತ ಕೇಳಿದ್ದರಾ ದೇವರು, ಇದನ್ನು ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ ಎಂದರು.

ಟಿಪ್ಪು ತನ್ನ ಆಡಳಿತದ ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಕನಸ್ಸಿಗೆ ಬರುತ್ತದೆ. ಆಗ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡ್ತಿರಾ?. ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರೋ ಉದಾಹರಣೆ ಇದೆ. ಆವರೂ ಕೂಡಾ ಬಂದು ಕೇಳಿದ್ರೆ ನೀವು ಕೊಡ್ತಿರಾ?. ಇದನ್ನು ಬಿಟ್ಟು ಜನರ ಬದುಕನ್ನು ನೋಡಿ ಎಂದು ನುಡಿದರು.

ಬಿಜೆಪಿಗೆ ತಿರುಗುಬಾಣ

ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಮೇಲ್ಮನೆ ಟಿಕೆಟ್ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ ಅವರು, ಯಾವುದೇ ತತ್ವದ ಕಥೆ ಹೇಳಿ‌ ಟಿಕೆಟ್ ಕೊಟ್ಟಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.ಇದು ಬಿಜೆಪಿಗೆ ತಿರುಗುಬಾಣವಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಬೇರೆ ಪಕ್ಷಕ್ಕೆ ಲಾಭ ನಷ್ಟದ ಪ್ರಶ್ನೆ ಇಲ್ಲ‌. ಆದರೆ ಸರ್ಕಾರದ ಮೇಲೆ ಇದು ಗಂಭೀರ ಪರಿಣಾಮ ಬೀರಬಹುದು ಎಂದು ಭವಿಷ್ಯ ನುಡಿದರು.

ಆಡಳಿತದ ಮೇಲು ಕೆಟ್ಟ ಪರಿಣಾಮ ಬೀರುವ ಲಕ್ಷಣ ಕಾಣುತ್ತಿದೆ. ಬಿಜೆಪಿಯಲ್ಲಿ ಗುಂಪುಗಾರಿಕೆಗೆ ಇನ್ನು ಹೆಚ್ಚು ಅವಕಾಶವಾಗಬಹುದು ಎಂದು ಹೇಳಿದರು. ಶಾಸಕರಾದ ಅಶ್ವಿನ್ ಕುಮಾರ, ವಿಧಾನ ಪರಿಷತ್ ಸದಸ್ಯ ಶ್ರೀಕಂಠೇಗೌಡ ಮುಂತಾದವರು ಹಾಜರಿದ್ದರು.

See also  ಕಾಂಗ್ರೆಸ್ ವಿರೋಧಿಸಿ ಬಿಜೆಪಿ ವತಿಯಿಂದ ರಾಜದ್ಯಾಂತ ಫೆ. 27 ಮತ್ತು 28  ರಂದು ಬೃಹತ್ ಪ್ರತಿಭಟನೆ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

Subscribe Newsletter

Get latest news karnataka updates on your email.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು