News Kannada
Saturday, April 01 2023

ಮೈಸೂರು

ಹುಲ್ಲೇಪುರ : ವಿದ್ಯುತ್ ತಂತಿ ಬಿದ್ದು ಹಸು ಸಾವು

Photo Credit : By Author

ಹನೂರು: ವಿದ್ಯುತ್ ಕಂಬ ಮುರಿದು ತಂತಿ ಹಸುವಿನ ಮೇಲೆ ಬಿದ್ದ ಪರಿಣಾಮ ಹಸು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ  ತಾಲೂಕಿನ ಹುಲ್ಲೇಪುರ ಗ್ರಾಮದ ಜಮೀನೊಂದರಲ್ಲಿ ನಡೆದಿದೆ.

ಮೃತಪಟ್ಟ ಹಸು ಮಹೇಶ್ ಆರಾಧ್ಯ ಎಂಬುವರಿಗೆ ಸೇರಿದ್ದು ಅದನ್ನು ಜಮೀನಿನಲ್ಲಿ ಮೇಯಲು ಕಟ್ಟಲಾಗಿದ್ದು, ಈ  ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ವಿದ್ಯುತ್ ತಂತಿ ಹಸುವಿನ ಮೇಲೆ ಬಿದ್ದ ಪರಿಣಾಮವಾಗಿ ಅದು ಸ್ಥಳದಲ್ಲಿಯೇ ಮೃತಪಟ್ಟಿದೆ.

ಈ ವಿದ್ಯುತ್ ಕಂಬ ಹಲವು ವರ್ಷಗಳಿಂದ ಮರದ ಕಂಬದಲ್ಲೇ ಇದ್ದು, ಇದನ್ನು ಬದಲಾಯಿಸಿ ಕಾಂಕ್ರಿಟ್ ಕಂಬ ಹಾಕುವಂತೆ ಒತ್ತಾಯಿಸಿ ಸೆಸ್ಕಾಂ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರು.

ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಈ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣವಾಗಿದೆ ಎಂದು ಸ್ಥಳೀಯರ  ಆರೋಪವಾಗಿದೆ. ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ಸೆಸ್ಕಾಂ ಅಧಿಕಾರಿಗಳು ಮತ್ತು ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

See also  ಅಕ್ರಮ ಬಯಲಿಗೆಳೆಯಲು ಕ್ರಮ:ಸಂಸದೆ ಸುಮಲತಾ
ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

177
Lava Kumar

Read More Articles

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು