ಮೈಸೂರು: ಕೈಮಗ್ಗ ಮತ್ತು ಜವಳಿ ಇಲಾಖೆಯ ವತಿಯಿಂದ ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲೀಷ್‌ನ್ನು ಅಭ್ಯಸಿಸಿ ಉತ್ತೀರ್ಣರಾಗಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಜುಲೈ 11 ಕೊನೆಯ ದಿನವಾಗಿದೆ.
ಆಸಕ್ತ ಆಭ್ಯರ್ಥಿಗಳು 2022- 23 ನೇ ಸಾಲಿನ ಶೈಕ್ಷಣಿಕ ಅವಧಿಗೆ, ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಡಿಪ್ಲೋಮ ಕೋರ್ಸ್ ಕಲಿಕೆಗಾಗಿ , ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಗದಗ – ಬೆಟಗೇರಿ (ಕರ್ನಾಟಕ) -22 ಅಭ್ಯರ್ಥಿಗಳು, ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ (ತಮಿಳುನಾಡು) – 17 ಅಭ್ಯರ್ಥಿಗಳು, ಎಸ್.ಪಿ.ಕೆ.ಎಂ. ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ , ವೆಂಕಟಗಿರಿ (ನೆಲ್ಲೂರು ಜಿಲ್ಲೆ ಆಂಧ್ರಪ್ರದೇಶ) – 03 ಅಭ್ಯರ್ಥಿಗಳು ಮತ್ತು ಭಾರತೀಯ ಕೈಮಗ್ಗ ಸಂತ್ರಜ್ಞಾನ ಸಂಸ್ಥೆ , ಕಣ್ಣೂರು (ಕೇರಳ) -02 ಅಭ್ಯರ್ಥಿಗಳು ಹೀಗೆ ಒಟ್ಟು 44 ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಯ್ಕೆಯಾದ ಅಭ್ಯರ್ಥಿಗಳಿಗೆ ವ್ಯಾಸಾಂಗದ ಸಮಯದಲ್ಲಿ ಪ್ರತಿ ತಿಂಗಳೂ 2500 ರೂಗಳ ಶಿಷ್ಯವೇತನ ನೀಡಲಾಗುತ್ತಿದ್ದು, ಪುರುಷ ಅಭ್ಯರ್ಥಿಗಳಿಗೆ ವಸತಿ ನಿಲಯದ ಸೌಲಭ್ಯವನ್ನು ಹಣ ಪಾವತಿ ಆಧಾರದ ಮೇಲೆ ಕಲ್ಪಿಸಲಾಗುವುದು .
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಆಂಗ್ಲಭಾಷೆಯನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು 2022ರ ಜುಲೈ 01 ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳು 15 ರಿಂದ 23 ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು 15 ರಿಂದ 25 ರ ವಯೋಮಿತಿ ಹೊಂದಿರಬೇಕು.
ಅರ್ಹತಾ ಪರೀಕ್ಷೆಯಲ್ಲಿಗಳಿಸಿರುವ ಕ್ರೋಢೀಕೃತ ಅಂಕಗಳು ಮೆರಿಟ್ ಆಧಾರವಾಗಿದ್ದು, ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೊಮೊ ಸಂಸ್ಥೆಗಳಲ್ಲಿ ಕೋರ್ಸ್ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ ನರಸಾಪುರ, ಗದಗ – ಬೆಟಗೇರಿ ಪ್ರಾಂಶುಪಾಲರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ : 08372-297221 ಮೊ.ಸಂ:9449189170 ಅನ್ನು ಸಂಪರ್ಕಿಸಬಹುದು ಅಥವಾ ಮೈಸೂರು ನಗರದ ಸಿಟಿಐ ಕಟ್ಟಡ ನ್ಯೂ ಸಯ್ಯಾಜಿರಾವ್ ರಸ್ತೆ ಮೈಸೂರು -570001 ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರನ್ನು ಸಂಪರ್ಕಿಸಬಹುದು ಅಥವಾ ದೂರವಾಣಿ ಸಂಖ್ಯೆ: 0821-2441353, ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.